ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನಟ ವಿಜಯ್ Archives » Dynamic Leader
January 3, 2025
Home Posts tagged ನಟ ವಿಜಯ್
ದೇಶ

ಡಿ.ಸಿ.ಪ್ರಕಾಶ್

ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರ ಜೀವಕ್ಕೆ ಅಪಾಯವಿದೆ ಎಂದು ಗುಪ್ತಚರ ಇಲಾಖೆ ಮೂರು ಬಾರಿ ಎಚ್ಚರಿಕೆ ನೀಡಿದ್ದರೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಲಿಲ್ಲ ಎಂದು ವರದಿಯಾಗಿದೆ.

ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದರು. ದಾಳಿಕೋರರಿಂದ ಹಲ್ಲೆಗೊಳಗಾದ ಆರ್ಮ್‌ಸ್ಟ್ರಾಂಗ್ ಅವರನ್ನು ನಿನ್ನೆ ರಾತ್ರಿ ಅಪೋಲೋ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಆರ್ಮ್‌ಸ್ಟ್ರಾಂಗ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಆರ್ಮ್‌ಸ್ಟ್ರಾಂಗ್

ಆರ್ಮ್‌ಸ್ಟ್ರಾಂಗ್ ಹತ್ಯೆ ಖಂಡಿಸಿ ಬಹುಜನ ಸಮಾಜ ಪಕ್ಷದ ಸದಸ್ಯರು ರಸ್ತೆ ತಡೆ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದೇ ವೇಳೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ 8 ಮಂದಿ ಶರಣಾಗಿದ್ದಾರೆ. ತನಿಖೆ ಮುಂದುವರಿದಿದೆ.

ಅವರ ನಿಧನಕ್ಕೆ ತಮಿಳುನಾಡಿನ ಹಲವು ರಾಜಕೀಯ ಪಕ್ಷಗಳು ಸಂತಾಪ ಸೂಚಿಸುತ್ತಿವೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸುತ್ತಿದ್ದಾರೆ. ಆ ನಿಟ್ಟಿನಲ್ಲಿ, ‘ತಮಿಳುನಾಡು ವೆಟ್ರಿ ಕಳಗಂ’ ಅಧ್ಯಕ್ಷ ಮತ್ತು ನಟ ವಿಜಯ್ ಅವರು ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂತಾಪ ಸೂಚಿಸಿದ್ದಾರೆ.

ನಟ ವಿಜಯ್

ಅಲ್ಲದೆ, ತಮಿಳುನಾಡು ಸರಕಾರ ಯಾವುದೇ ರಾಜಿ ಮಾಡಿಕೊಳ್ಳದೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗ ಅವರು ಪ್ರಕಟಿಸಿರುವ ಟ್ವೀಟ್‌ನಲ್ಲಿ, “ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಾದ ಆರ್ಮ್‌ಸ್ಟ್ರಾಂಗ್ ಅವರ ಹತ್ಯೆ ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ.

ಆರ್ಮ್‌ಸ್ಟ್ರಾಂಗ್ ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಳವಾದ ಸಂತಾಪ. ಇನ್ನು ಮುಂದೆ ಇಂತಹ ಘೋರ ಅಪರಾಧಗಳು ನಡೆಯದಂತೆ ತಮಿಳುನಾಡು ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜಿ ಮಾಡಿಕೊಳ್ಳದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಪ್ರತಿಯೊಬ್ಬರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದಿದ್ದಾರೆ.

ಬಿಎಸ್ ಪಿ ನಾಯಕಿ ಮಾಯಾವತಿಯೊಂದಿಗೆ ಆರ್ಮ್‌ಸ್ಟ್ರಾಂಗ್

ಈ ಹಿನ್ನೆಲೆಯಲ್ಲಿ, ಕಳೆದ ಕೆಲವು ದಿನಗಳಿಂದ ಹಂತಕರು ಆರ್ಮ್‌ಸ್ಟ್ರಾಂಗ್‌ ಅವರ ಮೇಲೆ ನಿಗಾ ಇರಿಸಿದ್ದರು ಎಂದು ಹೇಳಲಾಗಿದೆ. ಆರ್ಮ್‌ಸ್ಟ್ರಾಂಗ್ ಅವರ ಜೀವಕ್ಕೆ ಅಪಾಯವಿದೆ ಎಂದು ಗುಪ್ತಚರ ಸೇವೆ ಮತ್ತು ಸಮಗ್ರ ಅಪರಾಧ ತನಿಖಾ ವಿಭಾಗ ಈಗಾಗಲೇ 3 ಬಾರಿ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದರೂ ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ ಎನ್ನಲಾಗಿದೆ.

ಗುಪ್ತಚರ ಸಂಸ್ಥೆ ಮೂರು ಬಾರಿ ಎಚ್ಚರಿಕೆ ನೀಡಿದರೂ ಸೆಂಬಿಯಂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರದಿಯಾಗಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ರಾಜಕೀಯ ಸಿನಿಮಾ

ಚೆನ್ನೈ: ನಟ ವಿಜಯ್, ರಾಜಕೀಯ ರಂಗಕ್ಕೆ ಇಳಿದಿದ್ದಾರೆ. ಅವರ ಪಕ್ಷಕ್ಕೆ “ತಮಿಳಗ ವೆಟ್ರಿ ಕಳಗಂ” ಎಂದು ಹೆಸರಿಟ್ಟಿರುವುದಾಗಿ ಇಂದು ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಇದರ ಬಗ್ಗೆ ಅವರು ಪ್ರಕಟಿಸಿರುವ ಪತ್ರಿಕಾ ಹೇಳಿಕೆಯಲ್ಲಿ, “ವಿಜಯ್ ಪೀಪಲ್ಸ್ ಮೂವ್ಮೆಂಟ್ನ ಹೆಸರಿನಲ್ಲಿ ಅನೇಕ ವರ್ಷಗಳಿಂದ ತನ್ನಿಂದ ಎಷ್ಟು ಸಾಧ್ಯವೋ ಅಷ್ಟು ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಮಾಡುತ್ತಾ ಪರಿಹಾರ ನೆರವುಗಳನ್ನು ನೀಡಿ, ಸಮಾಜ ಸೇವೆ ಮಾಡಿಕೊಂಡು ಬರುತ್ತಿರುವುದು ತಮ್ಮೆಲ್ಲರಿಗೂ ತಿಳಿದಿದೆ.

ಆದಾಗ್ಯೂ, ಸಂಪೂರ್ಣವಾಗಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸುಧಾರಣೆಗಳನ್ನು ತರಲು, ಸ್ವಯಂ ಸೇವಾ ಸಂಸ್ಥೆಯಿಂದ ಸಾಧ್ಯವಿಲ್ಲ, ಅದನ್ನು ಮಾಡಲು ರಾಜಕೀಯ ಶಕ್ತಿಯ ಅಗತ್ಯವಿದೆ.

ಪ್ರಸ್ತುತ ರಾಜಕೀಯ ವಾತಾವರಣ, ಆಡಳಿತಾತ್ಮಕ ಅಸ್ವಸ್ಥತೆಗಳು ಮತ್ತು ‘ಭ್ರಷ್ಟ ರಾಜಕೀಯ ಸಂಸ್ಕೃತಿ’ ಒಂದೆಡೆಯಾದರೆ, ನಮ್ಮ ಜನರನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುವ ‘ವಿಭಜಕ ರಾಜಕೀಯ ಸಂಸ್ಕೃತಿ’ ಮತ್ತೊಂದೆಡೆಯಾಗಿದೆ. ಇದರಿಂದ ನಮ್ಮ ಏಕತೆ ಮತ್ತು ಪ್ರಗತಿಗೆ ಅಡೆತಡೆ ಉಂಟಾಗಿವೆ.

ನಿಸ್ವಾರ್ಥ, ಪಾರದರ್ಶಕ, ಜಾತಿ ರಹಿತ, ದೂರದೃಷ್ಟಿಯ ಆಲೋಚನೆ ಹೊಂದಿದ, ಲಂಚ-ಭ್ರಷ್ಟಾಚಾರ ರಹಿತ ದಕ್ಷ ಆಡಳಿತವನ್ನು ಮುನ್ನಡೆಸಬಲ್ಲ, ಮೂಲಭೂತ ರಾಜಕೀಯ ಬದಲಾವಣೆಗಾಗಿ, ನಿರ್ದಿಷ್ಟವಾಗಿ ಹೇಳುವುದಾದರೆ, ತಮಿಳುನಾಡಿನಲ್ಲಿರುವ ಪ್ರತಿಯೊಬ್ಬರೂ ಅದಕ್ಕಾಗಿ ಹಾತೊರೆಯುತ್ತಿದ್ದಾರೆ ಎಂಬುದು ವಾಸ್ತವಿಕ ಸತ್ಯವಾಗಿದೆ. ಅಂತಹ ಮೂಲಭೂತ ರಾಜಕೀಯ ಬದಲಾವಣೆಯನ್ನು, ಜನರ ಒಮ್ಮತದ ಅಭಿಮಾನ ಮತ್ತು ಪ್ರೀತಿಯನ್ನು ಪಡೆದ ಪ್ರಮುಖವಾದ ಒಂದು ಜನಶಕ್ತಿಯ ಮೂಲಕವೇ ಸಾಧ್ಯವಾಗಿಸಬಹುದಾಗಿದೆ.

ಅದರಂತೆ ನನ್ನ ನೇತೃತ್ವದಲ್ಲಿ “ತಮಿಳಗ ವೆಟ್ರಿ ಕಳಗಂ” ಎಂಬ ಹೆಸರಿನಲ್ಲಿ ರಾಜಕೀಯ ಪಕ್ಷವನ್ನು ಆರಂಭಿಸಿ, ಭಾರತದ ಮುಖ್ಯ ಚುನಾವಣಾ ಆಯೋಗದಲ್ಲಿ ನೋಂದಾಯಿಸಲು ನಮ್ಮ ಪಕ್ಷದ ಪರವಾಗಿ ಇಂದು ಅರ್ಜಿ ಸಲ್ಲಿಸಲಾಗಿದೆ. ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಜನರು ಬಯಸುವ ಮೂಲಭೂತ ರಾಜಕೀಯ ಬದಲಾವಣೆಗೆ ಕಾರಣವಾಗುವುದು ನಮ್ಮ ಗುರಿಯಾಗಿದೆ.

ಚುನಾವಣಾ ಆಯೋಗದ ಅನುಮೋದನೆ ಪಡೆದ ನಂತರ, ಮುಂಬರುವ ಸಂಸತ್ತಿನ ಚುನಾವಣೆ ಮುಗಿದ ಮೇಲೆ, ತಮಿಳುನಾಡಿಗೆ ಸಂಬಂಧಿಸಿದ ನೀತಿಗಳ ಯಶಸ್ಸಿಗೆ ಮತ್ತು ತಮಿಳುನಾಡಿನ ಜನರ ಉನ್ನತಿಗಾಗಿ ನಮ್ಮ ಪಕ್ಷದ ನೀತಿ, ನಿಯಮಗಳು, ಧ್ವಜ, ಚಿಹ್ನೆ ಮತ್ತು ಕ್ರಿಯಾ ಯೋಜನೆಗಳನ್ನು ಮುಂದಿಟ್ಟು, ಸಾರ್ವಜನಿಕ ಸಭೆ ಸಮಾರಂಭಗಳೊಂದಿಗೆ ತಮಿಳುನಾಡಿನ ಜನತೆಗಾಗಿ ನಮ್ಮ ರಾಜಕೀಯ ಪಯಣ ಆರಂಭವಾಗಲಿದೆ.

ಮುಂಬರುವ 2024ರ ಸಂಸತ್ ಚುನಾವಣೆಯಲ್ಲಿ ನಾವು ಸ್ಪರ್ಧಿಸುವುದಿಲ್ಲ, ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸಾಮಾನ್ಯ ಸಭೆ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ನನ್ನ ಮಟ್ಟಿಗೆ ಹೇಳುವುದಾದರೆ, ರಾಜಕೀಯವು ಕೇವಲ ಇನ್ನೊಂದು ವೃತ್ತಿಯಲ್ಲ; ರಾಜಕೀಯ ನನ್ನ ಹವ್ಯಾಸವಲ್ಲ; ಅದು ನನ್ನ ಆಳವಾದ ಆಸೆ. ಅದರಲ್ಲಿ ನನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಬಯಸುತ್ತೇನೆ.

ನನ್ನ ಪರವಾಗಿ, ನಾನು ಈಗಾಗಲೇ ಒಪ್ಪಿಕೊಂಡಿರುವ ಮತ್ತೊಂದು ಚಲನಚಿತ್ರ ಸಂಬಂಧಿತ ಕೆಲಸಗಳನ್ನು, ಪಕ್ಷದ ಕೆಲಸಕ್ಕೆ ಅಡ್ಡಿಯಾಗದ ರೀತಿಯಲ್ಲಿ ಮುಗಿಸಿಕೊಟ್ಟ ನಂತರ, ನಾನು ಸಂಪೂರ್ಣವಾಗಿ ಜನಸೇವೆಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.  

ಸಿನಿಮಾ

ವರದಿ: ಅರುಣ್ ಜಿ.,

ವಿಜಯ್ ಅಭಿನಯದ ಲೋಕೇಶ್ ಕನಕರಾಜ್ ನಿರ್ದೇಶನದ ‘ಲಿಯೋ’ ಚಿತ್ರವು ಅದ್ಧೂರಿಯಾಗಿ ತೆರೆಕಾಣುವ ಅಂತಿಮ ಹಂತದ ತಯಾರಿಯಲ್ಲಿದೆ. ಚಿತ್ರದ ಶೂಟಿಂಗ್ ಅಂತಿಮ ಹಂತ ತಲುಪುತ್ತಿರುವ ಹಿನ್ನಲೆಯಲ್ಲಿ, ವಿಜಯ್ ಹುಟ್ಟುಹಬ್ಬದ ಸಂದರ್ಭದಲ್ಲಿ ಲೋಕೇಶ್ ಕನಕರಾಜ್ ಮಧ್ಯರಾತ್ರಿ 12 ಗಂಟೆಗೆ ‘ಲಿಯೋ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಮತ್ತೆ ನಿಮ್ಮೊಂದಿಗೆ ಕೈ ಜೋಡಿಸಲು ಖುಷಿಯಾಗುತ್ತಿದೆ ಅಣ್ಣಾ’ ಎಂದು ಲೋಕೇಶ್ ಕನಕರಾಜ್ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

ಫಸ್ಟ್ ಲುಕ್ ಪೋಸ್ಟರ್ ನಲ್ಲಿ ವಿಜಯ್ ಕೈಯಲ್ಲಿ ಸುತ್ತಿಗೆ ಹಿಡಿದು ರಕ್ತ ಚೆಲ್ಲುತ್ತಾ ಆಕ್ರಮಣಕಾರಿಯಾಗಿ ಕಾಣುತ್ತಿದ್ದಾರೆ. ಹಿಮಾವೃತ ಪರ್ವತಗಳು ಹಿನ್ನಲೆಯಲ್ಲಿವೆ. ಜೊತೆಯಲ್ಲೇ In the WORLD Of Untamed Rivers, Calm Water Either Become Divine GOD or Dreaded DEMONS ಎಂಬ ಸಂಭಾಷಣೆ ಎದ್ದು ಕಾಣುತ್ತಿವೆ. ಇದರ ಅರ್ಥ, ಕಡಿವಾಣವಿಲ್ಲದ ನದಿಗಳ ಜಗತ್ತಿನಲ್ಲಿ ಶಾಂತ ನೀರು, ದೈವಿಕ ದೇವತೆಗಳಂತೆ ಅಥವಾ ಬಯಾನಕ ದೆವ್ವಗಳಂತೆ ರೂಪಾಂತರಗೊಳ್ಳಬಹುದು” ಎಂಬುದಾಗಿದೆ.

ಲಿಯೋ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆದ ನಂತರ ವಿಜಯ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಅಲ್ಲದೇ ಇಂದು ವಿಜಯ್ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಮೊದಲ ಸಿಂಗಲ್ ಸಾಂಗ್ ‘ನಾ ರೆಡಿ’ ಬಿಡುಗಡೆಯಾಗಿ ಗಮನ ಸೆಳೆದಿದೆ.