ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪಶುಸಂಗೋಪನೆ Archives » Dynamic Leader
October 22, 2024
Home Posts tagged ಪಶುಸಂಗೋಪನೆ
ರಾಜಕೀಯ

ಮೈಸೂರು: “ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ” ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

“ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ” ಎಂದು ಸಚಿವರು ಭರವಸೆ ನೀಡಿದ್ದಾರೆ.