ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಾಮಾಜಿಕ ನ್ಯಾಯ Archives » Dynamic Leader
November 21, 2024
Home Posts tagged ಸಾಮಾಜಿಕ ನ್ಯಾಯ
ರಾಜಕೀಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಹೇಳಿದ್ದಾರೆ.

“ಸಚಿವರಾದ  ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ” ಎಂದಿದ್ದಾರೆ.

“ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾಪವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ದೇವರಾಜ ಅರಸುರವರ 42ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತಿದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಭಾವಿಸಿದ್ದೇನೆ” ಎಂದು ಹೇಳಿದರು.

“ದೇವರಾಜ ಅರಸು ಅವರು ಒಬ್ಬ ಜಾತ್ಯಾತೀತ ವ್ಯಕ್ತಿ, ಸಾಮಾಜಿಕ ನ್ಯಾಯದ ಹರಿಕಾರ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಿದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು. ಮೈಸೂರು ರಾಜ್ಯವು ಕರ್ನಾಟಕವಾಗಿ ಏಕೀಕರಣಗೊಂಡ ನಂತರ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ವರ್ಷ ಅದರ 50ನೇ ವರ್ಷಾಚರಣೆಯನ್ನು ರಾಜ್ಯದಲ್ಲಿ ಆಚರಿಸಲಾಗುತ್ತಿದೆ” ಎಂದರು.

“ದೇವರಾಜ ಅರಸು ಅವರು ಬಡವರ, ಶೋಷಿತರ, ಸಾಮಾಜಿಕ ನ್ಯಾಯದ ಪರವಾಗಿದ್ದ ನಾಯಕ. ಅದಕ್ಕೇ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು ಉಳುವವನೇ ಭೂಮಿಯ ಒಡೆಯ ಎಂದು ಘೋಷಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ದೇವರಾಜ ಅರಸು ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಎಂಟು ವರ್ಷಗಳ ಕಾಲ ಸಾಮಾಜಿಕ ನ್ಯಾಯದ ಅಡಿಪಾಯ ಹಾಕಿದರು. ಅದರ ಬುನಾದಿಯ ಮೇಲೆ ಸಾಮಾಜಿಕ ನ್ಯಾಯ ಕರ್ನಾಟಕದಲ್ಲಿ ಮುಂದುವರೆದಿದೆ. ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ಇತರೆ ಪಕ್ಷಗಳಿಗೆ ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲ. ಬದಲಿಗೆ ಅದರ ವಿರುಧ್ಧವಾಗಿವೆ” ಎಂದು ಹೇಳಿದರು.

ಕ್ರೈಂ ರಿಪೋರ್ಟ್ಸ್ ದೇಶ

ಮೇಕೆ ಮತ್ತು ಪಾರಿವಾಳಗಳನ್ನು ಕದ್ದಿದ್ದಕ್ಕಾಗಿ ದಲಿತ ಮಕ್ಕಳನ್ನು ತಲೆಕೆಳಗಾಗಿ ನೇತು ಹಾಕಲಾದ ಘಟನೆ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮುಂಬೈ: ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಗೆ ಸೇರಿದ ಶ್ರೀರಾಮಪುರ ತಾಲ್ಲೂಕಿನ ಹರೇಗಾಂವ್ ಗ್ರಾಮದಲ್ಲಿ, ಮೇಕೆ, ಪಾರಿವಾಳ ಕಳ್ಳತನ ಮಾಡಿದ್ದಾರೆ ಎಂದು ದಲಿತ ಕುಟುಂಬಕ್ಕೆ ಸೇರಿದ ಮಕ್ಕಳನ್ನು ಜೀವಂತವಾಗಿ ತಲೆಕೆಳಗಾಗಿ ನೇತುಹಾಕಿ ಥಳಿಸುತ್ತಿರುವ ಘಟನೆ ಆಘಾತವನ್ನು ಉಂಟುಮಾಡಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಅಹಮದ್‌ನಗರಕ್ಕೆ ಸೇರಿದವರಾದ ರಾಜ್ಯ ಕಂದಾಯ ಸಚಿವ ರಾಮಕೃಷ್ಣ ವಿ.ಕೆ.ಪಾಟೀಲ್ ಅವರು ಆಸ್ಪತ್ರೆಗೆ ತೆರಳಿ ಮಕ್ಕಳು ಮತ್ತು ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ. ಮತ್ತು ಹೆಚ್ಚಿನ ತನಿಖೆಗೆ ಆದೇಶ ಮಾಡಿದ್ದರೆ. ಇದೇ ವೇಳೆ ವಂಚಿತ್ ಬಹುಜನ ಅಘಾಡಿ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಮಾತನಾಡಿ, “ಜಾತಿ ತಾರತಮ್ಯ, ಅವಮಾನ, ನಿಂದನೆ, ಹಿಂಸೆ, ದೌರ್ಜನ್ಯ ಹೊಸದಲ್ಲ. ಇದನ್ನು ಸವಾಲಾಗಿ ಸ್ವೀಕರಿಸಿ ಬದಲಾವಣೆ ತರೋಣ” ಎಂದರು.

ಇದನ್ನೂ ಓದಿ: ಗಾಂಧಿಯನ್ನು ಕೊಂದವರು ಜೈ ಭೀಮ್ ಚಿತ್ರಕ್ಕೆ ಹೇಗೆ ಪ್ರಶಸ್ತಿ ನೀಡುತ್ತಾರೆ?: ನಟ ಪ್ರಕಾಶ್ ರಾಜ್ ಪ್ರಶ್ನೆ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯ ವಕ್ತಾರ ಮಹೇಶ್ ಥಾಬೆ ಮಾತನಾಡಿ, “ದಲಿತರ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ: ನಿತೀಶ್ ಕುಮಾರ್

ದೇಶ

ಜಗನ್ನಾಥ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗರ್ಭಗುಡಿ ಪ್ರವೇಶಿಸಲು ಅವಕಾಶ ನೀಡದ ಘಟನೆ ನಾನಾ ವಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ 20 ರಂದು ದೆಹಲಿಯ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ್ದರು. ಆಗ ಅವರು ಗರ್ಭಗುಡಿಯ ಹೊರಗೆ ಎರಡೂ ಕೈಗಳನ್ನು ಮೇಲೆತ್ತಿ ಪೂಜೆ ಮಾಡುತ್ತಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಅದು ಕಳೆದ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.

ಭಾರತದ ಪ್ರಥಮ ದ್ರೌಪದಿ ಮುರ್ಮು ಅವರಿಗೆ ಪೂಜೆ ಮಾಡಲು ಗರ್ಭಗುಡಿ ಪ್ರವೇಶಿಸಲು ಏಕೆ ಅವಕಾಶ ನೀಡಲಿಲ್ಲ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಹಿಂದೆ ಇದೇ ದೇವಸ್ಥಾನದಲ್ಲಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್ ಮತ್ತಿತರರು ಗರ್ಭಗುಡಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಆದರೆ ಗಣರಾಜ್ಯದ ಅಧ್ಯಕ್ಷರಾದ ನಂತರವೂ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಲಿಲ್ಲ ಏಕೆ ಎಂಬ ವಿವಾದ ತೀವ್ರವಾಗುತ್ತಿದೆ.

ಆದರೆ, ‘ಸಾಮಾನ್ಯವಾಗಿ ವಿಶೇಷ ಆಹ್ವಾನಿತರಾಗಿ ಬರುವವರಿಗೆ ಮಾತ್ರ ಗರ್ಭಗುಡಿಯೊಳಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗನ್ನಾಥ ಯಾತ್ರೆಯ ಪ್ರಾರಂಭದ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದರು.  ಹಾಗಾಗಿ ಗರ್ಭಗುಡಿಯೊಳಗೆ ಹೋಗಿ ಪೂಜೆ ಮಾಡುವ ಬದಲು ಹೊರಗೆ ನಿಂತು ಪೂಜೆ ಸಲ್ಲಿಸಿ ಹೋದರು.

ಈ ಹಿಂದೆ ಕೆಲವು ಸಚಿವರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಹಾಗಾಗಿ ಗರ್ಭಗುಡಿ ಪ್ರವೇಶಿಸಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ದ್ರೌಪದಿ ಮುರ್ಮು ವಿಶೇಷ ಆಹ್ವಾನಿತರಾಗಿ ಬಂದಿಲ್ಲ’ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಆದರೆ, ಅನೇಕರು ಇದನ್ನು ಒಪ್ಪಿಕೊಳ್ಳಲು ನಿರಾಕರಿಸಿ, ಇದು ಜಾತಿ ಅಸ್ಪೃಶ್ಯತೆ ಎಂದು ಟೀಕಿಸಿದ್ದಾರೆ.

ಈ ಕುರಿತು ಅಖಿಲ ಭಾರತ ಸಾಮಾಜಿಕ ನ್ಯಾಯ ಒಕ್ಕೂಟ ಹೊರಡಿಸಿರುವ ಪ್ರಕಟಣೆಯಲ್ಲಿ, “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶ್ರೀ ಜಗನ್ನಾಥ ದೇವಸ್ಥಾನದ ಗರ್ಭಗುಡಿಯೊಳಗೆ ಬಿಡಲಿಲ್ಲ ಎಂಬ ಸುದ್ದಿ ಆಘಾತಕಾರಿಯಾಗಿದೆ. ಈ ಸುದ್ದಿ ನಿಜವಾಗಿದ್ದರೆ, ಭಾರತ ಸಂವಿಧಾನದ 14-17ನೇ ವಿಧಿಯ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು. ಮಂತ್ರಿಗಳು ಗರ್ಭಗುಡಿ ಪ್ರವೇಶಿಸಿ ವಿಗ್ರಹಗಳನ್ನು ಪೂಜಿಸುವಾಗ ರಾಷ್ಟ್ರಪತಿಗಳು ಪ್ರವೇಶಿಸಬಾರದೇ?

ಅದೇ ರೀತಿ 2018ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಗೂ ಅವಕಾಶ ನೀಡಿರಲಿಲ್ಲ. ಈ ಬಗ್ಗೆ ದೂರು ಕೇಳಿ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇವು ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ಕ್ರೌರ್ಯ ಚಾಲ್ತಿಯಲ್ಲಿದೆ ಎಂಬುದನ್ನು ತೋರಿಸುತ್ತದೆ.

ರಾಷ್ಟ್ರಪತಿಯಾಗಿದ್ದರೂ ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಆದ್ದರಿಂದಲೇ ಭಾರತಕ್ಕೆ ವೈಚಾರಿಕತೆ ಮತ್ತು ಸಮಾನತೆಯ ದ್ರಾವಿಡ ಸಿದ್ಧಾಂತದ ಅಗತ್ಯವಿದೆ ಎಂದು ಹೇಳುತ್ತಿದ್ದೇವೆ. ಸಾಮಾಜಿಕ ನ್ಯಾಯದ ಆಂದೋಲನವನ್ನು ಭಾರತದಾದ್ಯಂತ ತೆಗೆದುಕೊಳ್ಳಬೇಕಾಗಿದೆ” ಎಂದು ಹೇಳಿದ್ದಾರೆ.

ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ನೀಡಿರುವ ವಿವರಣೆ ತುಂಬಾ ವಿಚಿತ್ರವಾಗಿದೆ. ಇವರಂತೆಯೇ ಬಿಜೆಪಿಯ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿಯವರು ಇದ್ದಕ್ಕಿದ್ದಂತೆ ಪೂಜೆಗೆಂದು ಹೋದರೆ, ಅವರನ್ನು ಗರ್ಭಗುಡಿಯೊಳಗೆ ಬಿಡದೆ ಕಳುಹಿಸುತ್ತಿದ್ದರೇ? ಈ ದೇಶದ ಪ್ರಥಮ ಮಹಿಳಾ ಪ್ರಜೆ ಬಂದಾಗ, ನಿಯಮಗಳನ್ನು ಮುರಿದು ಗೌರವವನ್ನು ತೋರಿಸುವುದು ಸಂಪ್ರದಾಯವಾಗಿದೆ. ಆದರೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೆ ಮಾಡಲಿಲ್ಲ.

ಬುಡಕಟ್ಟು ಜನರೂ ಹಿಂದೂಗಳೇ ಎಂದು ಆರ್‌ಎಸ್‌ಎಸ್ ಪ್ರಚಾರ ಮಾಡಿದರೂ, ಅವರನ್ನು ಸನಾತನ ಧರ್ಮಕ್ಕೆ ತರಲು ಸಾಧ್ಯವಿಲ್ಲ ಎಂಬುದೇ ವಾಸ್ತವ. ಏಕೆಂದರೆ ಬುಡಕಟ್ಟು ಜನರು ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ ಎಂಬುದು ಸತ್ಯ.

ರಾಜಕೀಯ

ಚೆನ್ನೈ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ಕಾನೂನಿನಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇಂದು ವಿಧಾನಸಭೆಯಲ್ಲಿ ಸರ್ಕಾರದ ಪ್ರತ್ಯೇಕ ನಿರ್ಣಯವನ್ನು ಮಂಡಿಸಲಿದ್ದಾರೆ.

ಭಾರತದ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಒದಗಿಸಲಾದ ಶಾಸನಬದ್ಧ ರಕ್ಷಣೆ, ಹಕ್ಕುಗಳು ಮತ್ತು ಮೀಸಲಾತಿ ಸೇರಿದಂತೆ ಸವಲತ್ತುಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೂ ವಿಸ್ತರಿಸಿ, ಅವರು ಎಲ್ಲಾ ರೀತಿಯಲ್ಲೂ ಸಾಮಾಜಿಕ ನ್ಯಾಯದ ಪ್ರಯೋಜನಗಳನ್ನು ಪಡೆಯಲು ಸಂವಿಧಾನದಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರದ ಪ್ರತ್ಯೇಕ ನಿರ್ಣಯವನ್ನು ಮಂಡಿಸಲಿದ್ದಾರೆ.