ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ! » Dynamic Leader
October 31, 2024
ದೇಶ

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ!

“ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು, ಆರೆಸ್ಸೆಸ್ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದೆ. ಅದರೆ ರಾಷ್ಟ್ರಪತಿಯವರಿಗೆ ಆಹ್ವಾನವಿಲ್ಲ”

ಭಾರತೀಯ ಇತಿಹಾಸದ ಹೆಗ್ಗುರುತುಗಳಲ್ಲಿ ಒಂದು ಹಳೆಯ ಸಂಸತ್ತಿನ ಕಟ್ಟಡ. ಇಲ್ಲಿಯೇ ಭಾರತದ ಅನೇಕ ಪ್ರಸಿದ್ಧ ಮಸೂದೆಗಳನ್ನು ಅಂಗೀಕರಿಸಲಾಯಿತು. ಆದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಿರುವ ಸಂಸತ್ತಿನ ಬದಲಿಗೆ ಹೊಸ ಸಂಸತ್ತನ್ನು ನಿರ್ಮಿಸಿತು.

ಅದೂ ಕೂಡ ಕೊರೊನಾ ಅವಧಿಯಲ್ಲಿ ಜನರು ಸಂಕಷ್ಟದಲ್ಲಿದ್ದಾಗ 1200 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸಂಸತ್ ಭವನದ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲಾಗಿತ್ತು. ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದರು ಕೇಂದ್ರ ಸರ್ಕಾರ ಸೊಪ್ಪು ಹಾಕಲಿಲ್ಲ.

ತರುವಾಯ, ಹೊಸ ಸಂಸತ್ ಕಟ್ಟಡವನ್ನು ಕಳೆದ ಮೇ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು. ಆದರೆ, ಭಾರತ ಸರ್ಕಾರದ ಮುಖ್ಯಸ್ಥರಾಗಿರುವ ರಾಷ್ಟ್ರಪತಿಯನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಇದಕ್ಕೆ ಎಲ್ಲ ವಿರೋಧ ಪಕ್ಷಗಳು ಖಂಡನೆ ವ್ಯಕ್ತಪಡಿಸಿದವು. ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡಿಲ್ಲ ಎಂದು ಟೀಕಿಸಲಾಯಿತು.

ಈ ಹಿನ್ನಲೆಯಲ್ಲಿ, ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಪ್ರಮುಖ ರಾಜಕೀಯ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ರಾಷ್ಟ್ರಪತಿಯವರಿಗೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಿ ಆ ಜಾಗದಲ್ಲಿ ರಾಮಮಂದಿರವನ್ನು ನಿರ್ಮಿಸಲಾಗಿದೆ.

ಇದೇ ತಿಂಗಳು 22 ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು, ಆರೆಸ್ಸೆಸ್ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದೆ. ಅದರೆ ರಾಷ್ಟ್ರಪತಿಯವರಿಗೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ.

Related Posts