ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಿಮಲ್ ಅಕೋಯಿಜಮ್ Archives » Dynamic Leader
October 23, 2024
Home Posts tagged ಬಿಮಲ್ ಅಕೋಯಿಜಮ್
ದೇಶ ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಮಣಿಪುರದ ಜನರನ್ನು ಕಡೆಗಣಿಸಿದೆ ಎಂದು ಸಂಸದ ಬಿಮಲ್ ಅಕೋಯಿಜಮ್ (Bimol Akoijam) ಆರೋಪಿಸಿದ್ದಾರೆ.

ಮಣಿಪುರ ರಾಜ್ಯದಲ್ಲಿ ಒಂದು ವರ್ಷದಿಂದ ಎರಡು ಸಮುದಾಯಗಳ ನಡುವೆ ಸಂಘರ್ಷ ನಡೆಯುತ್ತಿದೆ. ಇದರಿಂದಾಗಿ ರಾಜ್ಯಾದ್ಯಂತ ಹಿಂಸಾಚಾರ ಪ್ರಕರಣಗಳು ಹೆಚ್ಚಿವೆ.

ನೂರಾರು ಮಹಿಳೆಯರು ಲೈಂಗಿಕ ಕಿರುಕುಳ ಮತ್ತು ಹತ್ಯೆಗೀಡಾಗಿದ್ದಾರೆ. ಅಮಾಯಕ ಮಕ್ಕಳನ್ನು ನಡುಬೀದಿಗೆ ತಳ್ಳಲಾಗಿದೆ. ಮತ್ತು ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿ ಇಂದಿಗೂ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ಕೂಡ ಮಾಜಿ ಮುಖ್ಯಮಂತ್ರಿ ದಿವಂಗತ ಮೈರೆಂಬಮ್ ಕೊಯಿರೆಂಗ್ ಸಿಂಗ್ (Mairembam Koireng Singh) ಅವರ ಮನೆಯ ಮೇಲೆ ರಾಕೆಟ್ ಉಡಾಯಿಸಲಾಗಿತ್ತು. ಇದರಲ್ಲಿ 70 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇತರ 5 ಮಂದಿ ಗಾಯಗೊಂಡಿದ್ದಾರೆ.

ಅದೇ ರೀತಿ ಜಿರಿಬಾಮ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗಿದೆ.

ಅಲ್ಲದೆ, ಹಿಂಸಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ಅವರ ಮೇಲೆ ಗುಂಡು ಹಾರಿಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಹೋರಾಡುತ್ತಿದ್ದಾರೆ. ಪ್ರಧಾನಿ ಮೋದಿಯವರ ಬ್ಯಾನರ್‌ಗಳನ್ನು ಹರಿದು ಹಾಕಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಣಿಪುರ ಸಂಸದ ಬಿಮಲ್ ಅಕೋಯಿಜಮ್ (Bimol Akoijam) ಅವರು, ಕೇಂದ್ರ ಬಿಜೆಪಿ ಸರ್ಕಾರ ಮಣಿಪುರದ ಜನರನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಂದರ್ಶನ ನೀಡಿರುವ ಬಿಮಲ್ ಅಕೋಯಿಜಮ್, “ಮಣಿಪುರದಲ್ಲಿ 16 ತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದೆ.

ಕೇಂದ್ರ ಸರ್ಕಾರ ನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಿದೆ. 33 ಲಕ್ಷ ಜನರಿರುವ ರಾಜ್ಯದಲ್ಲಿ 66,000 ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಸೇನೆಯನ್ನು ವಾಪಸ್ ಪಡೆಯಿರಿ, ನಮ್ಮ ಭದ್ರತೆಯನ್ನು ನಾವೇ ನೋಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.