• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು: ಸಿದ್ದರಾಮಯ್ಯ

by Dynamic Leader
05/05/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಳಗಾವಿ: ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್.ಎಸ್.ಎಸ್ ಹೇಳುತ್ತಿದ್ದು, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರು ನೀಡಿರುವ ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ, ಸಮ ಸಮಾಜದ ಗ್ಯಾರಂಟಿ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.

ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ನಮ್ಮ ಸರ್ಕಾರ ಅಕ್ಕಿ ಬದಲು ಕೆಜಿಗೆ 34 ರೂ.ನಂತೆ 5 ಕೆ.ಜಿಗೆ 170 ರೂ. ಹಾಗೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ ಎಂದು ಹೇಳಿದರು.

ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2,000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು.

ನಿರುದ್ಯೋಗಿ ಪದವೀಧರರಿಗೆ 2 ವರ್ಷಗಳವರೆಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದವರಿಗೆ ತಲಾ 2000 ರೂ. ನೀಡುವ ಯುವನಿಧಿ ಯೋಜನೆಯನ್ನು ವಿವೇಕಾನಂದರ ಜನ್ಮದಿನಾಚರಣೆಯಂದು ಜಾರಿ ಮಾಡಲಾಯಿತು. ಈ ಅವಧಿಯಲ್ಲಿ ಬೇಡಿಕೆಯಿರುವ ತರಬೇತಿಯನ್ನು ಯುವಜನರಿಗೆ ನೀಡಿ, ಅವರಿಗೆ ಉದ್ಯೋಗ ದೊರೆಯಲು ಶಕ್ತಿ ತುಂಬಲಾಗುವುದು.

ಹಿಂದೆಯೂ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೆವು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದು ಜನರಿಗೆ ವಿಶ್ವಾಸ ಬಂದಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ. ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52,009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೇವೆ.

ನಮ್ಮ ಸರ್ಕಾರದ ಬಜೆಟ್ ಗಾತ್ರ 3.71 ಲಕ್ಷ ಕೋಟಿ, ಬೊಮ್ಮಾಯಿಯವರ ಬಜೆಟ್ 23-24ರಲ್ಲಿ 3.09 ಲಕ್ಷ ಕೋಟಿ. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಜನರಿಗೆ ಕಾಂಗ್ರೆಸ್ ನ ಮೇಲೆ ವಿಶ್ವಾಸ ಕಡಿಮೆಯಾಗಲಿ ಎಂದು ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಗ್ಯಾರಂಟಿ ಯೋಜನೆಗಳನ್ನು ಕಂಡರೆ ಆಗುವುದಿಲ್ಲ. ಅದನ್ನು ನಿಲ್ಲಿಸಬೇಕೆಂಬುದು ಅವರ ಪಿತೂರಿಯಾಗಿದೆ. ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆ ಅವರಿಗೆ ಮುಖ್ಯವಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿ ಅವರು ದೇಶದ ಉದ್ದಗಲಕ್ಕೂ ಪಾದಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದು ಭಾರತ್ ಜೋಡೋ ಯಾತ್ರೆಗಳನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ಮೊದಲ ಉದ್ಯೋಗದ ಜೊತೆಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದರು.

ನರೇಂದ್ರ ಮೋದಿ ಅವರು ರೈತರ ಸಾಲ ಮನ್ನಾ ಮಾಡಲಿಲ್ಲ. ಸ್ವಾಮಿನಾಥನ್ ವರದಿ ಜಾರಿ ಮಾಡಲಿಲ್ಲ. ಆದರೆ ಅಂಬಾನಿ, ಅದಾನಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ. ಸಂಸದ ತೇಜಸ್ವಿ ಸೂರ್ಯ, ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ಒಳಿತಲ್ಲ ಎಂದಿದ್ದಾರೆ. ರೈತರ ಸಾಲ ಮನ್ನಾ ಮಾಡಬಾರದೆಂಬುದು ಬಿಜೆಪಿ ಅವರ ಹಿಡೆನ್ ಅಜೆಂಡಾ ಎಂದು ಕಿಡಿಕಾರಿದರು.

ಅವಕಾಶ ವಂಚಿತರಿಗೆ ನ್ಯಾಯ ನೀಡಲು, ಸರ್ಕಾರದ ಅನುಕೂಲ ದೊರಕಿಸಿಕೊಡಲು ಜಾತಿಗಣತಿ ಅತಿ ಮುಖ್ಯ. ಪಾಲುದಾರಿಕೆ ನ್ಯಾಯ, ಶ್ರಮಿಕ ನ್ಯಾಯ ಯೋಜನೆ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಹೀಗೆ ದೇಶಾದ್ಯಂತ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತದೆ. ಆದರೆ ರಾಜ್ಯಕ್ಕೆ 100 ರೂ.ಗೆ ಕೇವಲ 13 ರೂ. ಮರಳಿ ಬರುತ್ತಿದೆ. 11,495 ಕೋಟಿ ರೂ.ಗಳನ್ನು 15ನೇ ಹಣಕಾಸು ಆಯೋಗ ನಿರ್ಧರಿಸಿತ್ತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ತಿಳಿಸಿದ್ದರೂ ಅವರು ಮಾಡಲಿಲ್ಲ. ರಾಜ್ಯಕ್ಕಾಗಿರುವ ಇಷ್ಟೆಲ್ಲಾ ಅನ್ಯಾಯವನ್ನು ರಾಜ್ಯದ 25 ಸಂಸದರಲ್ಲಿ ಯಾರೊಬ್ಬರೂ ಧ್ವನಿ ಎತ್ತಲಿಲ್ಲ. ಮೋದಿಯವರ ಎದುರು ನಿಂತು ಮಾತನಾಡಲು ಹೆದರುತ್ತಾರೆ. ಆದರೆ ಡಿ.ಕೆ.ಸುರೇಶ್ ಮಾತ್ರ ಪ್ರಶ್ನಿಸಿದ್ದರು.

ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 23 ರಂದು ಬರಪರಿಹಾರಕ್ಕೆ ಮನವಿ ಮಾಡಲಾಗಿದೆ. ರೂ.18,172 ಕೋಟಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಕೇಳಿದೆವು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. ಕೇಂದ್ರ ತಂಡ ಬರಪರಿಹಾರ ಅಧ್ಯಯನ ಮಾಡಿದ್ದಾರೆ. ರಾಜ್ಯದ ಮಂತ್ರಿಗಳು, ನಾನು ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೋರಿದರೂ ಮನ್ನಣೆ ಸಿಗಲಿಲ್ಲ. ಆದ್ದರಿಂದ ಮನವಿ ಸಲ್ಲಿಸಿದ 7 ತಿಂಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆವು. ಸುಪ್ರೀಂ ಕೋರ್ಟ್ ಚಾಟಿ ಬೀಸುವ ತನಕ ಒಂದು ರೂ. ಕೊಡಲಿಲ್ಲ. ರೂ.3,454 ಕೋಟಿ ನಂತರ ಕೊಟ್ಟರು.

ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

Tags: BelagaviINDIA AllianceParliament Election 2024Press MeetSiddaramaiahಇಂಡಿಯಾ ಮೈತ್ರಿಕೂಟಜಂಟಿ ಪತ್ರಿಕಾಗೋಷ್ಠಿಬೆಳಗಾವಿಸಂಸತ್ ಚುನಾವಣೆ 2024ಸಿದ್ದರಾಮಯ್ಯ
Previous Post

ಮೋದಿ ನಾಪತ್ತೆ: ಪೋಸ್ಟರ್ ಅಂಟಿಸಿದ ಮಣಿಪುರದ ಜನ!

Next Post

ಮತ್ತೆ ವಿವಾದ ಎಬ್ಬಿಸಿದ ನೇಪಾಳ; ಭಾರತೀಯ ಪ್ರಾಂತ್ಯಗಳ ನಕ್ಷೆಯೊಂದಿಗೆ ಹೊಸ ಕರೆನ್ಸಿ!

Next Post

ಮತ್ತೆ ವಿವಾದ ಎಬ್ಬಿಸಿದ ನೇಪಾಳ; ಭಾರತೀಯ ಪ್ರಾಂತ್ಯಗಳ ನಕ್ಷೆಯೊಂದಿಗೆ ಹೊಸ ಕರೆನ್ಸಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಪ್ರಧಾನಿ ನರೇಂದ್ರ ಮೋದಿ ಘೋಷಣೆ ಕೂಗುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಪರಿಹಾರಗಳನ್ನು ನೀಡಿಲ್ಲ" ಎಂದು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಘೋಷಣೆ ಕೂಗುವುದರಲ್ಲಿ ನಿಪುಣರು, ಪರಿಹಾರ ಕಂಡುಕೊಳ್ಳುವುದರಲ್ಲಿ ಅಲ್ಲ: ರಾಹುಲ್ ಗಾಂಧಿ

21/06/2025
ಇರಾನ್-ಇಸ್ರೇಲ್ ಯುದ್ಧದಲ್ಲಿ ಹಸ್ತಕ್ಷೇಪವನ್ನು ಎರಡು ವಾರಗಳ ಕಾಲ ವಿಳಂಬಗೊಳಿಸುವ ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳ ಕುರಿತು ಹೊಸ ವಿವರಗಳು ಹೊರಬಿದ್ದಿವೆ.

ಇರಾನ್-ಇಸ್ರೇಲ್ ಯುದ್ಧದಲ್ಲಿ ಟ್ರಂಪ್ ಅವರ 2 ವಾರಗಳ ಕಾಯುವಿಕೆಯ ಅರ್ಥವೇನು? ಹಿಂದಿನ ಕಾರಣಗಳು ಬಹಿರಂಗ!

20/06/2025
ಹೊಸದಾಗಿ ಖರೀದಿಸುವ ಎಲ್ಲಾ ದ್ವಿಚಕ್ರ ವಾಹನಗಳೊಂದಿಗೆ ಎರಡು ಹೆಲ್ಮೆಟ್ಗಳನ್ನು ಒದಗಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶಿಸಿದೆ.

ಹೊಸ ದ್ವಿಚಕ್ರ ವಾಹನಗಳಿಗೆ ಎರಡು ಹೆಲ್ಮೆಟ್ ಕಡ್ಡಾಯ: ಕೇಂದ್ರ ಸರ್ಕಾರ!

20/06/2025
ಭಾರತ ಪ್ರಧಾನಿ ಮೋದಿಗೆ ಸಂಸ್ಕೃತ ವ್ಯಾಕರಣ ಪುಸ್ತಕ ಉಡುಗೊರೆಯಾಗಿ ನೀಡಿದ ಕ್ರೊಯೇಷಿಯಾದ ಪ್ರಧಾನಿ ಪ್ಲೆಂಕೋವಿಕ್.

ಮೋದಿಗೆ ಸಂಸ್ಕೃತ ವ್ಯಾಕರಣ ಪುಸ್ತಕ ಉಡುಗೊರೆಯಾಗಿ ನೀಡಿದ ಕ್ರೊಯೇಷಿಯಾದ ಪ್ರಧಾನಿ!

19/06/2025

Recent News

ಪ್ರಧಾನಿ ನರೇಂದ್ರ ಮೋದಿ ಘೋಷಣೆ ಕೂಗುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಪರಿಹಾರಗಳನ್ನು ನೀಡಿಲ್ಲ" ಎಂದು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಘೋಷಣೆ ಕೂಗುವುದರಲ್ಲಿ ನಿಪುಣರು, ಪರಿಹಾರ ಕಂಡುಕೊಳ್ಳುವುದರಲ್ಲಿ ಅಲ್ಲ: ರಾಹುಲ್ ಗಾಂಧಿ

21/06/2025
ಇರಾನ್-ಇಸ್ರೇಲ್ ಯುದ್ಧದಲ್ಲಿ ಹಸ್ತಕ್ಷೇಪವನ್ನು ಎರಡು ವಾರಗಳ ಕಾಲ ವಿಳಂಬಗೊಳಿಸುವ ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳ ಕುರಿತು ಹೊಸ ವಿವರಗಳು ಹೊರಬಿದ್ದಿವೆ.

ಇರಾನ್-ಇಸ್ರೇಲ್ ಯುದ್ಧದಲ್ಲಿ ಟ್ರಂಪ್ ಅವರ 2 ವಾರಗಳ ಕಾಯುವಿಕೆಯ ಅರ್ಥವೇನು? ಹಿಂದಿನ ಕಾರಣಗಳು ಬಹಿರಂಗ!

20/06/2025
ಹೊಸದಾಗಿ ಖರೀದಿಸುವ ಎಲ್ಲಾ ದ್ವಿಚಕ್ರ ವಾಹನಗಳೊಂದಿಗೆ ಎರಡು ಹೆಲ್ಮೆಟ್ಗಳನ್ನು ಒದಗಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶಿಸಿದೆ.

ಹೊಸ ದ್ವಿಚಕ್ರ ವಾಹನಗಳಿಗೆ ಎರಡು ಹೆಲ್ಮೆಟ್ ಕಡ್ಡಾಯ: ಕೇಂದ್ರ ಸರ್ಕಾರ!

20/06/2025
ಭಾರತ ಪ್ರಧಾನಿ ಮೋದಿಗೆ ಸಂಸ್ಕೃತ ವ್ಯಾಕರಣ ಪುಸ್ತಕ ಉಡುಗೊರೆಯಾಗಿ ನೀಡಿದ ಕ್ರೊಯೇಷಿಯಾದ ಪ್ರಧಾನಿ ಪ್ಲೆಂಕೋವಿಕ್.

ಮೋದಿಗೆ ಸಂಸ್ಕೃತ ವ್ಯಾಕರಣ ಪುಸ್ತಕ ಉಡುಗೊರೆಯಾಗಿ ನೀಡಿದ ಕ್ರೊಯೇಷಿಯಾದ ಪ್ರಧಾನಿ!

19/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ನರೇಂದ್ರ ಮೋದಿ ಘೋಷಣೆ ಕೂಗುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಪರಿಹಾರಗಳನ್ನು ನೀಡಿಲ್ಲ" ಎಂದು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಘೋಷಣೆ ಕೂಗುವುದರಲ್ಲಿ ನಿಪುಣರು, ಪರಿಹಾರ ಕಂಡುಕೊಳ್ಳುವುದರಲ್ಲಿ ಅಲ್ಲ: ರಾಹುಲ್ ಗಾಂಧಿ

21/06/2025
ಇರಾನ್-ಇಸ್ರೇಲ್ ಯುದ್ಧದಲ್ಲಿ ಹಸ್ತಕ್ಷೇಪವನ್ನು ಎರಡು ವಾರಗಳ ಕಾಲ ವಿಳಂಬಗೊಳಿಸುವ ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳ ಕುರಿತು ಹೊಸ ವಿವರಗಳು ಹೊರಬಿದ್ದಿವೆ.

ಇರಾನ್-ಇಸ್ರೇಲ್ ಯುದ್ಧದಲ್ಲಿ ಟ್ರಂಪ್ ಅವರ 2 ವಾರಗಳ ಕಾಯುವಿಕೆಯ ಅರ್ಥವೇನು? ಹಿಂದಿನ ಕಾರಣಗಳು ಬಹಿರಂಗ!

20/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS