ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
January 2025 » Dynamic Leader
January 4, 2025
Home 2025 January
ಕ್ರೈಂ ರಿಪೋರ್ಟ್ಸ್

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿತ್ತು. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಯಿಸಿದ ರಾಮಚಂದ್ರಪ್ಪ, ಆಕೆಯನ್ನು ತನ್ನ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು.

ವ್ಯಕ್ತಿಯೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದ ಈ ಘಟನೆ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿದೆ.

ಬೆಂಗಳೂರು

ಬೆಂಗಳೂರು: ಪ್ರಪಂಚದಾದ್ಯಂತ ಸಂಚಾರ ದಟ್ಟಣೆಯು ಒಂದು ಪ್ರಮುಖ ಸಮಸ್ಯೆಯಾಗಿ ಹೊರಹೊಮ್ಮಿದೆ. ದೊಡ್ಡ ನಗರಗಳಲ್ಲಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಹೋಗುವುದು ಇತ್ತೀಚಿನ ದಿನಗಳಲ್ಲಿ ಕಷ್ಟಕರವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಹೋಗಬೇಕಾದರೆ ಟ್ರಾಫಿಕ್ ಜಾಮ್ ಗೆ ತಕ್ಕಂತೆ ಸಮಯ ಪ್ಲಾನ್ ಮಾಡಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ, TomTom Traffic Index ಸಂಸ್ಥೆಯು  ಏಷ್ಯಾ ಖಂಡದ 55 ದೇಶಗಳ 387 ನಗರಗಳಲ್ಲಿ ಸಂಚಾರ ದಟ್ಟಣೆ ಕುರಿತು ಅಧ್ಯಯನ ನಡೆಸಿದೆ. ಇದರಲ್ಲಿ, ಏಷ್ಯಾದಲ್ಲೇ ಅತಿ ಹೆಚ್ಚು ಟ್ರಾಫಿಕ್ ಜಾಮ್ ಇರುವ ನಗರ ಭಾರತದ ಬೆಂಗಳೂರು ಪ್ರಥಮ ಸ್ಥಾನ ಪಡೆದಿದೆ.

ಇಲ್ಲಿ, 10 ಕಿ.ಮೀ ದೂರವನ್ನು ಕ್ರಮಿಸಲು 28 ನಿಮಿಷ ಮತ್ತು 10 ಸೆಕೆಂಡುಗಳನ್ನು ತೆಗೆದುಕೊಳ್ಳುತ್ತದೆ ಎಂದು ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ. ಅಲ್ಲದೆ ಬೆಂಗಳೂರು ಮಾತ್ರವಲ್ಲ ಪುಣೆ ಕೂಡ ಸ್ಥಾನವನ್ನು ಪಡೆದಿದೆ. ಇಲ್ಲಿ 10 ಕಿ.ಮೀ ದೂರವನ್ನು ಕ್ರಮಿಸಲು 27 ನಿಮಿಷ 50 ಸೆಕೆಂಡುಗಳನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿಸಿದೆ.

ರಾಜಕೀಯ

ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಅಗ್ರಹಿಸಿದ್ದಾರೆ.

ದೇಶದಲ್ಲಿ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದ್ದು ಜನ ಸಂಕಷ್ಟದಲ್ಲಿ ಇದ್ದಾರೆ. ಇಂಥಹ ಸಂಧರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೆರವು ನೀಡುವ ಬದಲು ರಾಜ್ಯದಲ್ಲೂ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೇ ಎಳೆಯುವ ಕೆಲಸ ಮಾಡುತ್ತಿದೆ.

ಬಸ್ ಪ್ರಯಾಣ ದರ ಇದ್ದಕಿದ್ದಂತೆ 15% ಏರಿಕೆ ಮಾಡುವ ನಿರ್ಧಾರ ಖಂಡನಿಯ. ಗ್ಯಾರಂಟಿ ಯೋಜನೆಯಿಂದ ಆಗುವ ನಷ್ಟದ ಹೊರೆ ಜನರ ಮೇಲೆ ಯಾವುದೇ ಕಾರಣಕ್ಕೂ ಹಾಕಬಾರದು. ಯೋಜನೆ ನಡೆಸಲಿಕ್ಕೆ ಸಮರ್ಥ ಕಾರ್ಯತಂತ್ರ ರೋಪಿಸಬೇಕೆಂದು ಅವರು ಹೇಳಿದ್ದಾರೆ.

ಇನ್ನೊಂದು ಕಡೆ ಕೋವಿಡ್ ಸಂಧರ್ಭದಲ್ಲಿ ತನ್ನ ಪ್ರಾಣ ಕಳೆದುಕೊಂಡ ಸಿಬಂಧಿಗಳ ಕುಟುಂಬಗಳು ಇನ್ನು ತನಕ ಪರಿಹಾರ ಸಿಗದೇ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವರ ಗಮನಕ್ಕೆ ವಿಷಯ ತಂದು ಒಂದು ವರುಷವಾದರೂ ಇನ್ನು ತನಕ ಇದರ ಬಗ್ಗೆ ಯಾವುದೇ ಕ್ರಮ ತಗೆದುಕೊಂಡಿಲ್ಲ.

ಸರ್ಕಾರ ಬೆಲೆ ಹೆಚ್ಚಳ ಮಾಡುವ ಬದಲು ಇಂಥ ಸಮಸ್ಯೆಗಳ ಬಗ್ಗೆ ಕೂಡಲೇ ಗಮನಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ದೇಶ

ನವದೆಹಲಿ: ಸಾರ್ವಜನಿಕರಲ್ಲಿ ಚಲಾವಣೆಯಲ್ಲಿದ್ದ ರೂ.2000 ನೋಟುಗಳಲ್ಲಿ ಶೇ.98.12ರಷ್ಟು ಹಿಂಪಡೆಯಲಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ಅದೇ ಸಮಯದಲ್ಲಿ ರೂ.6,691 ಕೋಟಿ ಮೌಲ್ಯದ ನೋಟುಗಳು ಹಿಂತಿರುಗಲಿಲ್ಲ ಎಂದೂ ಹೇಳಿದೆ.

ಕಳೆದ 2023 ಮೇ 19 ರಂದು ಚಲಾವಣೆಯಲ್ಲಿದ್ದ 2000 ರೂಪಾಯಿ ನೋಟುಗಳನ್ನು ಹಿಂಪಡೆಯುವುದಾಗಿ ರಿಸರ್ವ್ ಬ್ಯಾಂಕ್ ಪ್ರಕಟಿಸಿತ್ತು. ಆಗ ಚಲಾವಣೆಯಲ್ಲಿದ್ದ 2000 ರೂಪಾಯಿ ನೋಟುಗಳ ಮೌಲ್ಯ 3.56 ಲಕ್ಷ ಕೋಟಿ ರೂಪಾಯಿ ಆಗಿತ್ತು. ಈ 2000 ರೂಪಾಯಿ ನೋಟುಗಳನ್ನು ಅಕ್ಟೋಬರ್ 07 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಠೇವಣಿ (Deposit) ಮಾಡಬಹುದು ಎಂದು ಘೋಷಿಸಿತು. ಅಕ್ಟೋಬರ್ 09 ರಿಂದ ಅವುಗಳನ್ನು ರಿಸರ್ವ್ ಬ್ಯಾಂಕ್ ಕಚೇರಿಗಳಲ್ಲಿ ಮಾತ್ರ ಹಿಂಪಡೆಯಲಾಯಿತು. ಇದನ್ನು ಅನುಸರಿಸಿ, ಅಂಚೆ ಮೂಲಕ ಆರ್ ಬಿಐಗೆ ಕಳುಹಿಸಬೇಕು ಎಂದು ಹೇಳಿತ್ತು.

ಈ ಹಿನ್ನೆಲೆಯಲ್ಲಿ, ರಿಸರ್ವ್ ಬ್ಯಾಂಕ್ ಪ್ರಕಟಿಸಿರುವ ಹೇಳಿಕೆಯಲ್ಲಿ: ಡಿಸೆಂಬರ್ 31 ರಂತೆ ಶೇ.98.12ರಷ್ಟು 2000 ನೋಟುಗಳನ್ನು ಹಿಂಪಡೆಯಲಾಗಿದೆ. ಇನ್ನೂ ರೂ.6,691 ಕೋಟಿ ಮೌಲ್ಯದ 2000 ರೂಪಾಯಿ ನೋಟುಗಳು ಮಾತ್ರ ಸರ್ಕಾರಕ್ಕೆ ಬಂದಿಲ್ಲ. ಎಂದು ಆ ವರದಿಯಲ್ಲಿ ತಿಳಿಸಿದೆ.