ಅಯೋಧ್ಯೆ: ವಿದೇಶಿ ದೇಣಿಗೆ ಸ್ವೀಕರಿಸಲು ಅಯೋಧ್ಯೆ ರಾಮಮಂದಿರದಲ್ಲಿರುವ ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಎಂಬ ಟ್ರಸ್ಟ್‌ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5, 2020 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. 2.7 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದು, ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ. ಜನವರಿ 2024ರಲ್ಲಿ ರಾಮ ವಿಗ್ರಹಗಳ ಪ್ರತಿಷ್ಠಾಪನೆಯ ನಂತರ ದೇವಾಲಯವನ್ನು ಭಕ್ತರಿಗೆ ಔಪಚಾರಿಕವಾಗಿ ತೆರೆಯಲಾಗುವುದು ಎಂದು ವರದಿಯಾಗಿದೆ.
ಈ ಹಿನ್ನಲೆಯಲ್ಲಿ ವಿದೇಶಿ ದೇಣಿಗೆ ಸ್ವೀಕರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮಾತನಾಡಿರುವ ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಪ್ರಧಾನ ಕಾರ್ಯದರ್ಶಿ ಸಂಪತ್ ರಾಯ್, “ವಿದೇಶಿ ದೇಣಿಗೆ ಸ್ವೀಕರಿಸಲು ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಸ್ವೀಕರಿಸಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಪ್ರತಿಷ್ಠಾನಕ್ಕೆ ವಿದೇಶಿ ನಿಧಿ ಪಡೆಯಲು ಅನುಮೋದನೆ ನೀಡಲಾಗಿದೆ” ಎಂದರು.