ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸನಾತನ Archives » Dynamic Leader
November 21, 2024
Home Posts tagged ಸನಾತನ
ದೇಶ

ಬೆಂಗಳೂರು: ಸನಾತನ ಧರ್ಮ ಭಾಷಣದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇಂದು ಬೆಂಗಳೂರಿನ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸನಾತನ ವಿರೋಧಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಭಾರತದಾದ್ಯಂತ ಸಂಚಲನ ಮೂಡಿಸಿದ್ದರು. ‘ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಹಾಗಾಗಿ ಸನಾತನ ಧರ್ಮವನ್ನು ತೊಲಗಿಸಬೇಕು’ ಎಂದು ಉದಯನಿಧಿ ಸ್ಟಾಲಿನ್ ಮಾಡಿದ ಭಾಷಣವನ್ನು ಬಿಜೆಪಿ ಮತ್ತು ಬಲಪಂಥೀಯರು ತೀವ್ರವಾಗಿ ಖಂಡಿಸಿದ್ದರು ಮತ್ತು ಪ್ರತಿಭಟನೆಗಳನ್ನು ಸಹ ನಡೆಸಿದ್ದರು. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಯವರೇ ತಮ್ಮ ಸಂಪುಟದ ಸಚಿವರೊಂದಿಗೆ ಮಾತನಾಡಿದ್ದರು.

ಅಲ್ಲದೆ, ಸನಾತನ ಧರ್ಮದ ಕುರಿತು ಉದಯನಿಧಿ ಅವರ ಭಾಷಣದ ವಿರುದ್ಧ ನ್ಯಾಯಾಲಯಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು. ಆ ಮೂಲಕ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ ಉದಯನಿಧಿ, ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾದರು.

ಉದಯನಿಧಿ ಕಡೆಯಿಂದ ಸನಾತನ ಭಾಷಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಕ್ರೋಢೀಕರಿಸಿ ಒಂದೇ ಸ್ಥಳದಲ್ಲಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಪ್ರಕರಣದ ವಿಚಾರಣೆ ಬಾಕಿ ಇದೆ. ಈ ಬಗ್ಗೆ ದೂರುದಾರರು ಉತ್ತರ ನೀಡಬೇಕಾಗಿದೆ ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು.

ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿದರು. ಈ ಪ್ರಕರಣದಲ್ಲಿ ಉದಯನಿಧಿ ಸ್ಟಾಲಿನ್‌ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು 1 ಲಕ್ಷ ರೂಪಾಯಿ ಬಾಂಡ್ ಪಾವತಿಸುವಂತೆ ಆದೇಶಿಸಿದ್ದಾರೆ.

ವಿದೇಶ

ಬ್ಯಾಂಕಾಕ್: ಜಗತ್ತಿನಾದ್ಯಂತ ಇರುವ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸಿ ಬಲಪಡಿಸಲು ಹಾಗೂ ಸನಾತನ ಧರ್ಮ ವಿರೋಧಿ ಹೋರಾಟಕ್ಕೆ ತಕ್ಕ ಉತ್ತರ ನೀಡುವುದು ಸೇರಿದಂತೆ ಮಹತ್ವದ ನಿರ್ಣಯಗಳನ್ನು ವಿಶ್ವ ಹಿಂದೂ ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು.

ಆಗ್ನೇಯ ಏಷ್ಯಾದ ದೇಶವಾದ ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್‌ನಲ್ಲಿ, ‘ವಿಶ್ವ ಹಿಂದೂ ಕಾಂಗ್ರೆಸ್ 2023’ ಸಮ್ಮೇಳನವು ಇದೇ 24 ರಂದು ಪ್ರಾರಂಭವಾಗಿ ನಿನ್ನೆ ಕೊನೆಗೊಂಡಿತು. ಥೈಲ್ಯಾಂಡ್‌ ಪ್ರಧಾನಿ ಶ್ರೇತಾ ಥಾವಿಸಿನ್ ಅವರು ಉದ್ಘಾಟಿಸಿದ ಈ ಸಮ್ಮೇಳನದಲ್ಲಿ 61 ದೇಶಗಳ 2,100 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಇದರಲ್ಲಿ ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಸೇರಿದಂತೆ ಹಲವರು ಭಾಗವಹಿಸಿದ್ದರು. ಅಂತಿಮ ದಿನವಾದ ನಿನ್ನೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಇದರಲ್ಲಿ ಜಗತ್ತಿನಾದ್ಯಂತ ಇರುವ ಹಿಂದೂ ಸಂಘಟನೆಗಳನ್ನು ಕ್ರೋಢೀಕರಿಸಿ ಬಲಪಡಿಸಬೇಕು, ಸನಾತನ ಧರ್ಮದ ವಿರುದ್ಧದ ಅಭಿಪ್ರಾಯಗಳಿಗೆ ತಕ್ಕ ಉತ್ತರ ನೀಡಬೇಕು ಸೇರಿದಂತೆ ನಾನಾ ನಿರ್ಣಯಗಳನ್ನು ಅಂಗೀಕರಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ವಿಶ್ವ ಹಿಂದೂ ಸಮ್ಮೇಳನದ ಸಂಸ್ಥಾಪಕ ಸ್ವಾಮಿ ವಿಜ್ಞಾನಾನಂದ ಅವರು ಮಾತನಾಡಿದರು.

“ಕರೋನಾ ಅವಧಿಯಲ್ಲಿ ಹಿಂದೂಗಳನ್ನು ಸಂಘಟಿಸುವುದರಲ್ಲಿ ಕುಸಿತ ಕಂಡುಬಂದಿತು; ಈಗ ಈ ಚಟುವಟಿಕೆ ಪುನಶ್ಚೇತನಗೊಂಡಿದೆ. ಕ್ರೈಸ್ತ ಸಂಘಟನೆಗಳ ವಶದಲ್ಲಿರುವ ಹಿಂದೂ ದೇವಾಲಯದ ಭೂಮಿಯನ್ನು ವಾಪಸ್ ಪಡೆಯಬೇಕು. ಅದಕ್ಕಾಗಿ ಕಾನೂನು ಕ್ರಮವನ್ನೂ ಕೈಗೊಳ್ಳಬೇಕು” ಎಂದು ಹೇಳಿದರು.

ದೇಶ

ಚೆನ್ನೈ: ಸನಾತನ ಕುರಿತು ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದು ವಿವಾದಕ್ಕೀಡಾಗಿದ್ದು ಇದಕ್ಕೆ ಸಂಬಂಧಿಸಿದ ಪ್ರಕರಣ ಚೆನ್ನೈ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರಂತೆ ಇಂದು ಪ್ರಕರಣದ ವಿಚಾರಣೆ ನಡೆದಾಗ ಉದಯನಿಧಿ ಪರವಾಗಿ ವಾದ ಮಂಡಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸನಾತನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸನಾತನ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಕ್ವೋ ವಾರಾಂಟೊ (Quo Warranto) ಪ್ರಕರಣವನ್ನು ವಜಾಗೊಳಿಸಬೇಕು. ಆರೋಪಿಗಳನ್ನು ಸಾಕ್ಷ್ಯ ಕೇಳುವುದು ಸಂವಿಧಾನ ಬಾಹಿರ.

ಆರೋಪ ಸಾಬೀತುಪಡಿಸಲು ಅರ್ಜಿದಾರರೇ ಸಾಕ್ಷ್ಯ ಸಲ್ಲಿಸಬೇಕು ಎಂದು ಸಚಿವ ಉದಯನಿಧಿ ಸ್ಟಾಲಿನ್ ಪರವಾಗಿ ವಾದಿಸಲಾಯಿತು. ಆದ್ದರಿಂದ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ವಿಫಲವಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಮನವಿ ಮಾಡಲಾಗಿತ್ತು.

ನಂತರ, ಮದ್ರಾಸ್ ಹೈಕೋರ್ಟ್ ಸಚಿವರಾದ ಉದಯನಿಧಿ ಸ್ಟಾಲಿನ್, ಶೇಖರ್ ಬಾಬು ಮತ್ತು ಇತರರ ವಿರುದ್ಧದ ಪ್ರಕರಣವನ್ನು ನವೆಂಬರ್ 7 ಕ್ಕೆ ಮುಂದೂಡಿತು.

ರಾಜಕೀಯ

ಹೈದರಾಬಾದ್: ತಮಿಳುನಾಡಿನಲ್ಲಿರುವ ಹಿಂದೂ ದೇವಾಲಯಗಳನ್ನು ಡಿಎಂಕೆ ಸರ್ಕಾರ ಅತಿಕ್ರಮಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಬಹಿರಂಗ ಆರೋಪ ದೇಶಾದ್ಯಂತ ಸಂಚಲನ ಮೂಡಿಸಿದೆ. ಬಿಜೆಪಿ ಈಗಾಗಲೇ ‘ಸನಾತನ’ ವಿಚಾರದಲ್ಲಿ ಡಿಎಂಕೆ ವಿರುದ್ಧ ಭಾರತದಾದ್ಯಂತ ಪ್ರಚಾರ ನಡೆಸುತ್ತಿದ್ದು, ಈ ಆರೋಪವನ್ನು ಪ್ರಧಾನಿ ಮೋದಿ ಸಾರ್ವಜನಿಕವಾಗಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ತೆಲಂಗಾಣ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಭಾರತೀಯ ರಾಷ್ಟ್ರ ಸಮಿತಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ತೆಲಂಗಾಣದಲ್ಲಿ ಇಲ್ಲಿಯವರೆಗೆ ನೆಲೆ ಸ್ಥಾಪಿಸದ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಗಮನಾರ್ಹ ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದರಿಂದ ತೆಲಂಗಾಣದಲ್ಲಿ ಈ ಬಾರಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಕಸರತ್ತು ನಡೆಸುತ್ತಿದೆ.

ಇದನ್ನೂ ಓದಿ: ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ದಲಿತ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಹಿಷ್ಕಾರ!

ಆ ನಿಟ್ಟಿನಲ್ಲಿ ಇಂದು ತೆಲಂಗಾಣದ ನಿಜಾಮಾಬಾದ್‌ನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಭಾಷಣ ಮಾಡಿದರು. ತಮ್ಮ ಭಾಷಣದ ಭಾಗವಾಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವನ್ನೂ ಮೋದಿ ಟೀಕಿಸಿ ಮಾತನಾಡಿದರು.

“ತಮಿಳುನಾಡಿನಲ್ಲಿ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಹಿಂದೂ ಜನರ ಜೀವ ಉಸಿರಾದ ಸನಾತನ ಧರ್ಮ ನಾಶವಾಗಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಅದರ ಭಾಗವಾಗಿ ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಹಿಂದೂ ದೇವಾಲಯಗಳನ್ನು ತಮಿಳುನಾಡು ಸರ್ಕಾರ ವಶಪಡಿಸಿಕೊಂಡಿದೆ. ಇದು ಅತ್ಯಂತ ದೊಡ್ಡ ಅರಾಜಕತೆ.

ಇದನ್ನೂ ಓದಿ: 19 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ: ಅಕ್ಟೋಬರ್ 14 ರಂದು ಅಮೇರಿಕಾದಲ್ಲಿ ಅನಾವರಣ!

ಹಿಂದೂ ದೇವಾಲಯಗಳ ನಿಯಂತ್ರಣದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ದನಿಯೆತ್ತಿದೆ? ಕಾಂಗ್ರೆಸಿಗೆ ಧೈರ್ಯವಿದ್ದರೆ ಅವರು ತಮಿಳುನಾಡಿನಲ್ಲಿ ಹಾಗೆ ಹೇಳಲು ಸಾಧ್ಯವೇ? ನೀವು (ಕಾಂಗ್ರೆಸ್) ಡಿಎಂಕೆ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ; ಹಾಗಾಗಿ ಹಿಂದೂ ದೇವಾಲಯಗಳ ನಿರ್ವಹಣೆಯಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ನೀವು ಡಿಎಂಕೆಗೆ ಹೇಳಬೇಕು” ಎಂದು ಮೋದಿ ಹೇಳಿದಾರೆ.

ರಾಜಕೀಯ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಶತಮಾನೋತ್ಸವದ ಪ್ರಯುಕ್ತ ತಿರು.ವಿ.ಕ.ನಗರದಲ್ಲಿ ಡಿಎಂಕೆ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ವೈಕೋ (ವೈ.ಗೋಪಾಲಸ್ವಾಮಿ),

“ಭಾರತದ ಉತ್ತರ ಭಾಗಗಳನ್ನು ಆಳಿದ ಚಂದ್ರಗುಪ್ತ ಮೌರ್ಯ ಎಂದಿಗೂ ತಮಿಳುನಾಡಿಗೆ ಕಾಲಿಡಲಿಲ್ಲ. ಆದರೆ, ತಮಿಳುನಾಡಿನ ರಾಜರು ಗಂಗೆಯವರೆಗೂ ಆಳಿದ್ದಾರೆ. ಚೇರ, ಚೋಳ ಮತ್ತು ಪಾಂಡ್ಯರು ಮಲೇಷ್ಯಾ ಮತ್ತು ಥೈಲ್ಯಾಂಡ್ ಮುಂತಾದ ವಿದೇಶಗಳನ್ನು ಗೆದ್ದು ಆಳಿದ್ದಾರೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಭಾರತ ಎಂಬ ಸನಾತನವನ್ನು ಮುನ್ನೆಲೆಗೆ ತರುವುದಾದರೆ ಭಾರತ ಛಿದ್ರವಾಗಿ ಬಿಡುತ್ತದೆ ಎಂಬುದನ್ನು ಇಂದಿನ ಆಡಳಿತಗಾರರು ತಿಳಿದುಕೊಳ್ಳಬೇಕು.

ಭಾರತ ಎಂಬುದು ಒಂದು ದೇಶವಲ್ಲ; ರಾಜ್ಯಗಳಿಂದ ಕೂಡಿದ ಒಕ್ಕೂಟ. ಚಕ್ರವರ್ತಿ ಅಕ್ಬರನ ಕಾಲದಲ್ಲೂ ಭಾರತ ಒಂದಾಗಿರಲಿಲ್ಲ; ಬ್ರಿಟಿಷರ ಅವಧಿಯಲ್ಲಿ ವಿವಿಧ ಘಟನೆಗಳ ನಂತರ ಭಾರತವು ಒಕ್ಕೂಟವಾಗಿ ರೂಪುಗೊಂಡಿತು.

ಅವರು ‘ಭಾರತ್’ ಎಂದು ಹೇಳಿಕೊಂಡು, ಹಿಟ್ಲರ್ ಮತ್ತು ಮುಸೊಲಿನಿಯಂತೆ ಸರ್ವಾಧಿಕಾರಿಗಳಾಗಿ ಎಂದು ವರ್ತಿಸುತ್ತಾರೋ ಅಂದು ಭಾರತ ಛಿದ್ರ ಛಿದ್ರವಾಗಿ ಹೋಗಿ ಬಿಡುತ್ತದೆ.” ಎಂದು ಹೇಳಿದರು. ಕಳೆದ ಕೆಲವು ದಿನಗಳಿಂದ ದೇಶದ ಹೆಸರನ್ನು ಭಾರತ್ ಎಂದು ಬದಲಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದನ್ನು ವೈಕೋ ಈ ರೀತಿ ಟೀಕಿಸಿದ್ದಾರೆ.

ರಾಜಕೀಯ

ಬೆಂಗಳೂರು: ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾಗಿದೆ. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ. ನರೇಂದ್ರ ಮೋದಿ ಅವರು ಇನ್ನೂ ಆರ್‌ಎಸ್‌ಎಸ್‌ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಒಂದು ದೇಶ; ಒಂದೇ ಚುನಾವಣೆ ಎಂಬುದನ್ನು ಪ್ರಾಯೋಗಿಕ ಪಡಿಸಲು ಸಾಧ್ಯವಿರುವ ಅಂಶಗಳನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಪ್ರಥಮವಾಗಿ ಸಮಾಲೋಚನೆ ನಡೆಸಿತು. ಈ ಸಭೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿದ್ದರು.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ!

ಒಂದು ದೇಶ; ಒಂದೇ ಚುನಾವಣಾ ಜಾರಿಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲು, ಮಾಜಿ ರಾಷ್ಟ್ರಪತಿ ರಾಮನಾಥ್ ಗೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿತು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್, ಲೋಕಸಭೆ ಮಾಜಿ ಕಾರ್ಯದರ್ಶಿ ಸುಭಾಷ್ ಸಿ.ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಆಯುಕ್ತ ಸಂಜಯ್ ಕೊಠಾರಿ ಇದ್ದಾರೆ. ಆದರೆ ಅಧೀರ್ ರಂಜನ್ ಚೌಧರಿ ಈ ಗುಂಪಿನ ಭಾಗವಾಗಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಈ ಹಿನ್ನಲೆಯಲ್ಲಿ ಈ ಸಮಿತಿಯ ಮೊದಲ ಸಭೆ ಇಂದು ನಡೆಯಿತು. ರಾಮ್ ನಾಥ್ ಕೋವಿಂದ್ ಅವರ ನಿವಾಸದಲ್ಲಿ ಸಭೆ ನಡೆದಿದ್ದು, ಕೇಂದ್ರ ಸಚಿವರಾದ ಅಮಿತ್ ಶಾ, ಅರ್ಜುನ್ ರಾಮ್ ಮೇವಾಲ್ ಮತ್ತಿತರರು ಉಪಸ್ಥಿತರಿದ್ದರು. ಒಂದು ದೇಶ; ಒಂದೇ ಚುನಾವಣೆ ಪ್ರಕ್ರಿಯೆಯ ಸಾಧಕ-ಬಾಧಕಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ!