10 ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ "ಕಪ್ಪು ಪತ್ರ" ಹೊರಡಿಸಲು ಕಾಂಗ್ರೆಸ್ ನಿರ್ಧಾರ! » Dynamic Leader
October 31, 2024
ರಾಜಕೀಯ

10 ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ “ಕಪ್ಪು ಪತ್ರ” ಹೊರಡಿಸಲು ಕಾಂಗ್ರೆಸ್ ನಿರ್ಧಾರ!

ನವದೆಹಲಿ:  2014ಕ್ಕಿಂತ ಮೊದಲು ಕಾಂಗ್ರೆಸ್ ನೇತೃತ್ವದ ಒಕ್ಕೂಟ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಭಾರತದ ಆರ್ಥಿಕ ಸ್ಥಿತಿಯನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯ ಪ್ರಸ್ತುತ 10 ವರ್ಷಗಳ ಆಡಳಿತದೊಂದಿಗೆ ಹೋಲಿಸಿ ಸಂಸತ್ತಿಗೆ “ಶ್ವೇತ ಪತ್ರ” ತರಲು ಒಕ್ಕೂಟ ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನಗಳಲ್ಲಿ ಶ್ವೇತಪತ್ರ ಮಂಡಿಸಲಿದ್ದಾರೆ. ಅದರ ಮೇಲಿನ ಚರ್ಚೆಯ ನಂತರ ಮತದಾನಕ್ಕೆ ಬಿಡಲಾಗುತ್ತದೆ.

ಈ ಹಿನ್ನಲೆಯಲ್ಲಿ, 10 ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ “ಕಪ್ಪು ಪತ್ರ” ಹೊರಡಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ “ಕಪ್ಪು ಪತ್ರ” ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದರಿಂದಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಬಿರುಸಿನ ಚರ್ಚೆ ನಡೆಯುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

Related Posts