ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆರ್‌ಎಸ್‌ಎಸ್‌ ಆಹ್ವಾನ: ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ! ಹೆಚ್​​ಡಿಕೆ   » Dynamic Leader
October 31, 2024
ರಾಜ್ಯ

ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆರ್‌ಎಸ್‌ಎಸ್‌ ಆಹ್ವಾನ: ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ! ಹೆಚ್​​ಡಿಕೆ  

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಆಹ್ವಾನ ಪತ್ರಿಕೆಯನ್ನು ತುಂಬು ಹೃದಯದಿಂದ ಸ್ವೀಕರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ ಅವರು “ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ (ಸ್ವಯಂ ಸೇವಕ ಸಂಘ-RSS) ಧನ್ಯವಾದಗಳು. ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ” ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಗಮನಾರ್ಹ.

Related Posts