ನನ್ನ ಶಕ್ತಿ, ನನ್ನ ಅಜ್ಜಿ; ನೀವು ಸರ್ವಸ್ವವನ್ನೂ ತ್ಯಾಗ ಮಾಡಿದ ಭಾರತವನ್ನು ನಾನು ಸದಾ ರಕ್ಷಿಸುತ್ತೇನೆ: ರಾಹುಲ್ ಗಾಂಧಿ
ನವದೆಹಲಿ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಮೊಮ್ಮಗ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ‘ನನ್ನ ಶಕ್ತಿ, ನನ್ನ ಅಜ್ಜಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಅವರ ಸ್ಮಾರಕಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದರು.
ಈ ಹಿನ್ನಲೆಯಲ್ಲಿ, ಇಂದಿರಾಗಾಂಧಿ ಅವರನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್ ನಲ್ಲಿ, “ನನ್ನ ಶಕ್ತಿ, ನನ್ನ ಅಜ್ಜಿ! ನೀವು ಸರ್ವಸ್ವವನ್ನೂ ತ್ಯಾಗ ಮಾಡಿದ ಭಾರತವನ್ನು ನಾನು ಸದಾ ರಕ್ಷಿಸುತ್ತೇನೆ. ನಿಮ್ಮ ನೆನಪುಗಳು ಸದಾ ನನ್ನೊಂದಿಗೆ, ನನ್ನ ಹೃದಯದಲ್ಲಿ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅಲ್ಲದೇ ಇಂದಿರಾ ಕುರಿತ ತಮ್ಮ ನೆನಪುಗಳನ್ನು ರಾಹುಲ್ ವಿಡಿಯೋ ರೂಪದಲ್ಲಿ ಬಿಡುಗಡೆ ಮಾಡಿದ್ದಾರೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ: https://x.com/RahulGandhi/status/1719201716271219183?s=20