ವಿರೋಧ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಒಪ್ಪಿಕೊಳ್ಳುವಂತೆ ಚಿತ್ರಹಿಂಸೆ: ಸಂಸತ್ ದಾಳಿಯ ಅಪರಾಧಿಗಳು ನ್ಯಾಯಾಲಯದಲ್ಲಿ ಮಾಹಿತಿ! » Dynamic Leader
October 21, 2024
ದೇಶ

ವಿರೋಧ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಒಪ್ಪಿಕೊಳ್ಳುವಂತೆ ಚಿತ್ರಹಿಂಸೆ: ಸಂಸತ್ ದಾಳಿಯ ಅಪರಾಧಿಗಳು ನ್ಯಾಯಾಲಯದಲ್ಲಿ ಮಾಹಿತಿ!

ದೆಹಲಿ: ಕಳೆದ ವರ್ಷ ಡಿಸಂಬರ್ 13 ರಂದು ಸಂಸತ್ತಿನ ಲೋಕಸಭೆಯ ಸಭಾಂಗಣದಲ್ಲಿ ಇಬ್ಬರು ವ್ಯಕ್ತಿಗಳು ಇದ್ದಕ್ಕಿದ್ದಂತೆ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ಜಿಗಿದು ಬಣ್ಣದ ಹೊಗೆ ಬಾಂಬ್ ಸಿಡಿಸಿದ್ದು ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಇದರಿಂದಾಗಿ ಇಡೀ ಲೋಕಸಭೆಯ ಸಭಾಂಗಣ ಹೊಗೆ ವಲಯದಂತಿತ್ತು. ಆಗ ಸಂಸದರು ಲೋಕಸಭೆಯ ಭದ್ರತಾ ಸಿಬ್ಬಂದಿಯೊಂದಿಗೆ ಸೇರಿ ಅವರನ್ನು ಅಡ್ಡಗಟ್ಟಿ ಹಿಡಿದರು. ಇದೇ ವೇಳೆ ಮತ್ತಿಬ್ಬರು ಕೂಡ ಇದೇ ರೀತಿಯಲ್ಲಿ ಸಂಸತ್ ಆವರಣದ ಮೇಲೆ ದಾಳಿ ನಡೆಸಿದ್ದರು.

ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಸದರಿ ಪ್ರಕರಣದಲ್ಲಿ ಇನ್ನಿಬ್ಬರನ್ನೂ ಬಂಧಿಸಲಾಗಿತ್ತು. ದೆಹಲಿ ಪೊಲೀಸರು ಉಪಾ (ಯುಪಿಎ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಅವರನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹಾರ್ದಿಕ್ ಕೌರ್ ಮುಂದೆ ಇಂದು ಹಾಜರುಪಡಿಸಲಾಯಿತು. ಬಂಧಿತರಲ್ಲಿ ಐವರು (6ನೇ ಆರೋಪಿ ನೀಲಂ ಆಜಾದ್ ಹೊರತುಪಡಿಸಿ) ಮನೋರಂಜನ್, ಸಾಗರ್ ಶರ್ಮಾ, ಲಲಿತ್ ಝಾ, ಅಮೋಲ್ ಶಿಂಧೆ, ಮಹೇಶ್ ಕ್ವಾಟ್ ಮುಂತಾದವರು “ನಮ್ಮಿಂದ 70 ಖಾಲಿ ಪೇಪರ್‌ಗಳಿಗೆ ಬಲವಂತವಾಗಿ ಸಹಿ ಪಡೆಯಲಾಗಿದ್ದು, ವಿರೋಧ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಒಪ್ಪಿಕೊಳ್ಳುವಂತೆ ಪೊಲೀಸರು ತಮಗೆ ಚಿತ್ರಹಿಂಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಉತ್ತರ ನೀಡುವಂತೆ ಕೋರಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿದ್ದಾರೆ.

Related Posts