ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ!
ಬೆಂಗಳೂರು: ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ.
ಈ ಸಂದರ್ಭದಲ್ಲಿ, ಹಜ್ ಸಚಿವರಾದ ರಹೀಂ ಖಾನ್, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಹಾಗೂ ಶಾಸಕರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಹಜ್ ಇಸ್ಲಾಂ ಧರ್ಮದ ಐದು ಪವಿತ್ರ ಆಚರಣೆಗಳಲ್ಲಿ ಮೆಕ್ಕಾವೂ ಒಂದಾಗಿದೆ. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಯಾತ್ರಾರ್ಥಿಗಳಿಗೆ ಇದು ಅಧ್ಯಾತ್ಮಿಕ ಅನುಭವವಾಗಿದ್ದು, ಇಲ್ಲಿಗೆ ಭೇಟಿ ನೀಡಿದರೆ ಪಾಪಗಳು ಕಳೆದು ಹೋಗಲಿವೆ ಎಂಬ ನಂಬಿಕೆಯನ್ನು ಹೊಂದಿದ್ದಾರೆ. ಮೆಕ್ಕಾಗೆ ಭೇಟಿ ನೀಡುವುದರಿಂದ ದೇವರಿಗೆ ನಾವು ಮತ್ತಷ್ಟು ಹತ್ತಿರ ಆಗುತ್ತೇವೆ ಎಂಬ ಭಾವನೆ ಮುಸ್ಲಿಂ ಶ್ರದ್ಧಾಳುಗಳದ್ದಾಗಿದೆ.
ಹಜ್ ಯಾತ್ರೆಯು ಪ್ರಪಂಚದಾದ್ಯಂತದ ಮುಸ್ಲಿಮರನ್ನು ಸೌದಿ ಅರೇಬಿಯಾದ ಮೆಕ್ಕಾಕ್ಕೆ ಭೇಟಿ ನೀಡುವಂತೆ ಮಾಡುತ್ತದೆ. ಮೆಕ್ಕಾಕ್ಕೆ ಭೇಟಿ ನೀಡುವ ಮೂಲಕ ಮುಸ್ಲಿಮರು ಪ್ರವಾದಿ ಮುಹಮ್ಮದ್ ಅವರ ಹೆಜ್ಜೆಗಳನ್ನು ಕಾಣಲು ಬಯಸುತ್ತಾರೆ. ಇಬ್ರಾಹಿಂ ಮತ್ತು ಇಸ್ಮಾಯಿಲ್ ಅಥವಾ ಅಬ್ರಹಾಂ ಮತ್ತು ಇಸ್ಮಾಯಿಲ್ ಅವರ ಪ್ರಯಾಣವನ್ನು ಕಣ್ತುಂಬಿಕೊಳ್ಳಲು ಬಯಸುತ್ತಾರೆ.