ಮಹಿಳೆಯನ್ನು ಕಾಮತೃಷೆಗೆ ಬಳಸಿಕೊಂಡ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪ ಬಂಧನ! » Dynamic Leader
January 6, 2025
ಕ್ರೈಂ ರಿಪೋರ್ಟ್ಸ್

ಮಹಿಳೆಯನ್ನು ಕಾಮತೃಷೆಗೆ ಬಳಸಿಕೊಂಡ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪ ಬಂಧನ!

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿತ್ತು. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಯಿಸಿದ ರಾಮಚಂದ್ರಪ್ಪ, ಆಕೆಯನ್ನು ತನ್ನ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು.

ವ್ಯಕ್ತಿಯೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದ ಈ ಘಟನೆ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿದೆ.

Related Posts