ಮುಸ್ಲಿಮರ ಕುರಿತ ಕರ್ನಾಟಕ ಬಿಜೆಪಿಯ ವಿಡಿಯೋವನ್ನು ಎಕ್ಸ್ ಜಾಲತಾಣದಿಂದ ತೆಗೆದುಹಾಕಿ: ಚುನಾವಣಾ ಆಯೋಗ » Dynamic Leader
November 21, 2024
ರಾಜಕೀಯ

ಮುಸ್ಲಿಮರ ಕುರಿತ ಕರ್ನಾಟಕ ಬಿಜೆಪಿಯ ವಿಡಿಯೋವನ್ನು ಎಕ್ಸ್ ಜಾಲತಾಣದಿಂದ ತೆಗೆದುಹಾಕಿ: ಚುನಾವಣಾ ಆಯೋಗ

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ!

ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ ಪೇಜ್ ನಲ್ಲಿ ಅನಿಮೇಟೆಡ್ ವಿಡಿಯೋವೊಂದನ್ನು ಹಾಕಲಾಗಿದೆ. ಆ ಅನಿಮೇಟೆಡ್ ವಿಡಿಯೋದಲ್ಲಿ, SC, ST ಮತ್ತು ಹಿಂದುಳಿದ ವರ್ಗಗಳನ್ನು (OBC) ಒಂದು ಬುಟ್ಟಿಯಲ್ಲಿ “ಮೊಟ್ಟೆ”ಯಂತೆ ಚಿತ್ರಿಸಲಾಗಿದೆ. ಇದು ಮೀಸಲಾತಿಯನ್ನು ಸೂಚಿಸುತ್ತದೆ. ಈ ಮೀಸಲಾತಿ ಬುಟ್ಟಿಗೆ ರಾಹುಲ್ ಗಾಂಧಿ ಮುಸ್ಲಿಂ ಸಮುದಾಯದ ಮತ್ತೊಂದು ದೊಡ್ಡ ಸೈಜಿನ “ಮೊಟ್ಟೆ”ಯನ್ನು ತಂದು ಹಾಕುತ್ತಾರೆ. ಕಾಂಗ್ರೆಸ್ ನಾಯಕರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು, ಮತ್ತು ಅವರ ಮೀಸಲಾತಿ ಕೋಟಾವನ್ನು ಸಹ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂಬಂತೆ ಬಿಂಬಿಸಲಾಗಿದೆ.

ಕರ್ನಾಟಕ ಬಿಜೆಪಿಯು ತಮ್ಮ ಅಧಿಕೃತ ಎಕ್ಸ್ ಪೇಜ್ ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಧಾರ್ಮಿಕ ಸಂಘರ್ಷವನ್ನು ಸೃಷ್ಟಿಸುವ ಸಲುವಾಗಿ, ಅನಿಮೇಟೆಡ್ ವಿಡಿಯೋವನ್ನು ಪ್ರಕಟಿಸಿದ್ದಕ್ಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತು.

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲದೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ ಎಂದೂ ಕಾಂಗ್ರೆಸ್ ಪಕ್ಷ ಪ್ರತಿಪಾದಿಸಿತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಜಾಲತಾಣ ಉಸ್ತುವಾರಿ ಅಮಿತ್ ಮಾಳವೀಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತೀಯ ಘರ್ಷಣೆ ಹಾಗೂ ದ್ವೇಷ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಕರ್ನಾಟಕ ಬಿಜೆಪಿಯ ಎಕ್ಸ್ ಪೇಜ್ ನಲ್ಲಿ ಮುಸ್ಲಿಮರ ಬಗ್ಗೆ ಪ್ರಕಟಿಸಿರುವ ಅನಿಮೇಟೆಡ್ ವಿಡಿಯೋವನ್ನು ತಕ್ಷಣ ತೆಗೆದು ಹಾಕುವಂತೆ ಚುನಾವಣಾ ಆಯೋಗ ಎಕ್ಸ್ ಜಾಲತಾಣ ಕಂಪನಿಗೆ ಸೂಚಿಸಿದೆ.

Related Posts