177 ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ!
ನವದೆಹಲಿ: ರೈತರ ಪ್ರತಿಭಟನೆ ಕುರಿತು ಪೋಸ್ಟ್ ಮಾಡಿದ್ದ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ಬಂಧಿಸಿದೆ.
ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ, ಸಾಲ ಮನ್ನಾ, ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವುದು ಸೇರಿದಂತೆ ನಾನಾ ಬೇಡಿಕೆಗಳಿಗೆ ಒತ್ತು ನೀಡಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳ ರೈತರು ದೆಹಲಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.
ತರುವಾಯ ಕೇಂದ್ರ ಸರ್ಕಾರ ಹಾಗೂ ರೈತರೊಂದಿಗೆ ನಡೆಸಿದ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಾಣಲಿಲ್ಲ. ನಾಳೆ (ಫೆಬ್ರವರಿ 21) ದೆಹಲಿ ಕಡೆಗೆ ರ‍್ಯಾಲಿಯನ್ನು ಪ್ರಾರಂಭಿಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ.
ಈ ಹಿನ್ನಲೆಯಲ್ಲಿ, ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 42 ‘ಎಕ್ಸ್’ ಸಾಮಾಜಿಕ ಮಾಧ್ಯಮ ಖಾತೆಗಳಗಳು, 35 ಫೇಸ್‌ಬುಕ್ ಖಾತೆಗಳು ಮತ್ತು 14 ಇನ್‌ಸ್ಟಾಗ್ರಾಮ್ ಖಾತೆಗಳು ಸೇರಿದಂತೆ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂದಿಸಲಾಗಿದೆ.
ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಯೂ ಈ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.