ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪ್ರಧಾನಿ ಮೋದಿ Archives » Dynamic Leader
October 23, 2024
Home Posts tagged ಪ್ರಧಾನಿ ಮೋದಿ
ದೇಶ

ಭಾರತ ಎದುರಿಸಿದ ಇತ್ತೀಚಿನ ಯುದ್ಧವೆಂದರೆ ಅದು ಕಾರ್ಗಿಲ್ ಯುದ್ಧವೇ. ಭಾರತದ ಭೂಭಾಗಕ್ಕೆ ನುಗ್ಗಿದ ಪಾಕಿಸ್ತಾನಿ ಪಡೆಗಳನ್ನು ಹಿಮ್ಮೆಟ್ಟಿಸಿ, ವಿಜಯ ಪತಾಕೆ ಹಾರಿಸಿದ ಇತಿಹಾಸಕ್ಕೆ ಇಂದಿಗೆ 25 ವರ್ಷ!

ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ 25ನೇ ವಿಜಯ ದಿನದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಲಡಾಖ್ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಯುದ್ಧ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ನಂತರ ಪ್ರಧಾನಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದರು.

ಆಗ, “ಕಾರ್ಗಿಲ್ ಯುದ್ಧದ ನಂತರವೂ ಪಾಕಿಸ್ತಾನ ಪಾಠ ಕಲಿತಿಲ್ಲ; ಅದು ಭಯೋತ್ಪಾದನೆ ಮತ್ತು ರಹಸ್ಯ ಯುದ್ಧಗಳನ್ನು ಮುಂದುವರೆಸಿದೆ. ಸೈನಿಕರ ನಿಸ್ವಾರ್ಥ ಸೇವೆಗೆ ನಾಡಿನ ಸಮಸ್ತ ಜನತೆ ಋಣಿಯಾಗಿದ್ದಾರೆ. ಪಾಕಿಸ್ತಾನದ ದುಷ್ಟ ಉದ್ದೇಶಗಳು ಎಂದಿಗೂ ಯಶಸ್ವಿಯಾಗುವುದಿಲ್ಲ.

ಕಾರ್ಗಿಲ್ ಯುದ್ಧದಲ್ಲಿ ಪ್ರಾಣತ್ಯಾಗ ಮಾಡಿದ ಸೈನಿಕರಿಗೆ ನಮ್ಮ ದೇಶವು ಗೌರವ ಸಲ್ಲಿಸುತ್ತದೆ; ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಎಂದಿಗೂ ಸಾಯುವುದಿಲ್ಲ. ನಮ್ಮ ಸೈನಿಕರು ಸಂಪೂರ್ಣ ಶಕ್ತಿಯಿಂದ ಭಯೋತ್ಪಾದನೆ ವಿರುದ್ಧ ಹೋರಾಡುತ್ತಾರೆ” ಎಂದು ಪ್ರಧಾನಿ ಹೇಳಿದರು.

ದೇಶ

ಡಿ.ಸಿ.ಪ್ರಕಾಶ್

ನವದೆಹಲಿ: ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂಡಿಯಾ ಮೈತ್ರಿಕೂಟದ ಸಂಸದರು ಸಮಾರಂಭವನ್ನು ಬಹಿಷ್ಕರಿಸಿದರು.

ಕೇರಳದಿಂದ 8 ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಬದಲು 7 ಬಾರಿ ಸಂಸದರಾಗಿರುವ್ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಎಂದು ಘೋಷಿಸಿರುವುದನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಕಾರ್ಯಕ್ರಮವನ್ನು ಬಹಿಷ್ಕರಿಸಿದರು.

ಸಂಸತ್ತಿನ 18ನೇ ಲೋಕಸಭೆ ಚುನಾವಣೆ ಇತ್ತೀಚೆಗೆ ಮುಕ್ತಾಯಗೊಂಡಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ 3ನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 9 ರಂದು ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರೊಂದಿಗೆ ಸಚಿವರೂ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ನಂತರ, ಜೂನ್ 24 ರಂದು ಹೊಸ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು.

ಕೆಲ ದಿನಗಳ ಹಿಂದೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ನೇಮಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕುರಿತು ಆದೇಶ ಹೊರಡಿಸಿದರು.

ಈ ಹಿನ್ನೆಲೆಯಲ್ಲಿ, 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು (ಸೋಮವಾರ) ಆರಂಭವಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತಿತರರು ಉಪಸ್ಥಿತರಿದ್ದರು.

ಆದಾಗ್ಯೂ, ಇಂಡಿಯಾ ಮೈತ್ರಿಕೂಟದ ಸಂಸದರು ಸಮಾರಂಭವನ್ನು ಬಹಿಷ್ಕರಿಸಿದರು. ಕೇರಳದಿಂದ 8 ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಬದಲು 7 ಬಾರಿ ಸಂಸದರಾಗಿರುವ್ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಎಂದು ಘೋಷಿಸಿರುವುದನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಕಾರ್ಯಕ್ರಮವನ್ನು ಬಹಿಷ್ಕರಿಸಿದರು.

ಲೋಕಸಭೆ ಬೆಳಗ್ಗೆ 11 ಗಂಟೆಗೆ ಸಮಾವೇಶಗೊಂಡಾಗ ಹಂಗಾಮಿ ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿಕೊಂಡ ಭರ್ತೃಹರಿ ಮಹತಾಬ್ ಪ್ರಧಾನಿ ಮೋದಿ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ಇತರೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿಕೊಂಡರು. ಒಟ್ಟು 280 ಸದಸ್ಯರು ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಉಳಿದ 263 ಸದಸ್ಯರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದರ ಬೆನ್ನಲ್ಲೇ 26 ರಂದು ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. 27 ರಂದು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ.

ರಾಜಕೀಯ

ಮೋದಿ 3ನೇ ಬಾರಿ ಪ್ರಧಾನಿಯಾಗುವುದಿಲ್ಲ, ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ ಎಂದು ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯನ್ನು ದೇಶಾದ್ಯಂತ 7 ಹಂತಗಳಲ್ಲಿ ನಡೆಸಲಾಗಿದೆ. 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಲೋಕಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲ್ಲುತ್ತದೆ ಎಂದು ಚುನಾವಣೋತ್ತರ ಬಿಡುಗಡೆಯಾದ ಸಮೀಕ್ಷೆಯ ಫಲಿತಾಂಶಗಳು ಸೂಚಿಸುತ್ತದೆ.

ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳುವಂತೆ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಜೂನ್ 4ರ ಮತ ಎಣಿಕೆ ನಂತರ ತಪ್ಪು ಎಂದು ಸಾಬೀತಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಭಾವುಕರಾಗಿ ಹೇಳಿದ್ದಾರೆ. ಸೋಮನಾಥ್ ಭಾರ್ತಿ ಅವರು ನವದೆಹಲಿ ಲೋಕಸಭಾ ಕ್ಷೇತ್ರಕ್ಕೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸ್ಪರ್ಧಿಸಿದ್ದಾರೆ. ಬಾನ್ಸುರಿಗೆ ಇದು ಮೊದಲ ಚುನಾವಣೆ.

2019ರಲ್ಲಿ ಬಿಜೆಪಿ ಎಲ್ಲಾ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಈ ಬಾರೀ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳುತ್ತಿವೆ. ಆದರೆ, ಸೋಮನಾಥ್ ಭಾರ್ತಿ ಅವರು ಪ್ರಕಟಿಸಿರುವ ಎಕ್ಸ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಆಮ್ ಆದ್ಮಿ ಪಕ್ಷವು 4 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ಪಕ್ಷವು 3 ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮೋದಿ 3ನೇ ಅವಧಿಗೆ ಪ್ರಧಾನಿಯಾಗುವುದಿಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.