ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ; ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ » Dynamic Leader
November 21, 2024
ಬೆಂಗಳೂರು

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ; ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹಳ್ಳಿಕಾರ ಸಮುದಾಯದ ಸಮಾವೇಶ-2024 ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡಿಯಿತು. ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.  

“ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ” ಎಂದು ಹೇಳಿದರು.

“ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011ರ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ” ಎಂದು ಹೇಳಿದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ, ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು” ಎಂದು ಹೇಳಿದರು.

Related Posts