ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
April 2023 » Page 4 of 7 » Dynamic Leader
October 23, 2024
Home 2023 April (Page 4)
ರಾಜಕೀಯ

ಚೆನ್ನೈ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ಕಾನೂನಿನಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇಂದು ವಿಧಾನಸಭೆಯಲ್ಲಿ ಸರ್ಕಾರದ ಪ್ರತ್ಯೇಕ ನಿರ್ಣಯವನ್ನು ಮಂಡಿಸಲಿದ್ದಾರೆ.

ಭಾರತದ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಒದಗಿಸಲಾದ ಶಾಸನಬದ್ಧ ರಕ್ಷಣೆ, ಹಕ್ಕುಗಳು ಮತ್ತು ಮೀಸಲಾತಿ ಸೇರಿದಂತೆ ಸವಲತ್ತುಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೂ ವಿಸ್ತರಿಸಿ, ಅವರು ಎಲ್ಲಾ ರೀತಿಯಲ್ಲೂ ಸಾಮಾಜಿಕ ನ್ಯಾಯದ ಪ್ರಯೋಜನಗಳನ್ನು ಪಡೆಯಲು ಸಂವಿಧಾನದಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರದ ಪ್ರತ್ಯೇಕ ನಿರ್ಣಯವನ್ನು ಮಂಡಿಸಲಿದ್ದಾರೆ.

ದೇಶ

ನವದೆಹಲಿ: ನೆನ್ನೆ ಮಾಧ್ಯಮದವರನ್ನು ಭೇಟಿಯಾದ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ, ‘ಏಪ್ರಿಲ್ 20 ಮತ್ತು 21 ರಂದು ರಾಜಧಾನಿ ದೆಹಲಿಯಲ್ಲಿ ವಿಶ್ವ ಬೌದ್ಧ ಸಮ್ಮೇಳನ ಆರಂಭವಾಗಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ’ ಎಂಬ ಮಾಹಿತಿಯನ್ನು ಒದಗಿಸಿದರು.

‘ವಿಶ್ವದ ವಿವಿಧ ದೇಶಗಳ ಪ್ರಮುಖ ಬೌದ್ಧ ಸನ್ಯಾಸಿಗಳು, ತಜ್ಞರು ಮತ್ತು ಶಿಕ್ಷಣ ತಜ್ಞರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬುದ್ಧನ ಸ್ಮಾರಕಗಳನ್ನು ಸಂರಕ್ಷಿಸುವುದು ಮತ್ತು ಅತ್ಯುತ್ತಮ ಬೌದ್ಧ ಚಿಂತಕರನ್ನು ಒಂದೇ ವೇದಿಕೆಯಲ್ಲಿ ತರುವುದು ಈ ಸಮ್ಮೇಳನದ ಉದ್ದೇಶವಾಗಿದೆ.

ಜಿ.ಕಿಶನ್ ರೆಡ್ಡಿ

ಭಾರತ ಸರ್ಕಾರವು ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಸಂದರ್ಭದಲ್ಲಿ ಒಂದೂವರೆ ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ಸ್ಮರಿಸುತ್ತಿದೆ’ ಎಂದು ಅವರು ಹೇಳಿದರು. ‘ಏಪ್ರಿಲ್ 20 ರಂದು ಪ್ರಧಾನಿ ಉದ್ಘಾಟಿಸಲಿರುವ ಜಾಗತಿಕ ಬೌದ್ಧ ಶೃಂಗಸಭೆಯು ಆ ನಿಟ್ಟಿನಲ್ಲಿ ಆಚರಣೆಯ ಮುಂದುವರಿಕೆಯಾಗಿದೆ. ಭಾರತದಲ್ಲಿ ಈ ರೀತಿಯ ಮೊದಲ ಅಂತರರಾಷ್ಟ್ರೀಯ ಬೌದ್ಧ ಶೃಂಗಸಭೆ ನಡೆಯುತ್ತಿದೆ.

ಈ ಸಮ್ಮೇಳನದಲ್ಲಿ ಸುಮಾರು 30 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮತ್ತು ಇವರೆಲ್ಲ ಭಾರತದಲ್ಲಿ ಬೌದ್ಧ ಸ್ಮಾರಕಗಳಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ಹೇಳಿದರು.

Global Buddhist Summit To Be Inaugurated By Prime Minister To Be Held At New Delhi New Delhi
G.Kishan Reddy Minister of Culture, GoI held a press conference here at Indira Gandhi National Centre for the Arts in context to Global Buddhist Summit to be held on 20th and 21st April 2023 in New Delhi. He said that the Government of India in context to celebrations of ‘Azadi ka Amrit Mahotsav’ has been commemorating such events for one and half years. The Global Buddhist Summit which will be inaugurated by the Prime Minister on 20th April will be a continuation of the celebration in that regard. This is the first International Buddhist Summit of its kind to be ever held in India.

ರಾಜಕೀಯ

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಇಂದು ನಾಮ ಪತ್ರ ಸಲ್ಲಿಸಿದ್ದಾರೆ!

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಹಾಗೂ ಅಪಾರವಾದ ಅಭಿಮಾನಿಗಳೊಂದಿಗೆ ತೆರಳಿದ ಅವರು ವಸಂತನಗರ ಬಿಬಿಎಂಪಿ ಕಛೇರಿಯಲ್ಲಿ ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.

“ಬೇಷರತ್ ಬೆಂಬಲಕ್ಕಾಗಿ ನಾನು ಜನರಿಗೆ ಧನ್ಯವಾದ ಹೇಳುತ್ತೇನೆ ಮತ್ತು ಇನ್ನೊಂದು ಅವಧಿಗೆ ನಾನು ಸೇವೆ ಸಲ್ಲಿಸಲು ಆಶಿಸುತ್ತೇನೆ” ಎಂದು ಕ್ಷೇತ್ರದ ಮತದಾರಲ್ಲಿ ವಿನಮ್ರತೆಯಿಂದ ಮನವಿ ಮಾಡಿದ್ದಾರೆ. 

“ಸೌಮ್ಯವಾದಿ ಹಾಗೂ ಶಾಂತಿ ಪ್ರಿಯನಾದ ರಿಜ್ವಾನ್ ಅರ್ಷದ್ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳೇ ಅವರಿಗೆ ಈ ಬಾರಿಯೂ ಜಯವನ್ನು ತಂದು ಕೊಂಡುತ್ತದೆ” ಎಂದು ಕ್ಷೇತ್ರದ ಜನ ಹೇಳಿಕೊಳ್ಳುತ್ತಿದ್ದಾರೆ.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಭರಾಟೆ ಜೋರಾಗಿದೆ. ಅದರಂತೆ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರಂ ಸ್ವೀಕರಿಸುವಾಗ ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ನಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯ

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ಸಹಚರ ಮೀಸೆ ಮಾದಯ್ಯನ್ ಅನಾರೋಗ್ಯ ಕಾರಣದಿಂದ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 31 ವರ್ಷಗಳಿಂದ ಜೈಲಿನಲ್ಲಿದ್ದ ಮಾದಯ್ಯನ್ ಅನಾರೋಗ್ಯದ ಹಿನ್ನೆಲೆಯಲ್ಲಿ 11 ರಂದು ಪ್ರಜ್ಞೆ ತಪ್ಪಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

1993ರಲ್ಲಿ ಕರ್ನಾಟಕ ಪೊಲೀಸರಿಗೆ ಶರಣಾದ ಮಾದಯ್ಯನ್ ವಿರುದ್ಧ 4 ಟಾಡಾ ಪ್ರಕರಣಗಳು ದಾಖಲಾಗಿ ಮರಣದಂಡನೆ ವಿಧಿಸಲಾಯಿತು. ನಂತರ ಮೇಲ್ಮನವಿಯ ಮೇರೆಗೆ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದ್ದರೂ ಕರ್ನಾಟಕ ರಾಜ್ಯ ಸರ್ಕಾರ ಅವರನ್ನು ಬಿಡುಗಡೆ ಮಾಡಲಿಲ್ಲ.

ಮೀಸೆ ಮಾದಯ್ಯನ ಹಿನ್ನೆಲೆ:
ತಮಿಳುನಾಡಿನ ಹಕ್ಕುಗಳಿಗಾಗಿ ಮತ್ತು ಗುಡ್ಡಗಾಡು ಹಾಗೂ ಬುಡಕಟ್ಟು ಜನರ ಏಳಿಗೆಗಾಗಿ ಬದುಕಿದ್ದ ಕಾಡುಗಳ್ಳ; ದಂತ ಚೋರ ವೀರಪ್ಪನ್‌ನ ಸಹಚರರಲ್ಲಿ ಪ್ರಮುಖವಾದವರು ಮೀಸೆ ಮಾದಯ್ಯನ್. 1993ರಲ್ಲಿ ವೀರಪ್ಪನ್‌ನಿಂದ ಬೇರ್ಪಟ್ಟು ಸೇಂಗಪ್ಪಾಡಿಗೆ ಬಂದ ಮಾದಯ್ಯನ್ ಕರ್ನಾಟಕ ರಾಜ್ಯ ಪೊಲೀಸರಿಗೆ ಶರಣಾದರು. ಇವರೊಂದಿಗೆ ಪಿಲವೇಂದ್ರನ್, ಸೈಮನ್ ಮತ್ತು ಜ್ಞಾನಪ್ರಕಾಶಂ ಕೂಡ ಶರಣಾದರು.

ಈ ನಾಲ್ವರಿಗೂ ಸುಪ್ರೀಂ ಕೋರ್ಟ್ ಮರಣದಂಡನೆ ವಿಧಿಸಿ ತೀರ್ಪು ನೀಡಿತು. ರಾಷ್ಟ್ರಪತಿಗಳಿಗೆ ಕಳುಹಿಸಲಾದ ಕ್ಷಮಾದಾನ ಅರ್ಜಿಯನ್ನು ಕಾಲವಿಳಂಬಮಾಡಿ ಒಂಬತ್ತು ವರ್ಷಗಳ ನಂತರ ವಜಾಗೊಳಿಸಲಾಯಿತು. 2014ರಲ್ಲಿ ಮುಖ್ಯ ನ್ಯಾಯಮೂರ್ತಿ ಸದಾಶಿವಂ ನೇತೃತ್ವದ ಸುಪ್ರೀಂ ಕೋರ್ಟ್ ಈ ಸಂಬಂಧ ವಿಚಾರಣೆ ನಡೆಸಿ ನಾಲ್ವರ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. ಇವರೆಲ್ಲ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರೂ ಕರ್ನಾಟಕ ರಾಜ್ಯ ಸರ್ಕಾರ ನಾಲ್ವರನ್ನು ಬಿಡುಗಡೆ ಮಾಡಲು ಮುಂದಾಗಲಿಲ್ಲ.

ಇದರಲ್ಲಿ ಸೈಮನ್ 2018ರಲ್ಲಿ ಮತ್ತು 2022ರಲ್ಲಿ ಪಿಲವೇಂದ್ರನ್ ಜೈಲಿನಲ್ಲಿ ನಿಧನರಾದರು. ಕಳೆದ ಫೆಬ್ರವರಿಯಲ್ಲಿ ಕಿಡ್ನಿ ವೈಫಲ್ಯದಿಂದ ಜ್ಞಾನಪ್ರಕಾಶ್ ಪೆರೋಲ್ ಮೇಲೆ ಹೊರಬಂದಿದ್ದರು. ಈ ಹಿನ್ನಲೆಯಲ್ಲಿ ಕಳೆದ 11 ರಂದು ಅನಾರೋಗ್ಯದ ಕಾರಣದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮೀಸೈ ಮಾದಯ್ಯನ್ ಇಂದು ಸಂಜೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೀರಪ್ಪನ್‌ನ ಗೆಳೆಯರಲ್ಲಿ ಕೊನೆಯದಾಗಿ ಜೈಲಿನಲ್ಲಿದ್ದ ವ್ಯಕ್ತಿ ಮೀಸೈ ಮಾದಯ್ಯನ್ ಎಂಬುದು ಗಮನಾರ್ಹ.

ದೇಶ

ಫೆಬ್ರವರಿ 24 ರಂದು ಉಮೇಶ್ ಪಾಲ್ ಹತ್ಯೆಯ ನಂತರ ಇದು ಮೂರನೇ ಎನ್‌ಕೌಂಟರ್ ಆಗಿದೆ!

ಆದಿಕ್ ಅಹ್ಮದ್ ಅವರ 19 ವರ್ಷದ ಮಗ ಅಸದ್ ಅಹ್ಮದ್ ಮತ್ತು ಅವರ ಸಹಾಯಕ ಹತ್ಯೆಯು ಉತ್ತರ ಪ್ರದೇಶದಲ್ಲಿ 2017 ರಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ನಡೆದ 183ನೇ ಎನ್‌ಕೌಂಟರ್ ಆಗಿದೆ. ಫೆಬ್ರವರಿ 24 ರಂದು ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಇದು ಮೂರನೇ ಎನ್‌ಕೌಂಟರ್ ಆಗಿದೆ. ಏಪ್ರಿಲ್‌ನಿಂದ 13 ದಿನಗಳಲ್ಲಿ ಉತ್ತರ ಪ್ರದೇಶ ಪೊಲೀಸರು ನಡೆಸಿದ ಮೂರನೇ ಎನ್‌ಕೌಂಟರ್ ಇದಾಗಿದೆ.

ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇಂತಹ ಎನ್‌ಕೌಂಟರ್‌ಗಳು ನಡೆಯುತ್ತಲೇ ಇವೆ. ಯೋಗಿ ಅಧಿಕಾರ ಸ್ವೀಕರಿಸಿದ ಎರಡು ವಾರಗಳಲ್ಲಿ ಕುಖ್ಯಾತ ರೌಡಿ ಗುರ್ಮೀತ್ ಕೊಲ್ಲಲ್ಪಟ್ಟನು. ಮುಖ್ಯಮಂತ್ರಿಗಳ ಪಾಲಿಗೆ ಇದು ಅಪರಾಧ ನಿಗ್ರಹದ ಶೈಲಿ. ಇದು ನಿರೋಧಕ ಎಂದು ಅವರು ನಂಬುತ್ತಾರೆ.

ಏತನ್ಮಧ್ಯೆ, ಅಪರಾಧ ಮತ್ತು ಅಪರಾಧಿಗಳನ್ನು ನಿರ್ಮೂಲನೆ ಮಾಡುವ ಭರವಸೆಯ ಮೇಲೆ 2017 ರಿಂದ ಇದು 183ನೇ ಎನ್‌ಕೌಂಟರ್ ಹತ್ಯೆಯಾಗಿದೆ ಎಂದು ವಿಶೇಷ ಡಿಜಿ ಅಪರಾಧ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ಈ ಹಿನ್ನಲೆಯಲ್ಲಿ ಝಾನ್ಸಿಯ ಪಟಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಿಚ್ಚಾ ಡ್ಯಾಮ್ ಬಳಿ ಅಸದ್ ಅಹ್ಮದ್ ಮತ್ತು ಗುಲಾಂ ಹುಸೇನ್ ಅವರನ್ನು ಕೊಲ್ಲಲಾಯಿತು.

ಅಧಿಕೃತ ಮಾಹಿತಿಯ ಪ್ರಕಾರ 183 ಕೊಲೆಗಳ ಹೊರತಾಗಿ, ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ 5,046 ಅಪರಾಧಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಕ್ರಿಮಿನಲ್‌ಗಳ ಕಾಲಿಗೆ ಗುಂಡಿಕ್ಕಿ ಕೊಲ್ಲುವ ಎನ್‌ಕೌಂಟರ್‌ಗಳು, ಪೊಲೀಸರಲ್ಲಿ ಮಾತ್ರವಲ್ಲ, ಅಧಿಕಾರದ ಕಾರಿಡಾರ್‌ಗಳಲ್ಲಿಯೂ ಇದನ್ನು ‘ಆಪರೇಷನ್ ಲಾಂಗ್ಡಾ’ ಎಂದು ಕರೆಯಲಾಗುತ್ತದೆ.

ಕಳೆದ ಆರು ವರ್ಷಗಳಲ್ಲಿ ಇಂತಹ ಕಾರ್ಯಾಚರಣೆಯಲ್ಲಿ 13 ಪೊಲೀಸರು ಸಾವನ್ನಪ್ಪಿದ್ದಾರೆ. ಅಲ್ಲದೆ, ಅಧಿಕೃತ ವರದಿಗಳ ಪ್ರಕಾರ 1,443 ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎನ್‌ಕೌಂಟರ್‌ಗೂ ಮುನ್ನ ಉಮೇಶ್ ಪಾಲ್ ಫೆಬ್ರವರಿ 25 ರಂದು ಕೊಲ್ಲಲ್ಪಟ್ಟರು. ಆಗ ಯೋಗಿ ಆದಿತ್ಯನಾಥ್ ಕ್ರಿಮಿನಲ್ ಗಳನ್ನು ಮಟ್ಟಹಾಕಲಾಗುವುದು ಎಂದಿದ್ದರು.

ಅದರಂತೆ ಈ ಎನ್ ಕೌಂಟರ್ ನಡೆದಿದೆ. ಅಂಕಿ ಅಂಶಗಳ ಪ್ರಕಾರ, ಯೋಗಿ ಆಡಳಿತದಲ್ಲಿ 2018ರಲ್ಲಿ ಹೆಚ್ಚಿನ ಎನ್‌ಕೌಂಟರ್‌ಗಳು ನಡೆದಿವೆ. ಅದರ ನಂತರ 2022ರಲ್ಲಿ ಹೆಚ್ಚಿನ ಎನ್‌ಕೌಂಟರ್‌ಗಳು ನಡೆದಿರುವುದು ಗಮನಾರ್ಹ. The Uttar Pradesh government has adopted a zero-tolerance policy against the mafia, Prashant Kumar, Special DG, Law & Order said at a media briefing today. “The result of this policy is before everyone today,” he said, adding that 183 criminals have been killed so far in encounters with the police in the state.

ರಾಜಕೀಯ

ಬೆಂಗಳೂರು: ಚಿತ್ರದುರ್ಗದ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಘು ಆಚಾರ್ ಇಂದು ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಜಾತ್ಯತೀತ ಜನತಾದಳ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಂ ಇಬ್ರಾಹಿಂ ರವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಟಿ.ಎ ಶರವಣ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಟ್ಟಿ ಪ್ರಕಟವಾದ ಬೆನ್ನಲ್ಲೆ ಕೋಟೆನಾಡು ಚಿತ್ರದುರ್ಗದಲ್ಲಿ ಭಾರಿ ಬಂಡಾಯ ಬಿಸಿ ಆವರಿಸಿತು. ಇದೀಗ ಅಲ್ಲಿನ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಘು ಆಚಾರ್ ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಸೇರಿದ್ದಾರೆ.

ಇವರಲ್ಲೆದೇ ಜೇವರ್ಗಿಯ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಸೇರಿ ಅವರ ಅಪಾರ ಬೆಂಬಲಿಗರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಸವದತ್ತಿಯ ಶ್ರೀ ಸೌರಭ್ ಚೋಪ್ರಾ, ಕಾರವಾರದ ಶ್ರೀಮತಿ ಚೈತ್ರಾ ಕೊಡೇಕರ್, ಪಾವಗಡದ ಶ್ರೀರಾಮ್, ಮಾಯಕೊಂಡದ ಸವಿತಾ ಬಾಯಿ, ಪುತ್ತೂರಿನ ದಿವ್ಯಾ ಪುತ್ತೂರು, ಶ್ರೀಮತಿ ದಿವ್ಯಪ್ರಭಾ ಗೌಡ ಸೇರಿದಂತೆ ಇನ್ನೂ ಅನೇಕ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದರು. ಎಲ್ಲರನ್ನೂ ಸಂತೋಷದಿಂದ ಪಕ್ಷಕ್ಕೆ ಸ್ವಾಗತಿಸಲಾಯಿತು.

ರಾಜಕೀಯ

ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ ಬಿಜೆಪಿ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ.

‘ಮುಸ್ಲಿಂಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಪರಿಗಣಿಸಿತ್ತು’ ಎಂಬ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ ಬಿಜೆಪಿ ಸರ್ಕಾರ ಅತ್ಯವಸರದಿಂದ ಮುಸ್ಲಿಂ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ.

ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಉಳಿಸಿಕೊಂಡ ಶೇಕಡಾ 4 ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದರಿಂದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶ ರದ್ದಾದರೆ ಆ ಎರಡೂ ಸಮುದಾಯಗಳಿಗೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ.

ಒಳ ಮೀಸಲಾತಿ ಮತ್ತು ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ. ಆದರೆ ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ.

ಒಟ್ಟು ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇಕಡ 75ಕ್ಕೆ ಹೆಚ್ಚಿಸಿ ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದೊಂದೇ ಈಗಿನ ಮೀಸಲಾತಿ ವಿವಾದಕ್ಕೆ ಇರುವ ಶಾಶ್ವತ ಪರಿಹಾರ.

ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಲು ಖಂಡಿತ ಕ್ರಮಕೈಗೊಳ್ಳುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸದೆ ಸರ್ವಸಮ್ಮತ ಪರಿಹಾರ ನೀಡುತ್ತೇವೆ.

ಮೀಸಲಾತಿಗೆ ಶೇಕಡಾ 50ರ ಮಿತಿ ಎನ್ನುವುದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು ಅದು ಸಾಂವಿಧಾನಿಕವಾದುದೇನಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ.

ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಆಯೋಗ ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ.

ಕೇಂದ್ರ ಬಿಜೆಪಿ ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು.

ರಾಜಕೀಯ

ಹೋಳಾಗಲಿಲ್ಲ ದೇವರ ಮುಂದೆ ಒಡೆದ ಈಡುಗಾಯಿ: ಸೋಮಣ್ಣಗೆ ಆಶೀರ್ವಾದ ಮಾಡಲಿಲ್ವಾ ಶ್ರೀ.ಚಾಮುಂಡೇಶ್ವರಿ ತಾಯಿ?

ಮೈಸೂರು: ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಇಂದು ಮೈಸೂರಿನ ಶ್ರೀ.ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ.ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತೆಂಗಿನಕಾಯಿ ಒಡೆಯಲು ಯತ್ನಿಸಿದ ವಿ.ಸೋಮಣ್ಣ ಅವರಿಗೆ ಮುಜುಗರದ ಪರಿಸ್ಥಿತಿ ಎದುರಾಯಿತು. ಸೋಮಣ್ಣ ಹಾಕಿದ ಇಡುಗಾಯಿ ಒಡೆಯಲಿಲ್ಲ. ತೆಂಗಿನಕಾಯಿಯು ವ್ಯಕ್ತಿಯನ್ನು ದುಷ್ಟರಿಂದ ರಕ್ಷಿಸುತ್ತದೆ ಎಂದು ನಂಬಲಾಗುತ್ತಿದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವಾಗ ತೆಂಗಿನಕಾಯಿ ಒಡೆಯುವುದು ಹಿಂದೂ ಧರ್ಮದ ಪ್ರಮುಖ ಆಚರಣೆ. ತೆಂಗಿನಕಾಯಿ ಒಡೆಯದ ಕಾರಣ ಅಲ್ಲಿ ಸೇರಿದ್ದವರು ಅಶುಭ ಸೂಚನೆ ಎಂದು ಹೇಳಿಕೋಂಡರು.

ಇದರಿಂದ ಮುಜುಗರಕ್ಕೆ ಒಳಗಾದ ಸೋಮಣ್ಣ ಪೂಜೆಯನ್ನು ಸಲ್ಲಿಸಿ ಅಲ್ಲಿಂದ ಹೊರನಡೆದರು. ಅವರ ಜೊತೆಯಲ್ಲಿದ್ದ ಅವರ ಪತ್ನಿ ಮತ್ತು ಮೈಸೂರು ಸಂಸದ ಪ್ರತಾಪ್ ಸಿಂಹ ಇದಕ್ಕೆ ಸಾಕ್ಷಿಯಾದರು.  

ರಾಜಕೀಯ

ಗೌರೀಬಿದನೂರು: ಚಿಕ್ಕಬಳ್ಳಾಪುರ ಜಿಲ್ಲೆ, ಗೌರೀಬಿದನೂರು ತಾಲ್ಲೂಕು, ತೊಂಡೇಬಾವಿ ಹೋಬಳಿ, ಅಲ್ಲಿಪುರ ನಿವಾಸಿ ಅಬ್ಬಾಸ್ ರಜಾ ಅವರನ್ನು ರಾಜ್ಯ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಡಾ.ಸೈಯದ್ ರೋಷನ್ ಅಬ್ಬಾಸ್ ರವರ ಆದೇಶದ ಮೇರೆಗೆ, ಗೌರೀಬಿದನೂರು ತಾಲ್ಲೂಕು ಅಲ್ಪಸಂಖ್ಯಾತರ ಯುವ ಕಾರ್ಯದರ್ಶಿಯಾಗಿ, ಗೌರೀಬಿದನೂರು ತಾಲ್ಲೂಕು ಅಧ್ಯಕ್ಷರಾದ ಸಿ.ಮಜುನಾಥ ರೆಡ್ಡಿ ರವರು ದಿನಾಂಕ: 03-04-2023 ರಂದು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ತತ್ ಕ್ಷಣದಿಂದಲೇ ಪಕ್ಷದ ಕಾರ್ಯಕ್ರಮಗಳಲ್ಲಿ ಮತ್ತು ಪಕ್ಷದ ಸಂಘಟನೆಯಲ್ಲಿ ಭಾಗವಹಿಸಬೇಕೆಂದು ಅವರಿಗೆ ಸೂಚಿಸಲಾಗಿದೆ. ಯುವಕರು, ಉತ್ಸಾಹಿಯೂ ಆಗಿರುವ ಅಬ್ಬಾಸ್ ರಜಾ ಜೆಡಿಎಸ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಟ್ಟಾ ಬೆಂಬಲಿಗರಾಗಿದ್ದಾರೆ. ಪಂಚರತ್ನ ಯಾತ್ರೆಯ ಯಶಸ್ಸು ಮತ್ತು ಪ್ರಾದೇಶಿಕ ಪಕ್ಷದ ಅನಿವಾರ್ಯತೆಯನ್ನು ಅರ್ಥಮಾಡಿಕೊಂಡಿರುವ ನಾಡಿನ ಸ್ವಾಭಿಮಾನಿ ಮತದಾರರು ಈ ಬಾರಿ ಬದಲಾವಣೆಯನ್ನು ತರುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಸಂಕಷ್ಟದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಹಕ್ಕುಗಳಿಗಾಗಿ ಮತ್ತು ಗೌರೀಬಿದನೂರು ತಾಲ್ಲೂಕಿನ ಸರ್ವಜನರ ಏಳಿಗೆಗಾಗಿ ಒತ್ತುಕೊಟ್ಟು ಶ್ರಮಿಸಬೇಕೆಂದು ಹಾಗೂ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಸಿ.ಮಜುನಾಥ ರೆಡ್ಡಿ ರವರ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿ ರಾಜ್ಯದಲ್ಲಿ ಪಕ್ಷವನ್ನು ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಶಮವಹಿಸಬೇಕೆಂಬುದು ಸ್ಥಳೀಯರ ಆಶಯವಾಗಿದೆ.