ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಗೆ ಮೊರೆ!
ನವದೆಹಲಿ: ಆಪಾದಿತ ಅಬಕಾರಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನವಾಗಿದ್ದ ಕೇಜ್ರಿವಾಲ್ ಅವರ ಬಂಧನವನ್ನು ದೆಹಲಿ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ಗಳನ್ನು ನಿರಾಕರಿಸಿ, ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿತ್ತು.
ಈ ಹಿನ್ನಲೆಯಲ್ಲಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಕೇಜ್ರಿವಾಲ್ ಬಂಧನವು ಆ ಪಕ್ಷ ಸ್ವಲ್ಪ ಮಟ್ಟಿಗೆ ಹಿನ್ನಡೆಯಾದೆ.