ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ತಮಿಳುನಾಡು ಕಾಂಗ್ರೆಸ್ Archives » Dynamic Leader
October 23, 2024
Home Posts tagged ತಮಿಳುನಾಡು ಕಾಂಗ್ರೆಸ್
ದೇಶ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕನ್ಯಾಕುಮಾರಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.

ಮೇ 30 ರಂದು ತಮಿಳುನಾಡಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಮೇ 31 ಮತ್ತು ಜೂನ್ 1 ರಂದು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆಯಲ್ಲಿ ಧ್ಯಾನ ಮಾಡಲಿದ್ದಾರೆ. ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ 2019ರ ಸಂಸತ್ ಚುನಾವಣೆಯ ಕೊನೆಯ ಹಂತದ ಮತದಾನದ ವೇಳೆ ಪ್ರಧಾನಿ ಮೋದಿ ಹಿಮಾಲಯಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅಲ್ಲಿನ ಗುಹೆಯೊಂದಕ್ಕೆ ತೆರಳಿ ಧ್ಯಾನ ಮಾಡಿದರು. ಈ ಪ್ರಯಾಣದಲ್ಲಿ ಅವರು ಕೇದಾರನಾಥ ಶಿವ ದೇವಾಲಯದಲ್ಲಿ ಪೂಜೆಯನ್ನೂ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವಪೆರುಂತಗೈ ಅವರು ತಮ್ಮ ಎಕ್ಸ್ ಪೇಜ್ ನಲ್ಲಿ “ಪ್ರಜಾಪ್ರತಿನಿಧಿ ಕಾಯ್ದೆಯಂತೆ ಚುನಾವಣಾ ನೀತಿ ನಿಯಮಗಳು ಜಾರಿಯಲ್ಲಿರುವ ಕಾರಣ ಮೋದಿಯವರ ಕನ್ಯಾಕುಮಾರಿ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು.

ಚುನಾವಣೆಗೆ ಮುನ್ನ 48 ಗಂಟೆಗಳ ವಿರಾಮದ ವೇಳೆಯಲ್ಲಿ ಇಂತಹ ಘಟನೆಯ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ರಹಸ್ಯವಾಗಿ ಪ್ರಚಾರ ಮಾಡಲು ಮೋದಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ನಾಳೆ (ಇಂದು) ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ನೀಡಬೇಕಿದೆ. ಅಗತ್ಯವಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.

ರಾಜಕೀಯ

ತಿರುಪತ್ತೂರು: ಬಿಜೆಪಿಯವರು ಸೋಲಿನ ಭಯದಿಂದ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವಪೆರುಂತಗೈ ಹೇಳಿದ್ದಾರೆ. ತಿರುಪತ್ತೂರು ರೈಲು ನಿಲ್ದಾಣ ರಸ್ತೆಯಲ್ಲಿರುವ ಖಾಸಗಿ ಮದುವೆ ಮಂಟಪದಲ್ಲಿ ನಿನ್ನೆ ಕಾಂಗ್ರೆಸ್ ಸಮಿತಿಯ ಜಿಲ್ಲಾ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಸಮಿತಿಗಳಿಗೆ ಸಮಾಲೋಚನಾ ಸಭೆ ನಡೆಯಿತು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಸೆಲ್ವಪೆರುಂತಗೈ ಅವರು ನೀಡಿದ ಸಂದರ್ಶನದಲ್ಲಿ, “379 ಕ್ಷೇತ್ರಗಳಿಗೆ ಚುನಾವಣೆ ಪೂರ್ಣಗೊಂಡಿದೆ. ಗುಪ್ತಚರ ವರದಿ ಪ್ರಕಾರ ಬಿಜೆಪಿ ಹೀನಾಯ ಸೋಲನ್ನು ಎದುರಿಸಲಿದೆ ಎಂದು ಹೇಳಿದೆ. ಸೋಲಿನ ಭೀತಿಯಲ್ಲಿರುವ ಬಿಜೆಪಿ ದೇಶದಲ್ಲಿ ದೊಡ್ಡ ಗಲಭೆ ಎಬ್ಬಿಸಲು ಯತ್ನಿಸುತ್ತಿದೆ. ಆದ್ದರಿಂದ ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು.

ಮೋದಿಯನ್ನು ಸೋಲಿಸಲು ಡೆಲ್ಟಾದ ರೈತ ಸಂಘದ ಮುಖಂಡರು ವಾರಣಾಸಿಗೆ ಹೋಗಲು ಪ್ರಯತ್ನಿಸಿದರು. ಅಲ್ಲಿಗೆ ಹೋಗಲು ಯತ್ನಿಸಿದವರನ್ನು ರೈಲ್ವೆ ಅಧಿಕಾರಿಗಳು ತಡೆದ ರೀತಿಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ರಾಹುಲ್ ಗಾಂಧಿ ಭಾರತವನ್ನು ಮುನ್ನಡೆಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಹೇಳಿದ್ದಾರೆ. ಆದರೂ ಪ್ರಧಾನಿ ಯಾರಾಗಬೇಕೆಂದು ನಾವು ನಿರ್ಧರಿಸಿಲ್ಲ” ಎಂದು ಹೇಳಿದರು.

ರಾಜಕೀಯ

ಮೇಕೆದಾಟು ಅಣೆಕಟ್ಟು ಸಮಸ್ಯೆ, ಲೋಕಸಭಾ ಚುನಾವಣೆಗೆ ಡಿಎಂಕೆಯಿಂದ ಹೆಚ್ಚುವರಿ ಸ್ಥಾನಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ, ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯಾಗಿರುವ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ರಹಸ್ಯ ಸಭೆ ನಡೆಸಿರುವುದು ಬಹಿರಂಗವಾಗಿದೆ.

ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಹಾಗೂ ಕರ್ನಾಟಕ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮೊನ್ನೆ ಮತ್ತು ನಿನ್ನೆ ಅಳಗಿರಿ ಅವರು ಸಚಿವರ ನಿವಾಸದಲ್ಲಿ ಗೌಪ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಪಕ್ಷವನ್ನು ಮೈತ್ರಿಯಿಂದ ಹೊರತೆಗೆಯಿರಿ ಎಂದು, ಬಿಜೆಪಿ ವರಿಷ್ಟರು ಡಿಎಂಕೆ ಮೇಲೆ ಒತ್ತಡ ಹೇರುತ್ತಿದ್ದಾರೆ. ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುಂದುವರಿಯಬೇಕಾದರೆ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ತಮಿಳುನಾಡಿನ ವಿರುದ್ಧ ನಿಲುವು ತಳೆಯಬಾರದು.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜೂನ್ ಮತ್ತು ಜುಲೈನಲ್ಲಿ ತಮಿಳುನಾಡಿಗೆ ಹರಿಸಬೇಕಾದ ಕಾವೇರಿ ನೀರನ್ನು ಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಬೇಕು. ತಮಿಳುನಾಡಿನ ಜನತೆಯ ಹಿತಕ್ಕೆ ವಿರುದ್ಧವಾಗಿ, ಕರ್ನಾಟಕ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ, ತಮಿಳುನಾಡು ಕಾಂಗ್ರೆಸ್ ತಲೆಬಾಗುವುದಿಲ್ಲ. ಅಗತ್ಯಬಿದ್ದರೆ ವಿರುದ್ಧ ನಿಲುವು ತೆಗೆದುಕೊಳ್ಳಬೇಕಾಗುತ್ತದೆ.

ಆಗ ಮಾತ್ರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ಡಿಎಂಕೆ ವಿರುದ್ಧ ಕಣಕ್ಕಿಳಿದರೆ ಕ್ಷೇತ್ರಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಹೆಜ್ಜೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಣ್ಮೆಯಿಂದ ನಿಭಾಯಿಸಬೇಕೆಂದು ಅಳಗಿರಿ ದಿನೇಶ್ ಗುಂಡೂರಾವ್ ಅವರನ್ನು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.