ಧಾರ್ಮಿಕ ಮತಾಂತರದಲ್ಲಿ ತೊಡಗಿದರೆ ಎನ್‌ಜಿಒಗಳ ನೋಂದಣಿ ರದ್ದು; ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ!
ನವದೆಹಲಿ: ಮತಾಂತರ ಸೇರಿದಂತೆ ಸರ್ಕಾರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ ಎನ್‌ಜಿಒಗಳ ನೋಂದಣಿ ರದ್ದುಪಡಿಸಲಾಗುವುದು ಎಂದು ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ.
ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಚ್ಚಿನ ಸರ್ಕಾರೇತರ ಸಂಸ್ಥೆಗಳು (NGO) ವಿದೇಶಗಳಿಂದ ಹಣವನ್ನು ಪಡೆಯುತ್ತವೆ. ಇದನ್ನು ಪಡೆಯಲು, ಎಲ್ಲಾ ಎನ್‌ಜಿಒಗಳು ಎಫ್‌ಸಿಆರ್‌ಎ (FCRA) ಎಂದು ಕರೆಯಲ್ಪಡುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ಈ ಹಿನ್ನೆಲೆಯಲ್ಲಿ, ಗೃಹ ಸಚಿವಾಲಯ ಹೊರಡಿಸಿರುವ ಹೇಳಿಕೆಯಲ್ಲಿ, ಕೆಲವು ಎನ್‌ಜಿಒಗಳು ಧಾರ್ಮಿಕ ಮತಾಂತರದಲ್ಲಿ ತೊಡಗಿದ್ದು, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವನ್ನೂ ಹೊಂದಿದೆ. ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಲು ಪ್ರಚೋದನೆ ನೀಡುತ್ತಿವೆ ಎಂಬ ದೂರುಗಳಿವೆ.
ಎನ್‌ಜಿಒಗಳು ಅಂತಹ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದರೆ, ಅವರಿಗೆ ನೀಡಲಾದ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿ ನೀಡಲಾದ ಅನುಮೋದನೆಯನ್ನು ರದ್ದುಗೊಳಿಸಲಾಗುವುದು ಎಂದು ಅದರಲ್ಲಿ ಹೇಳಿದೆ.