ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಅಕ್ರಮ ಹಣ ವರ್ಗಾವಣೆ Archives » Dynamic Leader
November 24, 2024
Home Posts tagged ಅಕ್ರಮ ಹಣ ವರ್ಗಾವಣೆ
ದೇಶ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಜಾರಿ ಇಲಾಖೆ ಮಾರ್ಚ್ 15 ರಂದು ಬಂಧಿಸಿತ್ತು.

ನಂತರ ಜಾರಿ ಅಧಿಕಾರಿಗಳು ಅವರನ್ನು 10 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆಯ ನಂತರ ದೆಹಲಿಯ ತಿಹಾರ್ ಜೈಲಿನಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಈ ಹಿನ್ನಲೆಯಲ್ಲಿ, ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕವಿತಾ ಅವರನ್ನು ಇಂದು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.

ಆಗ ಅವರ ನ್ಯಾಯಾಂಗ ಬಂಧನವನ್ನು ಇದೇ ಏಪ್ರಿಲ್ 23 ರವರೆಗೆ ವಿಸ್ತರಿಸಿ ನ್ಯಾಯಾಲಯವು ಆದೇಶಿಸಿತು. ಏತ್ಮದ್ಯೆ, ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕಾವಿತಾ, “ಇದು ಸಿಬಿಐ ಕಸ್ಟಡಿಯಲ್ಲ, ಬಿಜೆಪಿ ಕಸ್ಟಡಿ. ಬಿಜೆಪಿ ಹೊರಗೆ ಏನು ಮಾತನಾಡುತ್ತಿದೆಯೋ ಅದನ್ನೇ ಸಿಬಿಐ ಒಳಗೆ ಕೇಳುತ್ತಿದೆ. 2 ವರ್ಷಗಳಿಂದ ಮತೆ ಮತ್ತೆ ಕೇಳುತ್ತಿದೆ, ಹೊಸದು ಏನು ಇಲ್ಲ”. ಎಂದು ಹೇಳಿದರು.     

ದೇಶ

ನವದೆಹಲಿ: ಆಪಾದಿತ ಅಬಕಾರಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನವಾಗಿದ್ದ ಕೇಜ್ರಿವಾಲ್ ಅವರ ಬಂಧನವನ್ನು ದೆಹಲಿ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ಗಳನ್ನು ನಿರಾಕರಿಸಿ, ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿತ್ತು.

ಈ ಹಿನ್ನಲೆಯಲ್ಲಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಕೇಜ್ರಿವಾಲ್‌ ಬಂಧನವು ಆ ಪಕ್ಷ ಸ್ವಲ್ಪ ಮಟ್ಟಿಗೆ ಹಿನ್ನಡೆಯಾದೆ.

ದೇಶ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಸೆಂಥಿಲ್ ಬಾಲಾಜಿ ಮತ್ತು ಇತರರ ಮನೆಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಸೆಂಥಿಲ್ ಬಾಲಾಜಿಯನ್ನು ಬಂಧಿಸಿ, ಅವರನ್ನು ವಿಚಾರಣೆಗೆ ಕರೆದೊಯ್ದರು. ಆಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸೆಂಥಿಲ್ ಬಾಲಾಜಿ ತಮಿಳುನಾಡು ಇಂಧನ ಸಚಿವರಾಗಿದ್ದಾರೆ. ಅವರು ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಆಗ 81 ಮಂದಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ, 1.62 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಈ ವಿಚಾರದಲ್ಲಿ ನಡೆದ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸೆಂಥಿಲಬಾಲಾಜಿ, ಅವರ ಸಹೋದರನ ಮನೆ ಹಾಗೂ ಅವರ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾನೂನುಬಾಹಿರ ಹಣ ವರ್ಗಾವಣೆ ನಿಷೇಧ ಕಾಯಿದೆ ಅಡಿಯಲ್ಲಿ ಇಡಿ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಶಸ್ತ್ರ ಅರೆಸೇನಾ ಪಡೆಗಳ ರಕ್ಷಣೆಯೊಂದಿಗೆ ಚೆನ್ನೈ ಗ್ರೀನ್‌ವೇಸ್ ರಸ್ತೆಯಲ್ಲಿರುವ ಸಚಿವ ಸೆಂಥಿಲ್ ಬಾಲಾಜಿ ಅವರ ಬಂಗಲೆ ಮತ್ತು ಮಂದೈವೆಳಿ ಬಿಷಪ್ ಗಾರ್ಡನ್ ಪ್ರದೇಶದಲ್ಲಿರುವ ಅವರ ಸಹೋದರ ಅಶೋಕ್ ಕುಮಾರ್ ಮನೆಯಲ್ಲಿ ಇಡಿ ಅಧಿಕಾರಿಗಳು ನಿನ್ನೆ ಬೆಳಿಗ್ಗೆ 8:30ಕ್ಕೆ ತನಿಖೆ ಪ್ರಾರಂಭಿಸಿ, ಮಧ್ಯರಾತ್ರಿ 1:30ಕ್ಕೆ ಪೂರ್ಣಗೊಳಿಸಿದರು.

ನಂತರ ಮಧ್ಯರಾತ್ರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿ, ವಿಚಾರಣೆಗಾಗಿ ನುಂಗಮ್ ಪಾಕ್ಕಂನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದರು. ಆಗ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ. ನಂತರ ಅವರನ್ನು ಓಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ.

ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವಿಷಯ ತಿಳಿದು, ಸಚಿವರಾದ ಎಂ.ಸುಬ್ರಮಣಿಯನ್, ಎ.ವಿ.ವೇಲು, ಶೇಖರ್ ಬಾಬು, ಮತ್ತು ಉದಯನಿಧಿ ಸ್ಟಾಲಿನ್ ಮುಂತಾದವರು ಯೋಗಕ್ಷೇಮ ವಿಚಾರಿಸಲಿಕ್ಕಾಗಿ, ಓಮಂದೂರಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

‘ಸೆಂಥಿಲ್ ಬಾಲಾಜಿ ಬಂಧನದ ಬಗ್ಗೆ ಸಂಬಂಧಿಕರಿಗೂ ಮಾಹಿತಿ ನೀಡಿಲ್ಲ. ಅವರನ್ನು ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬುದೂ ತಿಳಿದುಬಂದಿಲ್ಲ. ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಗೊತ್ತಿಲ್ಲ. ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇದು ಸಂಪೂರ್ಣ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

TAMILNADU MINISTER V.SENTHIL BALAJI ARRESTED IN MONEY LAUNDERING CASE 
The Enforcement Directorate arrested Tamil Nadu Electricity Minister V. Senthil Balaji in a money-laundering case on Wednesday early morning. The arrest came after an 18-hour questioning at Senthilbalaji’s residence in Chennai, according to a report by The Hindu.