ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.
ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ 4% ಮೀಸಲಾತಿಯನ್ನು ರದ್ದುಗೊಳಿಸಿದ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರದ ಆದೇಶಕ್ಕೆ ತಡೆ ನೀಡಿ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದೆ.
ಮುಸ್ಲಿಮರ 4% ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ 2% ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ 2% ಮೀಸಲಾತಿ ಹಂಚಿಕೆ ಮಾಡಿತು.
ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರ ನೇತೃತ್ವದ ನ್ಯಾಯಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ 4% ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು. ಇದೀಗ ಸುಪ್ರೀಂಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.
ಸುಪ್ರೀಂಕೋರ್ಟ್ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತ ಸಮುದಾಯಗಳ ಮುಖಂಡರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಹಲವಾರು ಹೋರಟಗಳು ನಡೆದವು. ಚುನಾವಣೆಯ ಸಂದರ್ಭದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಒತ್ತಡಕ್ಕೆ ಮಣಿದ ಬಿಜೆಪಿ ಸರ್ಕಾರ, ಮಾಡುವುದರಿಯದೆ ಮುಸ್ಲಿಮರ 4% ಒಬಿಸಿ ಮೀಸಲಾತಿಯನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ 2% ಹೆಚ್ಚಿಸಿ ಆದೇಶ ಹೊರಡಿಸಿತು.
ಇದರಿಂದ ಸಮಾದಾನವಾಗದ ಒಕ್ಕಲಿಗರು ಮತ್ತು ಲಿಂಗಾಯತರು, “ಮುಸ್ಲಿಮರ ಮೀಸಲಾತಿಯನ್ನು ಕಿತ್ತು ನಮಗೆ ಕೋಡುವುದು ಸೂಕ್ತವಲ್ಲ; ನಮಗೆ ಈ 2% ಮೀಸಲಾತಿಯಿಂದ ಏನೂ ಪ್ರಯೋಜನವಿಲ್ಲ” ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿತು. ಮಸ್ಲಿಮರು, “ನಮ್ಮ ಮೀಸಲಾತಿಯನ್ನು ಕಿತ್ತು ಒಕ್ಕಲಿಗರು ಮತ್ತು ಲಿಂಗಾಯತರಿಗೆ ನೀಡಿ, ಅಣ್ಣ ತಮ್ಮಂದಿರಂತೆ ಇರುವ ನಮ್ಮೊಳಗೆ ಜಗಳ ತರಲು ಬಿಜೆಪಿ ಸರ್ಕಾರ ಕುತಂತ್ರ ಮಾಡುತ್ತಿದೆ. ನಾವು ಯಾರೊಂದಿಗೂ ಸಂಘರ್ಷಕ್ಕೆ ಇಳಿಯದೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಘೋಷಿಸಿ. ಕಾನೂನು ಹೋರಟವನ್ನು ಕೈಗೆತ್ತಿಕೊಂಡರು. ಅವರು ಹೇಳಿದಂತೆ ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಇಂದು ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.
ಸೂಕ್ಷಮವಾಗಿ ಗಮನಿಸಿದರೆ, ಇದು ಮುಸ್ಲಿಮರಿಗೆ ಮಾತ್ರ ಸಿಕ್ಕಿದ ಜಯವಲ್ಲ. ಇದು ಒಕ್ಕಲಿಗರು ಮತ್ತು ಲಿಂಗಾಯತರಿಗೂ ಸಿಕ್ಕಿದ ಜಯವೇ. ನಮ್ಮನ್ನಾಳುವ ಬಿಜೆಪಿ ಸರ್ಕಾರ ವೂಟ್ ಬ್ಯಾಂಕ್ ರಾಜಕಾರಣ ಮಾಡಲಿಕ್ಕಾಗಿ ಮುಸ್ಲಿಮರು, ಲಿಂಗಾಯತರು ಹಾಗೂ ಒಕ್ಕಲಿಗರ ನಡುವೆ ಮೀಸಲಾತಿ ಗೇಮ್ ಫ್ಲೇ ಮಾಡಿ, ಇಂದು ತಲೆ ತಗ್ಗಿಸುವಂತೆ ಆಗಿದೆ. ಖಂಡಿತವಾಗಿಯೂ ಇದರ ಪರಿಣಾಮವನ್ನು ಬಿಜೆಪಿ ಪಕ್ಷವು ಚುನಾವಣೆಯಲ್ಲಿ ಎದುರಿಸಲಿದೆ. ಬಿಜೆಪಿ ಮುಸ್ಲಿಮರಿಗೆ ಮಾತ್ರವಲ್ಲ. ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯಕ್ಕೂ ವಿರೋಧಿ ಎಂಬುದು ಈಗ ಸಾಬೀತಾಗಿದೆ.
ಈ ನಡುವೇ ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದನ್ನು ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಶೇಕಡ 4ರಷ್ಟು ಮೀಸಲಾತಿ ಇತ್ತು. ಮತಬ್ಯಾಂಕ್ ರಾಜಕಾರಣಕ್ಕೆ ಮಣಿಯದೆ ಬಿಜೆಪಿ ಸರಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದೆ. ಎಂದು ಹೇಳಿದ್ದಾರೆ.