ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತೀಯ ಮೌಲ್ಯಗಳ ಮೇಲಿನ ದಾಳಿ: ಅಸಾದುದ್ದೀನ್ ಓವೈಸಿ!
ಹೈದರಾಬಾದ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೈದರಾಬಾದ್‌ನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದರು. ಶುಕ್ರವಾರ ಬೆಂಗಳೂರಿನ ರಾಮೇಶ್ವರಂ ಕೆಫೆ ಶಾಖೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸಾಂತ್ವನ ಹೇಳುವ ಪ್ರಯತ್ನವಾಗಿ ಅವರು ಅಲ್ಲಿಗೆ ಭೇಟಿ ನೀಡಿದ್ದರು.
ಸ್ಫೋಟವನ್ನು ಖಂಡಿಸಿರುವ ಅಸಾದುದ್ದೀನ್ ಓವೈಸಿ, ‘ಈ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಹೇಳಿದ್ದಾರೆ. ಕೆಫೆಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳ ರಾಮೇಶ್ವರಂ ಹೆಸರನ್ನು ಇಡಲಾಗಿದೆ ಎಂದು ಅವರು ಸ್ಮರಿಸಿದರು.
“ಹೈದರಾಬಾದ್‌ನ ರಾಮೇಶ್ವರಂ ಕೆಫೆಗೆ ಒಗ್ಗಟ್ಟನ್ನು ಪ್ರದರ್ಶಿಸಿದ್ದೇವೆ. ಆಹಾರವು ರುಚಿಯಾಗಿತ್ತು ಮತ್ತು ಕೆಫೆಗೆ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳದ ಹೆಸರನ್ನು ಇಡಲಾಗಿದೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯವಾಗಿದೆ. ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿಯಾಗಿದೆ” ಎಂದು ಹೇಳಿದ್ದಾರೆ. ಮತ್ತು ಅವರು ಕೆಫೆಗೆ ಭೇಟಿ ನೀಡಿದ ಕೆಲವು ಫೋಟೋಗಳನ್ನು ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಹಂಚಿಕೊಂಡಿದ್ದಾರೆ.