ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬೆಂಗಳೂರು ಸಿಟಿ ಪೊಲೀಸ್ Archives » Dynamic Leader
November 23, 2024
Home Posts tagged ಬೆಂಗಳೂರು ಸಿಟಿ ಪೊಲೀಸ್
ಬೆಂಗಳೂರು

ಬೆಂಗಳೂರು: ಸಂಚಾರ ಉತ್ತರ ವಿಭಾಗದ ವಿವಿಧ ಪೊಲೀಸ್ ಠಾಣಾ ಸರಹದ್ದಿನ ರಸ್ತೆಗಳಲ್ಲಿ, ವ್ಹಿಲೀಂಗ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನಲೆಯಲ್ಲಿ, ಕಾರ್ಯ ಪ್ರವೃತ್ತರಾದ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಚಿನ್ ಪಿ ಘೋರ್ಪಡೆ ಹಾಗೂ ಅವರ ಅಧಿಕಾರಿ ಸಿಬ್ಬಂಧಿಯವರ ತಂಡಗಳು, ಹಲವು ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿಕೊಂಡು, ವ್ಹಿಲೀಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಂಡಿರುತ್ತಾರೆ.

ವ್ಹಿಲೀಂಗ್ ಮಾಡುವವರ ವಿರುದ್ಧ ಪೀಣ್ಯ, ಚಿಕ್ಕಜಾಲ, ಹೆಬ್ಬಾಳ ಮತ್ತು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ಹಾಗೂ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ. ಒಟ್ಟು 6 ಪ್ರಕರಣಗಳನ್ನು ದಾಖ್ಲಿಸಿ, 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಚರಣೆಯಲ್ಲಿ ಒಟ್ಟು 6 ಆರೋಪಿತರ ಪೈಕಿ, 5 ಜನ 18 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಒಬ್ಬ ಅಪ್ರಾಪ್ತನಾಗಿರುತ್ತಾನೆ. ಆರೋಪಿಗಳ ವಾಹನಕ್ಕೆ ಸಂಬಂಧಿಸಿದ ಆರ್.ಸಿ.ಯನ್ನು ರದ್ದುಗೊಳಿಸಲು ಹಾಗೂ ಡ್ರೈವಿಂಗ್ ಲೈಸನ್ಸ್ ಅಮಾನತ್ತುಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಹಾಗೂ ಜಂಟಿ ಪೊಲೀಸ್ ಆಯುಕ್ತರು ಸಂಚಾರ ಎಂ.ಎನ್.ಅನುಚೇತ್ ರವರು ಈ ರೀತಿ ವ್ಹಿಲೀಂಗ್ ಮಾಡುವವರ ವಿರುದ್ದ ಬೆಂಗಳೂರಿನಾದ್ಯಂತ ಕಾರ್ಯಚರಣೆಯನ್ನು ಮುಂದುವರೆಸಲಾಗುವುದೆಂದು ತಿಳಿಸಿರುತ್ತಾರೆ. 

ಬೆಂಗಳೂರು

ಕರ್ನಾಟಕ ಪರೀಕ್ಷಾ ಪ್ರಾಧೀಕಾರದ ವತಿಯಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯು (CET) ದಿನಾಂಕ: 20-05-2023 ಮತ್ತು 21-05-2023 ರಂದು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಷವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

“ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಹಾಗೂ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಇವರ ಸೂಚನೆಯ ಮೇರೆಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರರಕರಣದ ಅನ್ವಯ ಪ್ರದತ್ತರವಾದ ಅಧಿಕಾರವನ್ನು ಚಲಾಯಿಸಿ, ದಿನಾಂಕ: 20-05-2023 ರಂದು ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಮತ್ತು ದಿನಾಂಕ: 21-05-2023 ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ” ಎಂದು ವಿಷೇಶ ಪೊಲೀಸ್ ಆಯುಕ್ತರು, ಸಂಚಾರ ಮತ್ತು ಪೊಲೀಸ್ ಆಯುಕ್ತರು (ಪ್ರಭಾರ) ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಎಂ.ಎ.ಸಲೀಂ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

     

ಬೆಂಗಳೂರು ರಾಜಕೀಯ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಬೆಂಗಳೂರು ಜಿಲ್ಲೆಗೆ ಸೇರಿರುವ ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ನಗರದ 5 ಸ್ಥಳಗಳಲ್ಲಿ ಏರ್ಪಡಿಸಲಾಗಿದ್ದು, ಮತ ಎಣಿಕೆ ಸ್ಥಳಗಳಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ ದೃಷ್ಠಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

1. ಮತ ಎಣಿಕೆ ಕೇಂದ್ರ: ಮೌಂಟ್ ಕಾರ್ಮಲ್ ಕಾಲೇಜು, ವಸಂತ ನಗರ. ವಿಧಾನಭಾ ಕ್ಷೇತ್ರಗಳು: ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞನಗರ ಹಾಗೂ ಸಿ.ವಿ.ರಾಮನ್ ನಗರ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಪೂರ್ವ ಮತ್ತು ಡಿಸಿಪಿ ಕೇಂದ್ರ ವಿಭಾಗ.

2. ಮತ ಎಣಿಕೆ ಕೇಂದ್ರ: ಸೆಂಟ್ ಜೋಷಫ್ ಇಂಡಿಯನ್ ಹೈಸ್ಕೂಲ್. ವಿಧಾನಭಾ ಕ್ಷೇತ್ರಗಳು: ಆನೇಕಲ್, ಬೆಂಗಳೂರು ದಕ್ಷಿಣ, ಮಹದೇವಪುರ, ಬ್ಯಾಟರಾಯನಪುರ, ಯಲಹಂಕ ಹಾಗೂ ದಾಸರಹಳ್ಳಿ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಅಪರಾಧ ಮತ್ತು ಡಿಸಿಪಿ ವೈಟ್ ಫೀಲ್ಡ್ ವಿಭಾಗ.

3. ಮತ ಎಣಿಕೆ ಕೇಂದ್ರ: ಬಿಎಂಎಸ್ ಮಹಿಳಾ ಕಾಲೇಜು, ಬಸವನಗುಡಿ. ವಿಧಾನಭಾ ಕ್ಷೇತ್ರಗಳು: ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಿಕ್ಕಪೇಟೆ, ಚಾಮರಾಜಪೇಟೆ, ಆರ್.ಆರ್.ನಗರ ಹಾಗೂ ಶಿವಾಜಿನಗರ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ದಕ್ಷಿಣ ವಿಭಾಗ ಮತ್ತು ಡಿಸಿಪಿ ಕಮಾಂಡ್ ಸೆಂಟರ್.

4. ಮತ ಎಣಿಕೆ ಕೇಂದ್ರ: ಎಸ್.ಎಸ್.ಎಂ.ಆರ್.ವಿ ಕಾಲೇಜು, ತಿಲಕನಗರ. ವಿಧಾನಭಾ ಕ್ಷೇತ್ರಗಳು: ಪದ್ಮನಾಭ ನಗರ, ಗೋವಿಂದರಾಜನಗರ, ವಿಜಯನಗರ, ಜಯನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ಹಾಗೂ ಬಸವನಗುಡಿ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಆಗ್ನೇಯ ವಿಭಾಗ ಮತ್ತು ಡಿಸಿಪಿ ಸಿಎಆರ್ ದಕ್ಷಿಣ.

5. ಮತ ಎಣಿಕೆ ಕೇಂದ್ರ: ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್, ದೇವನಹಳ್ಳಿ. ವಿಧಾನಭಾ ಕ್ಷೇತ್ರಗಳು: ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಈಶಾನ್ಯ ವಿಭಾಗ ಮತ್ತು ಡಿಸಿಪಿ ವಿವಿಐಪಿ ಭದ್ರತೆ.

ಮತ ಎಣಿಕೆ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಲಂ 144 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಉಪಬಂಧಗಳು ಅನ್ವಯವಾಗುವಂತೆ ದಿನಾಂಕ: 13-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿರುವುದರ ಜೊತೆಗೆ ಮೇಲ್ಕಂಡ ಅವಧಿಯಲ್ಲಿ ನಗರದಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿರುತ್ತದೆ.

ಮೇಲ್ಕಂಡ ಮುಂಜಾಗರೂಕತಾ ಕ್ರಮಗಳ ಜೊತೆಗೆ ಚುನಾವಣಾ ಫಲಿತಾಂಶವು ಪ್ರಕಟವಾದ ನಂತರ ದಿನಾಂಕ: 13-05-2023ರ ಮುಂಜಾಣೆಯಿಂದ ದಿನಾಂಕ: 14-05-2023ರ ಬೆಳಗ್ಗೆವರೆಗೆ ಸಶಸ್ತ್ರ ದಳವನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಕ್ರಮ ವಹಿಸಲಾಗಿರುತ್ತದೆ. ಈ ಬಂದೋಬಸ್ತ್ ಕರ್ತವ್ಯಕ್ಕೆ ಅಪರ ಪೊಲೀಸ್ ಅಯ್ಯುಕ್ತರು, ಪೂರ್ವ ಮತ್ತು ಪಶ್ಚಿಮ ರವರ ನೇರ ಉಸ್ತುವಾರಿಯಲ್ಲಿ 10 ಡಿಸಿಪಿ, 15 ಎಸಿಪಿ, 38 ಪೊಲೀಸ್ ಇನ್ಸ್ ಪೆಕ್ಟರ್, 250 ಪಿಎಸ್ಐ 1200 ಸಿಬ್ಬಂಧಿಗಳ ಜೊತೆಗೆ 12 ಕೇಂದ್ರಿಯ ಸಿ.ಎ.ಪಿ.ಎಫ್ ತುಕಡಿ, 36 ಕೆ.ಎಸ್.ಆರ್.ಪಿ / ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಸರಹದ್ದಿನಲ್ಲಿ ವಿಶೇಷ ಗಸ್ತು ನೇಮಕ ಮಾಡಿದ್ದು, ಪ್ರತಿಯೊಂದು ವಿಭಾಗದ ಉಸ್ತುವಾರಿಗೆ ಒಬ್ಬರು ಸಹಾಯಕ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. 


ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್ ಪೆಡ್ಲರ್‌ಗಳ ಜಾಲವನ್ನು ಭೇದಿಸಿ, ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ganja

ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು, ಡ್ರಗ್ ಪೆಡ್ಲರ್‌ಗಳ ವಿರುದ್ಧ ಕಾರ್ಯಚರಣೆಯನ್ನು ಮುಂದುವರಿಸಿ, ಕಳೆದ ಒಂದು ತಿಂಗಳಿನಿಂದ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳದ ಒಬ್ಬ, ಆಂದ್ರ ಪ್ರದೇಶದ ಒಬ್ಬ ಮತ್ತು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸೇರಿದಂತೆ ಒಟ್ಟು 19 ಜನ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ, ಅಂದಾಜು 7,06,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 6kg Hashish Oil, 51.89kg Ganja, 140grm MDMA Crystal, 236 Ecstasy Pills, 34 LSD strips, 23grm Cocaine, 17 Mobile Phone, 1 Car, 1 Bike ಅನ್ನು ವಸಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

Wilson Garden PS Cr. No.100/2023 u/s 8(c), 20 (ii) (B) 27-A, 29 NDPS Act

ಬಂಧಿತ ಆರೋಪಿಗಳು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ, ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ.

Ashok Nagar Cr. No.76/2023 u/s 8(c), 22(b)(c), 23, 27-A, 29 NDPS Act

ಬಂಧಿತ ಆರೋಪಿಗಳ ವಿರುದ್ಧ ಬೆಂಗಳೂರಿನ ವಿಲ್ಸನ್ ಗಾರ್ಡನ್, ಬೇಗೂರು, ಅಶೋಕ್ ನಗರ, ಬಾಣಸವಾಡಿ, ಸಿದ್ದಾಪುರ, ಪುಲಿಕೇಶಿನಗರ, ಹೆಣ್ಣೂರು, ಕೆ.ಆರ್.ಪುರ, ಯಲಹಂಕ ಹಾಗೂ ಆರ್.ಟಿ.ನಗರ ಠಾಣೆಗಳಲ್ಲಿ NDPS ಕಾಯ್ದೆ-1985 ರೀತ್ಯಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Begur PS Cr. No.84/2023 u/s 8(c) 22(c) NDPS Act

ಈ ಕಾರ್ಯಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.