ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕರ್ನಾಟಕ ಪೊಲೀಸ್ Archives » Dynamic Leader
November 21, 2024
Home Posts tagged ಕರ್ನಾಟಕ ಪೊಲೀಸ್
ರಾಜ್ಯ

ಬೆಂಗಳೂರು: ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice Delivery) ಯಲ್ಲಿ ಪ್ರಥಮ‌ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸರು 6.38 ಅಂಕಗಳಿಕೆಯ ಮೂಲಕ ಪ್ರಥಮ‌ ಸ್ಥಾನದಲ್ಲಿರುವುದು ಗಮನಾರ್ಹ.

ಅಪರಾಧ ಕೃತ್ಯಗಳನ್ನು ಪತ್ತೆಹಚ್ಚುವುದು, ಅಪರಾಧಿಗಳ ಬಂಧನ, ಕೃತ್ಯದ ಸಾಕ್ಷ್ಯ ಸಂಗ್ರಹಣೆ ಹೀಗೆ ನ್ಯಾಯಾಲಯದಿಂದ ಪ್ರಕರಣದ ತೀರ್ಪು ಬಂದು ಸಂತ್ರಸ್ತರಿಗೆ ನ್ಯಾಯ ದೊರಕುವ ವರೆಗೆ ವಿವಿಧ ಹಂತಗಳಲ್ಲಿ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದಿದ್ದಾರೆ.

ಈ ಎಲ್ಲಾ ಕಾರ್ಯಗಳನ್ನು ನಾಡಿನ ಪೊಲೀಸ್‌ ಇಲಾಖೆ ದೇಶದ ಇತರೆ ಎಲ್ಲಾ ರಾಜ್ಯಗಳ ಪೊಲೀಸರಿಗಿಂತ ಅತ್ಯಂತ ದಕ್ಷವಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂಬುದು ಶ್ಲಾಘನೀಯ. ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಧನ್ಯವಾದಗಳು ತಿಳಿಸಿದ್ದಾರೆ.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್ ಸಂಸ್ಮರಣ ದಿನಾಚರಣೆಯ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದರು.

ಪೊಲೀಸ್ ಸಂಸ್ಮರಣ ದಿನಾಚರಣೆ (Police Remembrance Day) ಯನ್ನು ಇಂದು (ಅ.21) ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕರ್ತವ್ಯ ನಿರತರಾಗಿ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಈ ಹುತಾತ್ಮರ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಿಕೊಂಡ ಬರಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಈ ವರ್ಷ 16 ಜನ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್​ ಅವರು ಗೌರವ ಸಮರ್ಪಣೆ ಸಲ್ಲಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ‘ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್​ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.

2400 ಪೊಲೀಸ್ ಪೆದೆಗಳ ನೇಮಕ ಮಾಡಲಾಗುತ್ತೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25ಕೋಟಿ ರಿಲೀಸ್ ಮಾಡಿದೆ. ಇನ್ನು ಕರ್ತವ್ಯ ನಿರತ ಸಾವನ್ನಪ್ಪಿದ ಪೊಲೀಸರಿಗೆ 50 ಲಕ್ಷ ಪರಿಹಾರ ಕೊಡಲಾಗುತ್ತೆ ಎಂದರು.

ಗೃಹಸಚಿವರಾದ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.