ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಾಂಬ್ ಬ್ಲಾಸ್ಟ್ Archives » Dynamic Leader
October 23, 2024
Home Posts tagged ಬಾಂಬ್ ಬ್ಲಾಸ್ಟ್
ದೇಶ

ಬೆಂಗಳೂರು : ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಿದೆ. ಸದ್ಯ ರಾಜ್ಯ ಪೊಲೀಸ್‌ ಇಲಾಖೆಯ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. ಈಗ ಎನ್‌ಐಎ ಪ್ರಕರಣದ ವಿಚಾರಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ. ಪ್ರಕರಣದಲ್ಲಿ ಇನ್ನು ಯಾವುದೇ ಆರೋಪಿಯನ್ನು ಬಂಧಿಸಿಲ್ಲ.

ಮಾರ್ಚ್‌ 1 ರಂದು ವೈಟ್‌ಫೀಲ್ಡ್‌ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್‌ನಲ್ಲಿ ಮಧ್ಯಾಹ್ನ ಬಾಂಬ್‌ ಸ್ಫೋಟವಾಗಿತ್ತು. ಘಟನೆಯಲ್ಲಿ 9 ಜನ ಗಾಯಗೊಂಡಿದ್ದರು. ಮೊದಲು ಸಿಲಿಂಡರ್‌ ಸ್ಫೋಟ ಎನ್ನಲಾಗಿತ್ತು. ಆದರೆ, ಬಳಿಕ ಅದು ಸುಧಾರಿತ ಐಇಡಿ ಬಳಸಿ ಮಾಡಿರುವ ಸ್ಫೋಟ ಎಂದು ದೃಢವಾಯಿತು. ಗ್ರಾಹಕನ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಬಾಂಬ್‌ ಇರುವ ಬ್ಯಾಗ್‌ ಅನ್ನು ಹೋಟೆಲ್‌ನಲ್ಲಿಯೆ ಬಿಟ್ಟು ಹೋಗಿದ್ದ. ಅದು ಬಳಿಕ ಸ್ಫೋಟಗೊಂಡಿತ್ತು.

ಸ್ಫೋಟದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು, ಬಿಜೆಪಿ ನಾಯಕರು ಎನ್‌ಐಎ ತನಿಖೆಗೆ ಆಗ್ರಹಿಸಿದ್ದರು. ಅದರಂತೆ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ತನಿಖೆಯನ್ನು ಈಗ ಎನ್‌ಐಎಗೆ ವಹಿಸಿದೆ. ಈಗಾಗಲೇ ಎನ್‌ಐಎ ಅಧಿಕಾರಿಗಳು ಪ್ರಕರಣದ ವಿಚಾರವಾಗಿ ಸಿಸಿಬಿ ಪೊಲೀಸರಿಗೆ ಸಹಾಯ ಮಾಡುತ್ತಿದ್ದರು. ಈಗ ಪೂರ್ತಿ ಪ್ರಕರಣವನ್ನು ಅವರೇ ತನಿಖೆ ನಡೆಸಲಿದ್ದಾರೆ.

ರಾಜ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ?

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? ಎಂದು ಪ್ರಶ್ನಿಸಿದ್ದಾರೆ.

2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ? ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶ

ಕೊಯಮತ್ತೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತೊಬ್ಬನನ್ನು ಬಂಧಿಸಿದ್ದಾರೆ!

ಕಳೆದ ವರ್ಷ, ಕೊಯಮತ್ತೂರು ಟೌನ್ ಹಾಲ್ ಪ್ರದೇಶದ ಕೋಟೆ ಈಶ್ವರನ್ ದೇವಾಲಯದ ಮುಂಭಾಗದಲ್ಲಿ ನಡೆದ ಕಾರ್ ಸ್ಫೋಟದಲ್ಲಿ ಆರೋಪಿ ಜಮೇಶಾ ಮುಬಿನ್ ಸುಟ್ಟು ಕರಕಲಾಗಿದ್ದರು. ಈ ಬಗ್ಗೆ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಮಂದಿಯನ್ನು ಬಂಧಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಈ ಪ್ರಕರಣದಲ್ಲಿ 14ನೇ ವ್ಯಕ್ತಿಯಾಗಿ ಪೋತ್ತನೂರು ತಿರುಮರೈ ನಗರದ ತಾಹಾ ನಸೀರ್ (27) ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಇವರು ಕಾರ್ ಸರ್ವಿಸ್ ಕಂಪನಿಯಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದರು.

ಕಾರ್ ಸ್ಪೋಟ ಅಪಘಾತದ ಬಗ್ಗೆ ನಸೀರ್‌ಗೆ ಮೊದಲೇ ಮಾಹಿತಿ ಇತ್ತು ಎಂಬ ಶಂಕೆಯ ಆಧಾರದ ಮೇಲೆ, ನಿನ್ನೆ ನಾಸೀರ್ ನನ್ನು ಬಂಧಿಸಿದ್ದ ರಾಷ್ಟ್ರೀಯ ಗುಪ್ತಚರ ದಳದ ಅಧಿಕಾರಿಗಳು ಇಂದು ಚೆನ್ನೈನ ಪೂನ್ದಮಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಹಾಕಿದ್ದಾರೆ.