ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮಹಾರಾಷ್ಟ್ರ Archives » Dynamic Leader
November 21, 2024
Home Posts tagged ಮಹಾರಾಷ್ಟ್ರ
ರಾಜಕೀಯ

“ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ!”

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ವಿಶಾಲ್ ಪಾಟೀಲ್ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಾಳುತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ವಿಶಾಲ್ ಪಾಟೀಲ್ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಸಂಸದರ ಬಲ 100ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಂಡಿಯಾ ಮೈತ್ರಿಕೂಟದ ಬಲ 233ಕ್ಕೆ ಏರಿಕೆಯಾಗಿದೆ.

ಪಾಟೀಲ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ವಿಶ್ವಾಸಘಾತುಕತನ, ದುರಹಂಕಾರ ಮತ್ತು ವಿಭಜನೆಯ ರಾಜಕಾರಣವನ್ನು ಸೋಲಿಸಿದರು. ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾಂಗ್ಲಿಯಿಂದ ಆಯ್ಕೆಯಾದ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದನ್ನು ಸ್ವಾಗತಿಸುತ್ತೇನೆ. ಸಂವಿಧಾನ ಚಿರಾಯುವಾಗಲಿ!

ರಾಜಕೀಯ

ಮುಂಬೈ: ಲೋಕಸಭೆ ಚುನಾವಣೆಯ ಸೋಲಿನಿಂದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಸೃಷ್ಟಿಸಿದೆ. ಅವರನ್ನು ಬೆಂಬಲಿಸುವ 15 ಶಾಸಕರು ಶರದ್ ಪವಾರ್ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದ ಅಜಿತ್ ಪವಾರ್ ಕೆಲವು ಶಾಸಕರೊಂದಿಗೆ ಬಿಜೆಪಿ ಸೇರಿದರು. ಅದರಲ್ಲಿ ಅಜಿತ್ ಪವಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಎನ್ ಡಿಎ ಮೈತ್ರಿಕೂಟ ಸೋತಿದೆ.

ಅಜಿತ್ ಪವಾರ್ ಕಡೆಯವರು 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಸ್ಥಾನವನ್ನು ಮಾತ್ರ ಗೆದ್ದಿದ್ದಾರೆ. ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿದ್ದ ಅಜಿತ್ ಪವಾರ್ ಪತ್ನಿ ಹೀನಾಯ ಸೋಲು ಕಂಡಿದ್ದಾರೆ. ಶರದ್ ಪವಾರ್ ಅವರ ಕಡೆಯಿಂದ 8 ಸಂಸದರು ಆಯ್ಕೆಯಾಗಿರುವುದು ಗಮನಾರ್ಹ.

ಚುನಾವಣಾ ಸೋಲಿನಿಂದಾಗಿ ಅಜಿತ್ ಪವಾರ್ ನೇತೃತ್ವದ ಪಕ್ಷದಲ್ಲಿ ಗೊಂದಲ ಉಂಟಾಗಿದೆ ಎಂದು ಅಲ್ಲಿನ ವರದಿಗಳು ತಿಳಿಸಿವೆ. 15 ಶಾಸಕರು ಶರದ್ ಪವಾರ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಅವರ ತಂಡವನ್ನು ಸೇರಲು ಬಯಸಿದ್ದಾರೆ ಎನ್ನಲಾಗಿದೆ.

ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವುದರ ಬಗ್ಗೆ ಶರದ್ ಪವಾರ್ ಅವರೇ ನಿರ್ಧರಿಸಬೇಕೆಂದು ಶರದ್ ಪವಾರ್ ಬೆಂಬಲಿಗ ಜಯಂತ್ ಪಾಟೀಲ್ ಹೇಳಿದ್ದಾರೆ. ಗೊಂದಲದ ನಡುವೆಯೇ ಅಜಿತ್ ಪವಾರ್ ಪಕ್ಷದ ಪ್ರಮುಖ ನಾಯಕರುಗಳು ಹಾಗೂ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಶಿಕ್ಷಣ

ಮಹಾರಾಷ್ಟ್ರದಲ್ಲಿ ಶಾಲಾ ಮಕ್ಕಳ ಕರಡು ಪಠ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ಮನುಸ್ಮೃತಿಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ!

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಲೇ ಇವೆ. CAAಯಂತಹ ಕಠಿಣ ಕಾನೂನುಗಳನ್ನು ತರುವ ಮೂಲಕ ಭಾರತದಿಂದ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.

ಇನ್ನೊಂದೆಡೆ ಹಿಂದೂ ಸಂಘಟನೆಗಳನ್ನು ಬಲಪಡಿಸುವ ಮೂಲಕ ದೇಶವನ್ನು ಧಾರ್ಮಿಕ ಉಗ್ರರಿಗೆ ನೀಡುವ ಪ್ರಯತ್ನಗಳು ನಡೆಯುತ್ತಿವೆ. ಅದರಂತೆ ಬಿಜೆಪಿಯು ಹಿಂದೂಗಳನ್ನು ಸರ್ಕಾರದ ವಿವಿಧ ಸಂಘಟನೆಗಳಿಗೆ ಸೇರಿಸಿಕೊಳ್ಳುವ ಯೋಜನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇಂತಹ ಪ್ರವೇಶಿಗಳು ಶಾಲಾ ಪಠ್ಯಕ್ರಮದಲ್ಲಿ ಹಿಂದೂ ವಿಚಾರಗಳನ್ನು ಹೇರುತ್ತಿದ್ದಾರೆ ಎಂದು ನಂಬಲಾಗುತ್ತಿದೆ.

ಆ ಮೂಲಕ ಮಹಾರಾಷ್ಟ್ರದಲ್ಲಿ ಶಾಲಾ ಮಕ್ಕಳ ಕರಡು ಪಠ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ಮನುಸ್ಮೃತಿಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆಧರಿಸಿ 3ನೇ ತರಗತಿಯಿಂದ 12ನೇ ತರಗತಿವರೆಗಿನ ಶಾಲಾ ಮಕ್ಕಳಿಗಾಗಿ ಕರಡು ಪಠ್ಯಕ್ರಮವನ್ನು ಪ್ರಕಟಿಸಲಾಗಿದೆ.

ಪಠ್ಯಕ್ರಮದಲ್ಲಿ ಧಾರ್ಮಿಕ ಗ್ರಂಥಗಳು, ಆರ್ಯಭಟ, ಸಾಗಾ, ಯೋಗ, ಭಾರತೀಯ ಋಷಿಗಳು ಇತ್ಯಾದಿ ವಿಭಾಗಗಳಿವೆ. ಪುರಾತನ ಸಂಪ್ರದಾಯವನ್ನು ಉಳಿಸುವ ಹೆಸರಿನಲ್ಲಿ ಭಗವದ್ಗೀತೆ, ಮನುಸ್ಮೃತಿ ಮತ್ತು ಹಿಂದೂ ಸಂತ ರಾಮದಾಸ್ ಸ್ವಾಮಿ ಮುಂತಾದವರಿಗೆ ಸಂಬಂಧಿಸಿದ ವಿಷಯಗಳನ್ನು ಅಳವಡಿಸಲಾಗುವುದು ಎಂದೂ ಹೇಳಲಾಗುತ್ತಿದೆ.

ಮಹಾರಾಷ್ಟ್ರ ಸರ್ಕಾರದ ಈ ಘೋಷಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಅಂತಿಮ ಪಠ್ಯಕ್ರಮ ಸಿದ್ಧಪಡಿಸುವ ಮುನ್ನ ಪಠ್ಯಕ್ರಮವನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದೆ.

ರಾಜಕೀಯ

ಜೂನ್ 4 ರಂದು ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀವ್ರವಾಗಿ ಟೀಕಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಇಬ್ಭಾಗವಾದ ನಂತರ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ತಮ್ಮ ಪ್ರಭಾವವನ್ನು ಸಾಬೀತುಪಡಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಇದಕ್ಕಾಗಿ ಶರದ್ ಪವಾರ್ ಅವರ ರಾಷ್ಟ್ರವಾದಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಧುಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದ್ಧವ್ ಠಾಕ್ರೆ, “ಕಳೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ನನ್ನ ಜೊತೆಗಿದ್ದರು. ಅವರು ಕಳೆದ 10 ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಪ್ರತಿ ಕ್ಷೇತ್ರವೂ ಗಮನಿಸುತ್ತಿದೆ. ಎರಡು ಬಾರಿ ಗೆದ್ದ ನಂತರ ಧುಲೆ ಕ್ಷೇತ್ರವನ್ನು ತಮ್ಮ ವೈಯಕ್ತಿಕ ಆಸ್ತಿ ಎಂದು ಭಾವಿಸಿಕೊಂಡಿದ್ದಾರೆ.

ಕಳೆದ ಬಾರಿ ಮಹಾರಾಷ್ಟ್ರ ನಿಮಗೆ (ಮೋದಿ) 40 ಸೀಟು ಕೊಟ್ಟು ದೆಹಲಿಗೆ ಕಳುಹಿಸಿತ್ತು. ಆದರೆ ಈ ಬಾರಿ ನೀವು ದೆಹಲಿಗೆ ಹೋಗಲು ಮಹಾರಾಷ್ಟ್ರ ನಿಮಗೆ ಸಹಾಯ ಮಾಡುವುದಿಲ್ಲ. ಜೂನ್ 4ರಂದು ಬಿಜೆಪಿಗೆ ಜನ ಕಸದ ತೊಟ್ಟಿ ತೋರಿಸಲಿದ್ದಾರೆ. ಜೂನ್ 5 ರಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಓಡಿ ಹೋದ ರೇವಣ್ಣ ಪರ ಮೋದಿ ಮತ ಯಾಚಿಸುತ್ತಾರೆ. ನಾವು ಅಧಿಕಾರಕ್ಕೆ ಬಂದ ಮೇಲೆ ಅವರನ್ನು ಬಂಧಿಸುತ್ತೇವೆ. ಮೋದಿ ಸರ್ಕಾರ ಮಹಾರಾಷ್ಟ್ರದಿಂದ ಕಿತ್ತುಕೊಂಡಿರುವ ಆಸ್ತಿಗಳನ್ನು ಮಹಾರಾಷ್ಟ್ರಕ್ಕೆ ವಾಪಸ್ ತರುತ್ತೇವೆ” ಎಂದರು.

ರಾಜಕೀಯ

ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ “ಇಂಡಿಯಾ” ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದೆ. ದೇಶದ 18ನೇ ಸಂಸದೀಯ ಲೋಕಸಭೆ ಚುನಾವಣೆಯ ದಿನಾಂಕಗಳು ಪ್ರಕಟಗೊಂಡಿದ್ದು, ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯುತ್ತದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳಾದ “ಇಂಡಿಯಾ” ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಹಿನ್ನಲೆಯಲ್ಲಿ, ಮಹಾರಾಷ್ಟ್ರದಲ್ಲಿ “ಇಂಡಿಯಾ” ಮೈತ್ರಿ ಪಕ್ಷಗಳ ನಡೆವೆ ಸೀಟು ಹಂಚಿಕೆ ಅಂತಿಮಗೊಂಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲ್ ಜಂಟಿಯಾಗಿ ಸೀಟು ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು 17 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಪ್ರಕಟಣೆ ಹೊರಡಿಸಿದೆ.

“ಇಂಡಿಯಾ” ಮೈತ್ರಿಕೂಟದ ಒಪ್ಪಂದದ ನಂತರ ಶರದ್ ಪವಾರ್ ಅವರ ಎನ್‌ಸಿಪಿ ಮಹಾರಾಷ್ಟ್ರದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ರಾಜ್ಯದ 21 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಏತನ್ಮಧ್ಯೆ, ದೆಹಲಿ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ “ಇಂಡಿಯಾ” ಮೈತ್ರಿಕೂಟದ ನಡುವೆ ಸೀಟು ಹಂಚಿಕೆ ಈಗಾಗಲೇ ಪೂರ್ಣಗೊಂಡಿದೆ ಎಂಬುದು ಗಮನಾರ್ಹ.

ಬೆಂಗಳೂರು ರಾಜಕೀಯ ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

ಬೆಂಗಳೂರು: ಜೆ.ಪಿ.ಭವನದಿಂದ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಮತ್ತಿತರರು ಕೃಷ್ಣ ಫ್ಲೋರ್ ಮಿಲ್ ವೃತ್ತದಲ್ಲಿ ಪ್ರತಿಭಟನೆ ನಡಿಸಿದರು. ಪ್ರತಿಭಟನಾ ನಿರತರು ರಸ್ತೆಯನ್ನು ತಡೆಯಲು ಮುಂದಾದಾಗ ಅವರನ್ನು ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದರು.

ಕರ್ನಾಟಕದ ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ ಮತ್ತು ಭಾಲ್ಕಿ ಸೇರಿದಂತೆ ಮೂರು ಜಿಲ್ಲೆಗಳ 865 ಗ್ರಾಮಗಳು ಮತ್ತು ಕರ್ನಾಟಕದ ನಗರಗಳ ಮೇಲೆ ರಾಜ್ಯದ ಹಕ್ಕು ಪುನರುಚ್ಚರಿಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು. ಇದು ಎರಡು ರಾಜ್ಯಗಳ ನಡುವಿನ ಜಗಳವನ್ನು ಮತ್ತಷ್ಟು ಹೆಚ್ಚಿಸಿದೆ. ಡಿಸೆಂಬರ್ 22 ರಂದು ಕರ್ನಾಟಕ ವಿಧಾನಸಭೆಯು ಮಹಾರಾಷ್ಟ್ರಕ್ಕೆ “ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡುವ ಉದ್ದೇಶದಿಂದ ಮಹಾರಾಷ್ಟ್ರ ಸರಕಾರವು ಇಂತಹ ನಿರ್ಣಯವನ್ನು ಕೈಗೊಂಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವಿವಾದಿತ ಪ್ರದೇಶಗಳಿಗಾಗಿ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಈ ಪ್ರದೇಶಗಳಲ್ಲಿ ವಾಸಿಸುವ ಮಹಾರಾಷ್ಟ್ರೀಯರಿಗೆ ಸಾಧ್ಯವಿರುವ ಎಲ್ಲಾ ರೀತಿಯ ಬೆಂಬಲವನ್ನೂ ಕೊಡುವುದಾಗಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಹೇಳಿಕೊಂಡಿದೆ. ಡಿಸೆಂಬರ್ 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇಬ್ಬರು ಮುಖ್ಯಮಂತ್ರಿಗಳ ನಡುವೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕೆಂದೂ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

“ಎರಡೂ ರಾಜ್ಯಗಳು ಒಪ್ಪಿಕೊಂಡಿರುವ ನಿರ್ಣಯದ ಮೇಲೆ ಕಾರ್ಯನಿರ್ವಹಿಸಲು ಕೇಂದ್ರವು ಕರ್ನಾಟಕಕ್ಕೆ ನಿರ್ದೇಶಿಸಬೇಕು ಮತ್ತು ವಿವಾದಿತ ಪ್ರದೇಶಗಳಲ್ಲಿ ಮರಾಠಿ ಮಾತನಾಡುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನೆರೆಯ ರಾಜ್ಯವನ್ನು ಕೇಳಬೇಕು. ಪೊಲೀಸರು ಪ್ರತಿಭಟನಾಕಾರರ ಮೇಲೆ ಕ್ರೂರವಾಗಿ ದಾಳಿ ಮಾಡುತ್ತಾರೆ, ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ಮಾಡಲಾಗುತ್ತದೆ, ಮರಾಠಿ ಮಾತನಾಡುವ ಜನರ ಒಡೆತನದ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಭಯ ರಾಜ್ಯಗಳ ನಡುವೆ ಉತ್ತಮ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ನೇಮಿಸಿದ ಸಚಿವರು, ವಿವಾದಿತ ಪ್ರದೇಶಕ್ಕೆ ಪ್ರವೇಶಿಸಲು ಅವಕಾಶವಿಲ್ಲದಂತಾಗಿದೆ. ಇದೆಲ್ಲವೂ ಅಲ್ಲಿ ವಾಸಿಸುವ ನಮ್ಮ ಜನರ ಮೇಲೆ ದಬ್ಬಾಳಿಕೆ ನಡೆಸಲು ಕರ್ನಾಟಕ ಸರಕಾರವು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿತ್ತು.

ಇದನ್ನು ಖಂಡಿಸಿ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷವು ಇಂದು ಮೆರವಣಿಗೆ ಮತ್ತು ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಇಂದು ಮಧ್ಯಾಹ್ನ ಪಕ್ಷದ ಕಚೇರಿ ಜೆ.ಪಿ.ಭವನದಿಂದ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಮತ್ತಿತರರು ಕೃಷ್ಣ ಫ್ಲೋರ್ ಮಿಲ್ ವೃತ್ತದಲ್ಲಿ ಪ್ರತಿಭಟನೆ ನಡಿಸಿದರು. ಪ್ರತಿಭಟನಾ ನಿರತರು ರಸ್ತೆಯನ್ನು ತಡೆಯಲು ಮುಂದಾದಾಗ ಅವರನ್ನು ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದರು. ನಂತರ ಎಲ್ಲರನ್ನು ಬಿಡುಗಡೆ ಮಾಡಲಾಯಿತು.