ಜಗದೀಶ್ ಶೆಟ್ಟರ್ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು: ದಿನೇಶ್ ಗುಂಡೂರಾವ್ » Dynamic Leader
October 31, 2024
ರಾಜಕೀಯ

ಜಗದೀಶ್ ಶೆಟ್ಟರ್ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು: ದಿನೇಶ್ ಗುಂಡೂರಾವ್

ಬೆಂಗಳೂರು: ಜಗದೀಶ್ ಶೆಟ್ಟರ್ BJPಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಪಕ್ಷ ಅವರಿಗೆ ವಿಧಾನಸಭಾ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತ್ತು‌. ಇದಕ್ಕಿಂತ ಹೆಚ್ಚಿನ ಗೌರವ ಕೊಡಲು ಇನ್ನೇನು ಸಾಧ್ಯ.? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈಗ ಅವಮಾನ ಮಾಡಿದ ಪಕ್ಷಕ್ಕೇ‌ ಮರಳಿ ಹೋಗಿದ್ದಾರೆ‌. ಶೆಟ್ಟರ್‌ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು. ಜಗದೀಶ್ ಶೆಟ್ಟರ್ BJP ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ. ಶೆಟ್ಟರ್‌ರಂತಹ ಸಾವಿರಾರು ನಾಯಕರನ್ನು ಸೃಷ್ಟಿಸುವ ತಾಕತ್ತು ಕಾಂಗ್ರೆಸ್‌ಗಿದೆ ಎಂದು ಹೇಳಿದ್ದಾರೆ.

ಶೆಟ್ಟರ್ ಹಿರಿಯ ರಾಜಕಾರಣಿ. ಆದರೆ ರಾಜಕೀಯ ಸಂದ್ಯಾಕಾಲದಲ್ಲಿ ತಮ್ಮನ್ನು ಅವಮಾನಿಸಿದ ಪಕ್ಷಕ್ಕೆ ಮರಳಿ ಸೇರಿಕೊಳ್ಳುವ ಮೂಲಕ ಶೆಟ್ಟರ್ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Related Posts