ನವದೆಹಲಿ: ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್‌ಗೆ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಬೆಂಬಲ ಸಿಕ್ಕಿದೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ಐತಿಹಾಸಿಕವಾಗಿ ಕಾಂಗ್ರೆಸ್‌ಗೆ ಸಂಬಂಧಿಸಿದ ಕ್ಷೇತ್ರವಾದ ಅಮೇಠಿಯ ನಿವಾಸಿಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಮೇಠಿಯ ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಶೀರ್ವದಿಸುತ್ತಾರೆ.
ಅಮೇಠಿಯಲ್ಲಿ ಗಾಂಧಿ ಕುಟುಂಬ ಸ್ಪರ್ಧಿಸುವುದು ನಮಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇಠಿ ಕ್ಷೇತ್ರದಲ್ಲಿ 19 ಲಕ್ಷ ಜನರಿಗೆ ಪಡಿತರ ಪದಾರ್ಥಗಳನ್ನು ವಿತರಿಸುತ್ತಿದ್ದಾರೆ.
ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್‌ಗೆ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಬೆಂಬಲ ಸಿಕ್ಕಿದೆ ಎಂಬ ಮಾಹಿತಿ ನಮಗೆ ಬಂದಿದೆ” ಎಂದು ಹೇಳಿದ್ದಾರೆ.
 
  
 

 
  
 










 
 
