ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ (AIIMS ) ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಸಚಿವರಿಗೆ ಎರಡನೇ ಬಾರಿ ಮನವಿ! » Dynamic Leader
November 21, 2024
ರಾಜ್ಯ

ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ (AIIMS ) ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಸಚಿವರಿಗೆ ಎರಡನೇ ಬಾರಿ ಮನವಿ!

ನವದೆಹಲಿ: ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ (AIIMS ) ಸಂಸ್ಥೆಯನ್ನು ಸ್ಥಾಪಿಸುವ ಕುರಿತಂತೆ ದೆಹಲಿಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರನ್ನು  ಭೇಟಿ ಮಾಡಿ ಎರಡನೇ ಬಾರಿ ಮನವಿ ಸಲ್ಲಿಸಿದ್ದಾರೆ.

ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಬೇಕೆಂಬುದು ಇಲ್ಲಿನ ಜನರ ಬಹುದಿನಗಳ ಕನಸಾಗಿದ್ದು ಅದಕ್ಕಾಗಿ ನಡೆಸಲಾಗುತ್ತಿರುವ ಹೋರಾಟ 636 ದಿನಗಳಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ರಾಯಚೂರಿನಲ್ಲಿ ಸಂಸ್ಥೆಯ ಸ್ಥಾಪನೆಯ ಅಗತ್ಯತೆಯ ಕುರಿತು ಮನವರಿಕೆ ಮಾಡಿಕೊಡಲಾಯಿತು ಎಂದು ಹೇಳಿದ್ದಾರೆ.

ಕೇಂದ್ರ ಸಚಿವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಈ ಸಂಸತ್ ಅಧಿವೇಶನದಲ್ಲಿಯೇ ಈ ಬಗ್ಗೆ ಅಧಿಕೃತ ಘೋಷಣೆಯಾಗುವ ನಿರೀಕ್ಷೆ ನಮ್ಮದಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಉಪಸ್ಥಿತರಿದ್ದರು.

Related Posts