ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಇಂದಿರಾ ಕ್ಯಾಂಟೀನ್ Archives » Dynamic Leader
October 23, 2024
Home Posts tagged ಇಂದಿರಾ ಕ್ಯಾಂಟೀನ್
ರಾಜ್ಯ

ಕಲಬುರಗಿ:  ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನನ್ನು ಮತ್ತೆ ತೆರೆದಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಬಡವರಿಗೆ, ವಿಧ್ಯಾರ್ಥಿಗಳಿಗೆ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಬಡರೋಗಿಗಳಿಗೆ ಆಶಾ ಕಿರಣವಾಗಿದ್ದ ಇಂದಿರಾ ಕ್ಯಾಂಟೀನ್ ಗೆ ಬೀಗ ಜಡಿದಿದ್ದು ಸ್ಥಳೀಯರಲ್ಲಿ ಬೇಸರ ತಂದಿತ್ತು.

ಇದರ ವಿರುದ್ಧವಾಗಿ ವೆಲ್ಪೇರ್ ಪಾರ್ಟಿಯು ತೀವ್ರ ಸ್ವರೂಪದ ಹೋರಾಟ ಮಾಡಿದರ ಫಲವಾಗಿ, ಸರ್ಕಾರ ಮತ್ತು ಜಿಲ್ಲಾಡಳಿತವು ಇಂದಿರಾ ಕ್ಯಾಂಟೀನನ್ನು ಪುನರಾರಂಭಗೊಳಿಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಲಬುರಗಿ ಜಿಲ್ಲಾ ಶಾಖೆ ಕ್ರತಜ್ಞತೆ ಸಲ್ಲಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜಕೀಯ ರಾಜ್ಯ

ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ.50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು” ಎಂದು ಹೇಳಿದ್ದಾರೆ.