ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ UAPA ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಅನುಮೋಧನೆ! » Dynamic Leader
November 24, 2024
ದೇಶ

ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ UAPA ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಅನುಮೋಧನೆ!

ನವದೆಹಲಿ: 14 ವರ್ಷಗಳ ಹಿಂದೆ ಖ್ಯಾತ ಲೇಖಕಿ ಅರುಂಧತಿರಾಯ್ ಮಾಡಿದ ವಿವಾದಾತ್ಮಕ ಭಾಷಣದ ವಿಚಾರಣೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದ್ದಾರೆ.

ಪ್ರಸಿದ್ಧ ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿರುವ ಅರುಂಧತಿರಾಯ್, 2010ರಲ್ಲಿ ದೆಹಲಿಯಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಕಾಶ್ಮೀರ ಸಮಸ್ಯೆ ಮತ್ತು ಮಾವೋವಾದಿಗಳ ಪರವಾದ ನಿಲುವಿನ ಕುರಿತು ಮಾತನಾಡಿದ್ದರು. ಅವರ ಮಾತು ರಾಷ್ಟ್ರಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು.

ಈ ಸಂಬಂಧ ಅರುಂಧತಿರಾಯ್ ಹಾಗೂ ಪ್ರೊಫೆಸರ್ ಸೌಕತ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ದೆಹಲಿ ಮೆಟ್ರೋಪಾಲಿಟನ್ ಕೋರ್ಟ್ ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಈ ಹಿನ್ನೆಲೆಯಲ್ಲಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಇಂದು ಅನುಮೋದನೆ ನೀಡಿದ್ದಾರೆ.

Related Posts