• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೋದಿ ಸರ್ಕಾರ ತಂದ 3 ಹೊಸ ಕ್ರಿಮಿನಲ್ ಕಾನೂನುಗಳು ನಾಳೆಯಿಂದ ಜಾರಿ!

by Dynamic Leader
30/06/2024
in ದೇಶ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ನಾಳೆ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ. ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಸೇರಿದಂತೆ ಬ್ರಿಟಿಷ್ ಕಾಲದ ಕಾನೂನುಗಳನ್ನು ಬದಲಿಸಿ, ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ ಮುಂತಾದ 3 ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು.

ರಾಷ್ಟ್ರಪತಿಗಳ ಒಪ್ಪಿಗೆಯ ನಂತರ ಕಳೆದ ಡಿಸೆಂಬರ್‌ನಲ್ಲಿ ಕೇಂದ್ರ ಸರ್ಕಾರದ ಗೆಜೆಟ್‌ನಲ್ಲಿ ಇದನ್ನು ಪ್ರಕಟಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಎಲ್ಲಾ ಮೂರು ಹೊಸ ಕ್ರಿಮಿನಲ್ ಕಾನೂನುಗಳು ನಾಳೆಯಿಂದ (ಸೋಮವಾರ) ಜಾರಿಗೆ ಬರಲಿವೆ. ಹೊಸ ಕ್ರಿಮಿನಲ್ ಕಾನೂನುಗಳು ತನಿಖೆ ಮತ್ತು ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ, ದೇಶದ ಪ್ರತಿ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣಗಳನ್ನು ದಾಖಲಿಲು ಅಸ್ತಿತ್ವದಲ್ಲಿರುವ ಅಪರಾಧ ಟ್ರ್ಯಾಕಿಂಗ್ ಸಿಸ್ಟಮ್ (CCTNS) ಬಳಕೆಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRP) 23 ಕಾರ್ಯಾಚರಣೆಯ ನವೀಕರಣಗಳನ್ನು ಪರಿಚಯಿಸಿದೆ.

ಹೊಸ ಕಾರ್ಯವಿಧಾನಗಳಿಗೆ ಮತ್ತು ಸುಗಮ ಪರಿವರ್ತನೆಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎನ್‌ಸಿಆರ್‌ಪಿ ತಾಂತ್ರಿಕ ನೆರವು ಒದಗಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5,65,746 ಕಾನ್ಸ್‌ಟೇಬಲ್‌ಗಳು, ಜೈಲು, ಫೋರೆನ್ಸಿಕ್ ಮತ್ತು ನ್ಯಾಯಾಂಗ ಅಧಿಕಾರಿಗಳು ಸೇರಿದಂತೆ 5,84,174 ಅಧಿಕಾರಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಲಾಗಿದೆ. ಕೇಂದ್ರ ಪಂಚಾಯತ್ ರಾಜ್ ಸಚಿವಾಲಯವು 3 ಹೊಸ ಕಾನೂನುಗಳ ಕುರಿತು 40 ಲಕ್ಷ ಸ್ವಯಂ ಸೇವಕರಿಗೆ ತರಬೇತಿ ನೀಡಿದೆ.

ಹೊಸ ಕಾನೂನುಗಳ ಅಡಿಯಲ್ಲಿ ವಿದ್ಯುನ್ಮಾನವಾಗಿ ಸಮನ್ಸ್ ಸೂಚನೆಗಳನ್ನು ಡೌನ್‌ಲೋಡ್ ಮಾಡಲು ಅನುಕೂಲವಾಗುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ಇ-ಸಾಕ್ಷಿಯ, ನ್ಯಾಯಶ್ರುತಿ ಮತ್ತು ಇ-ಸಮನ್ಸ್ ಎಂಬ 3 ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದೆ. ನಾಳೆ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದ್ದರೆ, ಸಂಸತ್ತಿನಲ್ಲಿ ಚರ್ಚೆಯಿಲ್ಲದೆ 3 ಹೊಸ ಕಾನೂನುಗಳನ್ನು ಅಂಗೀಕರಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಕಾನೂನುಗಳನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲೂ ಪ್ರಕರಣ ಬಾಕಿಯಿದೆ. ಹಲವು ರಾಜ್ಯಗಳಲ್ಲಿ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಾಳೆಯಿಂದ ಹೊಸ ಕಾನೂನುಗಳನ್ನು ಜಾರಿಗೆ ತರಲು ಹೊರಟಿದೆ.

ಈ ಕಾಯ್ದೆಯ ಪ್ರಕಾರ, ಯಾವುದೇ ನೊಂದ ವ್ಯಕ್ತಿ ತಮ್ಮ ಮನೆಯಿಂದಲೇ ಇ-ಎಫ್‌ಐಆರ್ ಮೂಲಕ ದೂರು ದಾಖಲಿಸಬಹುದು. ನಿರ್ದಿಷ್ಟ ಪೊಲೀಸ್ ಠಾಣೆ ಮಿತಿಯನ್ನು ಲೆಕ್ಕಿಸದೆ ಯಾವುದೇ ರಾಜ್ಯದಲ್ಲಿ ಎಲ್ಲಿ ಬೇಕಾದರೂ ದೂರು ಸಲ್ಲಿಸಬಹುದು. ಜೀರೋ ಎಫ್‌ಐಆರ್ ಮೂಲಕವೂ ದೂರು ದಾಖಲಿಸಬಹುದು. ದೂರುಗಳನ್ನು ಡಿಜಿಟಲ್ ರೂಪದಲ್ಲೂ ಸಲ್ಲಿಸಬಹುದು. ವಿಚಾರಣೆಗಾದ ಅವಧಿಯನ್ನು ನಿರ್ದಿಷ್ಟಪಡಿಸಲಾಗಿದೆ. ಹೊಸ ಕಾನೂನಿನ ಪ್ರಕಾರ, ತನಿಖಾಧಿಕಾರಿಯು 90 ದಿನಗಳಲ್ಲಿ ಪ್ರಕರಣದ ಪ್ರಗತಿಯನ್ನು ಸಂತ್ರಸ್ತರಿಗೆ ಅಥವಾ ದೂರುದಾರರಿಗೆ ತಿಳಿಸಲಾಗುವುದು.

Tags: Bharatiya Nagarik Suraksha SanhitaBharatiya Nyaya SanhitaBharatiya Sakshya Adhiniyamಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ಭಾರತೀಯ ನ್ಯಾಯ ಸಂಹಿತಾ 2023ಭಾರತೀಯ ಸಾಕ್ಷಿ ಅಧಿನಿಯಮ್ 2023ಹೊಸ ಕ್ರಿಮಿನಲ್ ಕಾನೂನುಗಳು
Previous Post

ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ: ನಿತೀಶ್ ಕುಮಾರ್ ನೇತೃತ್ವದ ಜೆಡಿಯು ನಿರ್ಣಯ!

Next Post

ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು… ರಾಹುಲ್ ವಿವಾದಾತ್ಮಕ ಭಾಷಣದಿಂದ ಸಂಸತ್‌ನಲ್ಲಿ ಕೋಲಾಹಲ!

Next Post

ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು... ರಾಹುಲ್ ವಿವಾದಾತ್ಮಕ ಭಾಷಣದಿಂದ ಸಂಸತ್‌ನಲ್ಲಿ ಕೋಲಾಹಲ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
edit post
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

02/07/2025
edit post
ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’; ಬಾಗೇಪಲ್ಲಿ ‘ಭಾಗ್ಯನಗರ’ ಎಂದು ಮರು ನಾಮಕರಣ!

02/07/2025
edit post
ಅಮೆರಿಕದ ಉತಾಹ್ (Utah) ರಾಜ್ಯದಲ್ಲಿ, ಸ್ಪ್ಯಾನಿಷ್ ಕೋಟೆ ಪ್ರದೇಶದಲ್ಲಿ ಇಸ್ಕಾನ್ ರಾಧಾಕೃಷ್ಣನ್ ದೇವಾಲಯವಿದೆ. ಈ ದೇವಾಲಯದಲ್ಲಿ ನಡೆದ ಗುಂಡಿನ ದಾಳಿ ದೊಡ್ಡ ಸಂಚಲನವನ್ನೇ ಮೂಡಿಸಿದೆ.

ಅಮೆರಿಕದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ: ತ್ವರಿತ ಕ್ರಮಕ್ಕೆ ಭಾರತ ಒತ್ತಾಯ!

02/07/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

02/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS