ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) 819 ಕಾನ್‌ಸ್ಟೆಬಲ್ (ಅಡುಗೆ ಮನೆ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನಾಂಕವಾಗಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 819 ಕಾನ್‌ಸ್ಟೆಬಲ್ (ಅಡುಗೆ ಮನೆ) ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಪುರುಷರಿಗೆ 697 ಮತ್ತು ಮಹಿಳೆಯರಿಗೆ 122 ಸ್ಥಾನಗಳನ್ನು ಮೀಸಲಿಡಲಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಆಹಾರ ತಯಾರಿಕೆ ಅಥವಾ ಅಡುಗೆಯನ್ನು ಅಧ್ಯಯನ ಮಾಡಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಗಳು 18 ವರ್ಷದಿಂದ 25 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
https://recruitment.itbpolice.nic.in/ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದವರಿಗೆ ಅರ್ಜಿ ಶುಲ್ಕ ರೂ.100 ಎಸ್.ಸಿ, ಎಸ್.ಟಿ ಮತ್ತು ಮಾಜಿ ಸೈನಿಕರಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಹೇಗೆ ಆಯ್ಕೆ ಮಾಡಲಾಗುತ್ತದೆ?
ಲಿಖಿತ ಪರೀಕ್ಷೆ ಮತ್ತು ದಾಖಲಾತಿಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ನೀವು ಸೆಪ್ಟೆಂಬರ್ 2 ರಿಂದ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಅಕ್ಟೋಬರ್ 1.