ಪ್ರತಿಯೊಬ್ಬ ಬಡ ಹೆಣ್ಣು ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಲು ಕಾಯುತ್ತಿದ್ದಾಳೆ: ರಾಹುಲ್ ಗಾಂಧಿ
ನವದೆಹಲಿ: ಮಹಾಲಕ್ಷ್ಮಿ ಯೋಜನೆಯಡಿ ಪ್ರತಿಯೊಬ್ಬ ಬಡ ಮಹಿಳೆ ಸ್ವಂತ ಕಾಲಿನ ಮೇಲೆ ನಿಲ್ಲಲು 1 ಲಕ್ಷ ರೂ.ಗಾಗಿ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಹೇಳಿದ್ದಾರೆ.
ಈ ಸಂಬಂಧ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯೊಂದನ್ನು ಪ್ರಕಟಿಸಿರುವ ರಾಹುಲ್ ಗಾಂಧಿ, “ನೋಟು ಅಮಾನ್ಯೀಕರಣದಿಂದಾಗಿ, ಪ್ರಧಾನಿ ಮೋದಿ ಜನರನ್ನು ಸಂಕಷ್ಟಕ್ಕೆ ದೂಡಿದರು. ನಂತರ, ಆಕ್ಸಿಜನ್ ಸಿಲಿಂಡರ್ ಗಳಿಗಾಗಿ ಜನರು ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿ, ಕಣ್ಣೀರಿಗೆ ಕಾರಣರಾದರು. ಪ್ರಧಾನಿ ಮೋದಿಯವರು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದ ಯುವಕರನ್ನು ಸಿಲುಕಿಸಿ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿದರು.
ಕಾಂಗ್ರೆಸ್ ಆಡಳಿತದಲ್ಲಿ ಮಹಾಲಕ್ಷ್ಮಿ ಯೋಜನೆಯಡಿ ಪ್ರತಿಯೊಬ್ಬ ಬಡ ಮಹಿಳೆಯೂ 1 ಲಕ್ಷ ರೂ.ಗಳನ್ನು ಪಡೆದು ಸ್ವಂತ ಕಾಲಿನ ಮೇಲೆ ನಿಲ್ಲಲು ಕಾಯುತ್ತಿದ್ದಾರೆ. ಮಹಾಲಕ್ಷ್ಮಿ ಯೋಜನೆ ಬಡ ಕುಟುಂಬಗಳ ಜೀವನಾಡಿಯಾಗಲಿದೆ” ಎಂದು ಹೇಳಿದ್ದಾರೆ.