ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಹೆಚ್.ರಾಜಾ Archives » Dynamic Leader
December 4, 2024
Home Posts tagged ಹೆಚ್.ರಾಜಾ
ರಾಜಕೀಯ

ಚೆನ್ನೈ: ಪೆರಿಯಾರ್ ಪ್ರತಿಮೆಯನ್ನು ಒಡೆಯುವುದಾಗಿ ಮತ್ತು ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿ ಮಾಡಿದ ಪ್ರಕರಣಗಳ ಅಡಿಯಲ್ಲಿ ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ ಹೆಚ್.ರಾಜಾ ಅವರಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಡಲಾಗಿದೆ.

ತಮಿಳುನಾಡು ಬಿಜೆಪಿ ಸಮನ್ವಯ ಸಮಿತಿ ಅಧ್ಯಕ್ಷ ಹೆಚ್.ರಾಜಾ ಅವರು ಕಳೆದ 2018ರಲ್ಲಿ ತಮ್ಮ ಎಕ್ಸ್ ಸೈಟ್ (ಅಂದಿನ ಟ್ವಿಟ್ಟರ್) ಪುಟದಲ್ಲಿ ಪೆರಿಯಾರ್ ಪ್ರತಿಮೆಯನ್ನು ಒಡೆಯುವುದಾಗಿ ಪೋಸ್ಟ್ ಮಾಡಿದ್ದರು. ಮತ್ತು ಡಿಎಂಕೆ ಸಂಸದೆ ಕನಿಮೊಳಿ ವಿರುದ್ಧ ಮಾನಹಾನಿಕರ ಪೋಸ್ಟ್ ಗಳನ್ನು ಹಾಕಿದ್ದರು. ಇದರ ವಿರುದ್ಧ ಡಿಎಂಕೆ, ಕಾಂಗ್ರೆಸ್ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಯಿತು. ಇದರಲ್ಲಿ ಈರೋಡ್ ನಗರ ಪೊಲೀಸರು, ಕರುಂಗಲ್ಪಾಳ್ಯಂ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಮೇರೆಗೆ ಹೆಚ್.ರಾಜಾ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೆಚ್.ರಾಜಾ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಈ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸಂಸದರು, ಶಾಸಕರುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿತು.

ಬಳಿಕ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಜಯವೇಲ್ ಅವರ ಮುಂದೆ ಈ ಸಂಬಂಧ ವಿಚಾರಣೆ ನಡೆಯಿತು. ಇದರಲ್ಲಿ ಪೆರಿಯಾರ್ ಪ್ರತಿಮೆಯನ್ನು ಒಡೆಯಬೇಕು ಎಂಬುದಕ್ಕೆ ಯಾವುದೇ ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಡಿಎಂಕೆ ಸಂಸದೆ ಕನಿಮೊಳಿ ಅವರ ಮೇಲಿನ ಹೇಳಿಕೆ ರಾಜಕೀಯ ಕಾಮೆಂಟ್ ಆಗಿದ್ದು, ಅದರಲ್ಲಿ ಕನಿಮೊಳಿಯವರು ಯಾವುದೇ ದೂರನ್ನು ನೀಡದಿದ್ದರೂ ಮೂರನೇ ವ್ಯಕ್ತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುವುದರಿಂದ ಈ ಪ್ರಕರಣದಿಂದ ಬಿಡುಗಡೆ ಮಾಡಬೇಕು ಎಂದು ಹೆಚ್.ರಾಜಾ ಅವರ ಕಡೆಯಿಂದ ವಾದಿಸಿಸಲಾಯಿತು.

ಎಲ್ಲಾ ವಾದಗಳನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಇಂದು (ಡಿ 2) ಎರಡೂ ಪ್ರಕರಣಗಳಲ್ಲಿ ತೀರ್ಪನ್ನು ನೀಡಿದರು. ಅದರಂತೆ “ಪೊಲೀಸರ ಕಡೆಯಿಂದ ಹೆಚ್.ರಾಜಾ ಅವರು ಅಪರಾಧ ಎಸಗಿರುವುದು ಸಾಬೀತಾಗಿದೆ. ಈ ಎರಡೂ ಪೋಸ್ಟ್‌ಗಳನ್ನು ಹೆಚ್.ರಾಜಾ ಅವರ ಸಾಮಾಜಿಕ ಮಾಧ್ಯಮ ಪುಟದಿಂದ ಪ್ರಕಟಿಸಲಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ”  ಎಂದು ನ್ಯಾಯಾಧೀಶ ಜಿ.ಜಯವೇಲ್ ಹೇಳಿದ್ದಾರೆ. ಅಲ್ಲದೆ, ಹೆಚ್.ರಾಜಾಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಎರಡೂ ಪ್ರಕರಣಗಳಲ್ಲಿ ರೂ.5000 ದಂಡ ವಿಧಿಸಿ ಆದೇಶಿಸಲಾಗಿದೆ.

ಇದರ ಬೆನ್ನಲ್ಲೇ ಹೆಚ್.ರಾಜಾ ಕಡೆಯಿಂದ ತಾವು ಮೇಲ್ಮನವಿ ಸಲ್ಲಿಸಲಿದ್ದು ಸಮಯಾವಕಾಶ ನೀಡಬೇಕೆಂದು ನ್ಯಾಯಾಧೀಶರನ್ನು ಕೇಳಲಾಯಿತು. ಈ ಮನವಿಯನ್ನು ಸ್ವೀಕರಿಸಿದ ನ್ಯಾಯಾಧೀಶರು ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದರು. ಅಲ್ಲದೆ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಆದಾಗ್ಯೂ, ದಂಡವನ್ನು ತಕ್ಷಣವೇ ಪಾವತಿಸಲಾಯಿತು. ಈ ಒಂದು ತಿಂಗಳ ಅವಧಿಯಲ್ಲಿ ಯಾವುದೇ ಮೇಲ್ಮನವಿ ಸಲ್ಲಿಸದಿದ್ದರೆ ಶಿಕ್ಷೆ ಜಾರಿಯಾಗುತ್ತದೆ ಎಂಬುದು ಗಮನಾರ್ಹ.