ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದ ಸ್ವತಂತ್ರ ಅಭ್ಯರ್ಥಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!
“ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ!”
ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ವಿಶಾಲ್ ಪಾಟೀಲ್ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಾಳುತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ವಿಶಾಲ್ ಪಾಟೀಲ್ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಸಂಸದರ ಬಲ 100ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಂಡಿಯಾ ಮೈತ್ರಿಕೂಟದ ಬಲ 233ಕ್ಕೆ ಏರಿಕೆಯಾಗಿದೆ.
ಪಾಟೀಲ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ವಿಶ್ವಾಸಘಾತುಕತನ, ದುರಹಂಕಾರ ಮತ್ತು ವಿಭಜನೆಯ ರಾಜಕಾರಣವನ್ನು ಸೋಲಿಸಿದರು. ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾಂಗ್ಲಿಯಿಂದ ಆಯ್ಕೆಯಾದ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದನ್ನು ಸ್ವಾಗತಿಸುತ್ತೇನೆ. ಸಂವಿಧಾನ ಚಿರಾಯುವಾಗಲಿ!