ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
2023 » Page 20 of 76 » Dynamic Leader
October 24, 2024
Home 2023 (Page 20)
ರಾಜ್ಯ

ಬೆಂಗಳೂರು: ಕರ್ನಾಟಕ ಪ್ರಾಂತೀಯ ಕಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಅಧ್ಯಕ್ಷರಾದ ಡಾ.ಪೀಟರ್ ಮಚಾಡೊ ಅವರ ನೇತೃತ್ವದ ಧರ್ಮಾಧ್ಯಕ್ಷರ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿ, ಕೆಲವು ಶೈಕ್ಷಣಿಕ ಮತ್ತು ಸಾಮಾಜಿಕ ಬೇಡಿಕೆಗಳನ್ನು ಮುಂದಿಟ್ಟರು. ಈ ಸಂದರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್ ಉಪಸ್ಥಿತರಿದ್ದರು.

ನಿಯೋಗದಲ್ಲಿ ಧರ್ಮಾಧ್ಯಕ್ಷರುಗಳಾದ ಡಾ.ಚಿರಾಲ್ಡ್ ಐಸಾಕ್ ಲೋಬೋ, ಡಾ.ಗೀವರ್ಗೀಸ್ ಮಕಾರಿಯೋಸ್, ಡಾ.ಪೀಟರ್ ಪೌಲ್ ಸಲ್ಡಾನಾ, ಡಾ.ಡೆರಿಕ್ ಫೆರ್ನಾಂಡೀಸ್, ಡಾ.ರಾಬರ್ಟ್ ಮಿರಾಂಡ, ಡಾ.ಫ್ರಾನ್ಸಿಸ್ ಸೆರಾವೋ, ಡಾ.ಜೋಸೆಫ್ ಅರುಮಚಡತ್, ಡಾ.ಫ್ರಾನ್ಸಿಸ್ ಸೆರಾವೊ ಎಸ್.ಜೆ ಅವರು ಹಾಜರಿದ್ದರು.

ದೇಶ ರಾಜಕೀಯ

‘ಇಂಡಿಯಾ’ ಮೈತ್ರಿಕೂಟ ಕೆಲವು ಟಿವಿ ನಿರೂಪಕರು ಮತ್ತು ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿದೆ.

ನವದೆಹಲಿ: ಸಂಸತ್ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್, ಡಿಎಂಕೆ ಸೇರಿದಂತೆ 28 ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ‘ಇಂಡಿಯಾ’ ಎಂದು ಹೆಸರಿಸಲಾದ ಈ ಮೈತ್ರಿಕೂಟದ ಸಮಾಲೋಚನಾ ಸಭೆಗಳನ್ನು ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆಸಲಾಗಿದೆ. ವಿವಿಧ ಸಮಸ್ಯೆಗಳನ್ನು ಪರಿಶೀಲಿಸಲು 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.

‘ಇಂಡಿಯಾ’ ಮೈತ್ರಿಕೂಟ ಸಮನ್ವಯ ಸಮಿತಿಯ ಮೊದಲ ಸಭೆ ನಿನ್ನೆ ನಡೆಯಿತು. ದೆಹಲಿಯಲ್ಲಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಿತು. 14 ಸದಸ್ಯರ ಪೈಕಿ 12 ಮಂದಿ ಹಾಜರಿದ್ದರು. ಸಭೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ರಾಜ್ಯವಾರು ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲಾಯಿತು. ಬಿಜೆಪಿ ವಿರುದ್ಧ ಮೈತ್ರಿ ಪಕ್ಷಗಳ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಮಾಲೋಚನೆ ನಡೆಸಲಾಗಿದೆ.

ಇದನ್ನೂ ಓದಿ: ‘ಸರ್ವ-ಜಾತಿ ಪುರೋಹಿತರು’ ಯೋಜನೆಯಡಿ ಮೊದಲ ಬಾರಿಗೆ ಅರ್ಚಕರಾದ ಮೂರು ಮಹಿಳೆಯರು!

ಮಹಾರಾಷ್ಟ್ರ, ತಮಿಳುನಾಡು ಮತ್ತು ಬಿಹಾರ ರಾಜ್ಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಇಂಡಿಯಾ ಮೈತ್ರಿಕೂಟ ಅಭಿಪ್ರಾಯಪಟ್ಟಿದೆ. ಆದರೆ ದೆಹಲಿ, ಪಂಜಾಬ್, ಪಶ್ಚಿಮ ಬಂಗಾಳ, ಕೇರಳದಂತಹ ರಾಜ್ಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಮಸ್ಯೆ ಎದುರಾಗಲಿದೆ ಎಂದು ಭಾವಿಸಲಾಗಿದೆ.

ಇದಲ್ಲದೇ ಮೈತ್ರಿಕೂಟದ ಪ್ರಚಾರ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಯಿತು. ಯಾವ ಯಾವ ನಗರಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು. ಈ ಹಿನ್ನಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟವು ಕೆಲವು ದೂರದರ್ಶನ ನಿರೂಪಕರು ಮತ್ತು ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ಹೊರಟಿದ್ದು, ಯಾವ್ಯಾವ ಟೆಲಿವಿಷನ್ ಗಳು ಎಂಬ ವಿವರವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಮಾಧ್ಯಮದ ಒಂದು ವರ್ಗವು ಹಗೆತನದ ಮನೋಭಾವವನ್ನು ಹೊಂದಿದ್ದು, ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ನಡಿಗೆಯನ್ನು ಕನಿಷ್ಠವಾಗಿ ತೋರಿಸಲಾಯಿತು ಎಂದು ಕಾಂಗ್ರೆಸ್ ಆರೋಪಿಸಿದೆ. ಟಿವಿ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ತನ್ನ ವಕ್ತಾರರನ್ನು ಕಳುಹಿಸುವುದಿಲ್ಲ ಎಂದು ನಿರ್ಧರಿಸಲಾಗಿದೆ. ಎಲ್ಲಾ ಮಾಧ್ಯಮ ಚಾನೆಲ್‌ಗಳು ಮತ್ತು ಸಂಪಾದಕರು ಕಾಂಗ್ರೆಸ್ ಪ್ರತಿನಿಧಿ ಎಂದು ಯಾರನ್ನೂ ಕರೆಯಬಾರದು ಎಂದು ಕಾಂಗ್ರೆಸ್ ಅಧ್ಯಕ್ಷ ರಣದೀಪ್ ಸುರ್ಜೇವಾಲಾ ತಮ್ಮ ಎಕ್ಸ್ ಪೇಜ್‌ನಲ್ಲಿ ಹೇಳಿದ್ದಾರೆ.

ಉದ್ಯೋಗ ವಿದೇಶ

ತಮಿಳುನಾಡಿನಲ್ಲಿ ‘ಸರ್ವ-ಜಾತಿ ಪುರೋಹಿತರು’ ಯೋಜನೆಯಡಿ ಅರ್ಚಕರಾಗಲು ಮೂವರು ಮಹಿಳೆಯರು ಕೋರ್ಸ್ ಪೂರ್ಣಗೊಳಿಸಿದ್ದಾರೆ.

ತಮಿಳುನಾಡು ಸರ್ಕಾರವು ಎಲ್ಲಾ ಸಮುದಾಯಗಳ ಪುರೋಹಿತರಿಗೆ ತರಬೇತಿ ನೀಡುವ ‘ಅರ್ಚಕರ್ ಪಯಿರ್ಚಿ ಪಲ್ಲಿ’ (ಪುರೋಹಿತರ ತರಬೇತಿ ಶಾಲೆಗಳು) ನಡೆಸುತ್ತದೆ. ಇದೇ ಮೊದಲ ಬಾರಿಗೆ ಮಹಿಳೆಯರು ದಾಖಲಾಗಿದ್ದು ಮತ್ತು ಕೋರ್ಸ್ ಪೂರ್ಣಗೊಳಿಸಿದ್ದಾರೆ.

ಇದರ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಮ್ಮ ಎಕ್ಸ್ ಸೈಟ್‌ನಲ್ಲಿ, (ಹಿಂದೆ ಟ್ವಿಟರ್) “ಮಹಿಳೆ ವಿಮಾನವನ್ನು ಚಲಿಸಿದರೂ, ಬಾಹ್ಯಾಕಾಶಕ್ಕೆ ಹೋಗಿ ಬಂದಿದ್ದರೂ, ದೇವಾಲಯದ ಗರ್ಭಗುಡಿಗಳು ಅವರು ಪ್ರವೇಶಿಸಲು ಸಾಧ್ಯವಾಗದ ಸ್ಥಳಗಳಾಗಿದ್ದವು. ಸ್ತ್ರೀ ದೇವತೆಗಳ ದೇವಾಲಯಗಳ ವಿಷಯವೂ ಇದೇ ಆಗಿತ್ತು.

ಆದರೆ, ಇನ್ನು ಮುಂದೆ ಹಾಗಾಗುವುದಿಲ್ಲ! ಎಲ್ಲ ಜಾತಿಯವರೂ ಅರ್ಚಕರಾಗಬಹುದು ಎಂಬ ಪೆರಿಯಾರ್ ಅವರ ಎದೆಗೆ ಚುಚ್ಚಿದ ಮುಳ್ಳನ್ನು ನಮ್ಮ ದ್ರಾವಿಡ ಮಾದರಿಯ ಆಡಳಿತ ತೆಗೆದುಹಾಕಿದಾಗ, ಗರ್ಭಿಣಿಯರೂ ಗರ್ಭಗುಡಿಯೊಳಗೆ…. ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪೋಸ್ಟ್ ಮಾಡಿದ್ದಾರೆ.

ರಾಜಕೀಯ

ನವದೆಹಲಿ: ಸೆ 13 (ಪಿಟಿಐ) ‘ಇಂಡಿಯಾ’ ಮೈತ್ರಿ ಕೂಟದ ಸಮನ್ವಯ ಸಮಿತಿಯ ಮೊದಲ ಸಭೆ ಇಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ದೆಹಲಿ ನಿವಾಸದಲ್ಲಿ ನಡೆಯಿತು.  

ಅಕ್ಟೋಬರ್ ಮೊದಲ ವಾರದಲ್ಲಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ತಮ್ಮ ಮೊದಲ ಜಂಟಿ ಸಾರ್ವಜನಿಕ ಸಭೆಯನ್ನು ನಡೆಸಲು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿ ಕೂಟ ಬುಧವಾರ ನಿರ್ಧರಿಸಿದೆ. ಈ ಸಭೆಯಲ್ಲಿ ಕ್ಷೇತ್ರ ಹಂಚಿಕೆ, ಜಂಟಿ ಪ್ರಚಾರ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಕುರಿತು ಸಮಾಲೋಚನೆ ನಡೆಸಲಾಯಿತು.

ಮತ್ತು ಮೈತ್ರಿ ಪಕ್ಷಗಳು ಸೀಟು ಹಂಚಿಕೆಯ ಮಾತುಕತೆಯನ್ನು ಶೀಘ್ರವಾಗಿ ಪ್ರಾರಂಭಿಸುತ್ತವೆ ಎಂದು ಹೇಳಿಕೊಂಡಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮತ್ತು ಜಾತಿ ಗಣತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅವರು ಪ್ರಸ್ತಾಪಿಸಿದ್ದಾರೆ.

ದೇಶ

ಚೆನ್ನೈ: ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲು ಗಣೇಶನೇ ಕೇಳದಾಗ ಈ ಆಚರಣೆಗಳಿಂದ ಜನರಿಗೆ ಏನು ಪ್ರಯೋಜನ ಎಂದು ನ್ಯಾಯಾಧೀಶ ಆನಂದ್ ವೆಂಕಟೇಶ್ ಪ್ರಶ್ನಿಸಿದ್ದಾರೆ.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಈರೋಡು ಜಿಲ್ಲೆಯ 22 ಸ್ಥಳಗಳಲ್ಲಿ, ತಿರುಪ್ಪೂರು ಜಿಲ್ಲೆಯ 13 ಸ್ಥಳಗಳಲ್ಲಿ ಹಾಗೂ ಕೊಯಮತ್ತೂರು ಜಿಲ್ಲೆಯಲ್ಲಿ 16 ಸ್ಥಳಗಳಲ್ಲಿ ಹೊಸ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ಮತ್ತು ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಹಿಂದೂ ಮಕ್ಕಳ್ ಕಚ್ಚಿ ವತಿಯಿಂದ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಮನವಿ ಸಲ್ಲಿಸಲಾಯಿತು.

ಈ ಅರ್ಜಿಗಳ ತಿರಸ್ಕಾರದ ವಿರುದ್ಧ, ಗಣೇಶನ ಮೂರ್ತಿ ಮೆರವಣಿಗೆಗೆ ಅನುಮತಿ ಕೋರಿ ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು.

ಇದನ್ನೂ ಓದಿ: ಕಾವೇರಿ ಜಲವಿವಾದ: ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು; ಸುಪ್ರೀಂಗೂ ಅರ್ಜಿ ಸಲ್ಲಿಸಲಾಗುವುದು! – ಸಿದ್ದರಾಮಯ್ಯ

ಆಗ ಪೊಲೀಸರ ಪರವಾಗಿ ಹಾಜರಾದ ವಕೀಲರು, ‘ಗಣಪತಿ ಮೂರ್ತಿಗಳನ್ನಿಟ್ಟು ಪೂಜಿಸುವ ವಿಚಾರದಲ್ಲಿ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ. ಮೂರ್ತಿಗಳನ್ನು ಪೂಜಿಸಲು ಎಲ್ಲಾ ಸಂಘಟನೆಗಳಿಗೂ ಅವಕಾಶ ನೀಡಲಾಗಿದೆ. ಆಯಾ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಪರಿಗಣಿಸಿ, ಸ್ಥಳೀಯ ಪೊಲೀಸರು ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಅನುಮತಿ ನೀಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ, ಕಳೆದ ವರ್ಷ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ದ ಎಲ್ಲ ಕಡೆ ಈ ವರ್ಷವೂ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತಿದೆ. ಆದರೆ, ಈರೋಡ್‌ನ ವ್ಯಕ್ತಿಯೊಬ್ಬರು ಕೊಯಮತ್ತೂರಿನಲ್ಲಿ ಪ್ರತಿಮೆಯನ್ನು ಇರಿಸಲು ಅನುಮತಿ ಕೇಳಿದ್ದಾರೆ ಎಂಬ ವಾದವನ್ನೂ ಮುಂದಿಡಲಾಯಿತು.

ಇದನ್ನೂ ಓದಿ: ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ; ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು! – ಹೆಚ್.ಡಿ.ಕುಮಾರಸ್ವಾಮಿ

ಇದರ ನಂತರ, ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಆನಂದ್ ವೆಂಕಟೇಶ್, ತಮಿಳುನಾಡು ಸರ್ಕಾರದ ಆದೇಶಕ್ಕೆ ವ್ಯತಿರಿಕ್ತವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದರೆ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿ ಪ್ರಕರಣವನ್ನು ಮುಕ್ತಾಯಗೊಳಿಸಿದರು.

ಮತ್ತು ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲು ಗಣೇಶನೇ ಕೇಳದಿದ್ದಾಗ, ಈ ಆಚರಣೆಗಳಿಂದ ಜನರಿಗೆ ಏನು ಪ್ರಯೋಜನ? ಗಣೇಶ ಮೂರ್ತಿಯಿಂದ ರಾಜಕೀಯ ಮಾಡಲಾಗುತ್ತಿದೆ ಎಂದ ನ್ಯಾಯಾಧೀಶರು, ಇದೆಲ್ಲ ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ರಾಜಕೀಯ

ಬೆಂಗಳೂರು: ಕಾವೇರಿ ಜಲವಿವಾದ ಕುರಿತಂತೆ ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ನಾವು ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ. ಈ ವರೆಗೆ 99 ಟಿಎಂಸಿ ನೀರು ಕೊಡಬೇಕಾಗಿತ್ತು. 37.7 ಟಿಎಂಸಿ ನೀರು ಬಿಡಲಾಗಿದೆ. ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು. ಆದರೆ ಈಗ ನಾಲ್ಕೂ ಜಲಾಶಯಗಳಿಂದ ಲಭ್ಯವಿರುವುದು 53 ಟಿಎಂಸಿ ನೀರು ಮಾತ್ರ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ. ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಸಮಿತಿ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ಎಲ್ಲ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ಕರೆದಿದ್ದೆವು. ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಗೈರಾಗಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ ಎಂಬ ಮಾಹಿತಿಯನ್ನು ನೀಡಿದರು.

ಇದನ್ನೂ ಓದಿ: ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ; ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು! – ಹೆಚ್.ಡಿ.ಕುಮಾರಸ್ವಾಮಿ

ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ. 18 ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು. ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಂಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸಮಿತಿ & ಪ್ರಾಧಿಕಾರದ ಸಭೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆ ಸಭೆಗಳಿಗೆ ಅಧಿಕಾರಿಗಳು ಆನ್‌ʼಲೈನ್‌ʼನಲ್ಲಿ ಹಾಜರಾದರೆ, ನೆರೆರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ಹೀಗಾದರೆ, ರಾಜ್ಯದ ಹಿತರಕ್ಷಣೆ ಹೇಗೆ ಸಾಧ್ಯ? ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ. ಇದು ದುರಂತ ಎಂದು ಕಿಡಿಕಾರಿದ್ದಾರೆ.

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು ಎಂದಿದ್ದಾರೆ.

ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜಕೀಯ

ಬೆಂಗಳೂರು: ದಲಿತರ ಭೂಮಿಯನ್ನು ಕಬಳಿಸಿರುವುದಲ್ಲದೆ, ಅವರ ಮೇಲೆ ದೌರ್ಜನ್ಯ ಎಸಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರಾದ ಡಿ.ಸುಧಾಕರ್ ವಿರುದ್ಧ ನಾಳೆ (13.09.2023) ಬೆಳಿಗ್ಗೆ 11.00 ಗಂಟೆಯ ಸಮಯಕ್ಕೆ ಬೆಂಗಳೂರು ನಗರ ಜೆಡಿಎಸ್ ವತಿಯಿಂದ  ಉಗ್ರ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ.

“ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡರ್ಸ್‌ ಕಂಪನಿಯ ಪಾಲುದಾರರಾದ ಸಚಿವ ಡಿ.ಸುಧಾಕರ್‌ ಅವರು ಮೋಸದಿಂದ ಯಲಹಂಕ ಗ್ರಾಮದ ಸರ್ವೇ ನಂಬರ್‌ 108/1ರ ಜಮೀನು ಕಬಳಿಸಿದ್ದಾರೆ. ಈ ಜಮೀನಿನ ವಿವಾದದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗಲೇ ಸಚಿವರು ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಕುಟುಂಬದ ಮಹಿಳೆಯರನ್ನು ಹೊರಗೆ ಎಳೆದೊಯ್ದು ಜೆಸಿಬಿ ಮೂಲಕ ಮನೆಯನ್ನು ಕೆಡವಿದ್ದಾರೆ” ಎಂದು ಸುಬ್ಬಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಸುಬ್ಬಮ್ಮ ಅವರ ಮಗಳು ಆಶಾ ಮೇಲೂ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಸಚಿವರ ನಡೆಯನ್ನು ಪ್ರಶ್ನೆ ಮಾಡಿದಾಗ ಜಾತಿ ನಿಂದನೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಲಾಗಿದೆ.

ಸುಬ್ಬಮ್ಮ ಹಾಗೂ ಆಶಾ ಎಂಬುವರು ನೀಡಿದ ದೂರು ಆಧರಿಸಿ ಸಚಿವ ಸುಧಾಕರ್‌, ಶ್ರೀನಿವಾಸ್‌ ಮತ್ತು ಭಾಗ್ಯಮ್ಮ ಹಾಗೂ ಇತರ 35 ಮಂದಿ ವಿರುದ್ಧ ದಲಿತರ ಮೇಲೆ ದೌರ್ಜನ್ಯ, ವಂಚನೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಸಚಿವ ಡಿ.ಸುಧಾಕರ್‌ ಅವರು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ ಎಂದು ಯಲಹಂಕ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ!

ದಲಿತರ ಭೂಮಿಯನ್ನು ಕಬಳಿಸಿರುವುದಲ್ಲದೆ, ಅವರ ಮೇಲೆ ದೌರ್ಜನ್ಯ ಎಸಗಿರುವ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ಕೈ ಬಿಡಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿರುವ ಬೆಂಗಳೂರು ನಗರ ಜೆಡಿಎಸ್ ನಾಳೆ ಬೆಳಿಗ್ಗೆ 11.00 ಗಂಟೆಯ ಸಮಯಕ್ಕೆ ಶೇಷಾದ್ರಿ ರಸ್ತೆಯಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡರುಗಳು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಬಿಬಿಎಂಪಿ ಮಾಜಿ ಸದಸ್ಯರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ತಿಳಿಸಿದ್ದಾರೆ.   

ಇದನ್ನೂ ಓದಿ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು! ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ವಿದೇಶ

ಮಾಸ್ಕೋ: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ರಷ್ಯಾದಲ್ಲಿ ಪುಟಿನ್ ಅವರನ್ನು ಭೇಟಿಯಾದರು. ಎರಡೂ ರಾಷ್ಟ್ರಗಳ ಮುಖ್ಯಸ್ಥರು ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ರೈಲಿನಲ್ಲಿ ಪ್ರಯಾಣ:
ಉತ್ತರ ಕೊರಿಯಾ ಮತ್ತು ರಷ್ಯಾ ನಡುವೆ 1,180 ಕಿ.ಮೀ ದೂರವಿದೆ. ಆದರೆ, ಉತ್ತರ ಕೊರಿಯಾದ ಅಧ್ಯಕ್ಷರು ವಿಮಾನದಲ್ಲಿ ಹೋಗುವ ಬದಲು ರೈಲಿನಲ್ಲಿ ಹೊರಟರು. ಶರವೇಗದಲ್ಲಿ ಸೇನಾ ಬಲವನ್ನು ವೃದ್ಧಿಸಿಕೊಳ್ಳುತ್ತಿರುವ ಕಿಮ್ ಜಾಂಗ್ ಉನ್ ವಿಮಾನದಲ್ಲಿ ಪ್ರಯಾಣಿಸದಿರಲು ಅವರ ಪರಂಪರೆಯೇ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು! ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಶಸ್ತ್ರಾಸ್ತ್ರ ಶೃಂಗಸಭೆ:
ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಇಂದು (ಸೆಪ್ಟೆಂಬರ್ 12) ರಷ್ಯಾಕ್ಕೆ ಆಗಮಿಸಿದ್ದಾರೆ. ಅವರ ಪ್ರಯಾಣ ಅಮೆರಿಕ ಸೇರಿದಂತೆ ಹಲವು ಅಂತಾರಾಷ್ಟ್ರೀಯ ದೇಶಗಳ ಗಮನ ಸೆಳೆದಿದೆ. ಈ ಹಿನ್ನಲೆಯಲ್ಲಿ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ರಷ್ಯಾದ ಪುಟಿನ್ ಅವರನ್ನು ಭೇಟಿ ಮಾಡಿದ್ದಾರೆ. ಎರಡೂ ರಾಷ್ಟ್ರಗಳ ಮುಖ್ಯಸ್ಥರು ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ಉಕ್ರೇನ್‌ನ ಯುದ್ಧವನ್ನು ಎದುರಿಸಲು ಪುಟಿನ್ ಉತ್ತರ ಕೊರಿಯಾದಿಂದ ಶಸ್ತ್ರಾಸ್ತ್ರಗಳನ್ನು ಕೋರಿದರು ಎಂದು ವರದಿಯಾಗಿದೆ. ಇದೀಗ ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳ ಅಧ್ಯಕ್ಷರ ಭೇಟಿ ನಡೆದಿದೆ. ಉತ್ತರ ಕೊರಿಯಾದೊಂದಿಗಿನ ಸಹಕಾರವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸುಧಾರಿಸಬೇಕು ಎಂದು ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ರಷ್ಯಾದ ವ್ಯಾಗ್ನರ್ ಪಡೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿರುವ ಉತ್ತರ ಕೊರಿಯಾವನ್ನು ಅಮೆರಿಕಾ  ತೀವ್ರವಾಗಿ ಖಂಡಿಸಿತ್ತು ಎಂಬುದು ಗಮನಾರ್ಹ.

ರಾಜಕೀಯ

ಜೈಪುರ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು ಎಂಬ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜಸ್ಥಾನದ ಪರ್ಮಾರ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ,  “ಸನಾತನದ ವಿರುದ್ಧ ಮಾತನಾಡುವ ಯಾರೂ ದೇಶದಲ್ಲಿ ರಾಜಕೀಯ ಅಧಿಕಾರ ಮತ್ತು ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸನಾತನವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಹೇಳುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಸನಾತನವನ್ನು ಉಳಿಸಲು ಪೂರ್ವಜರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ಆದರೆ ಕೆಲವರು ಅದನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್: ಸುಮಾರು ರೂ 4 ಕೋಟಿ ಮೌಲ್ಯದ ವಸ್ತುಗಳು ಅಮಾನತ್ತು; ಆರೋಪಿ ಅರೆಸ್ಟ್!

ಸನಾತನ ವಿರೋಧಿಸಿದರೆ ನಾಲಿಗೆಯನ್ನು ಕಿತ್ತೊಗೆಯಬೇಕು ಎಂಬ ಕೇಂದ್ರ ಸಚಿವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.