ಶಿವಮೊಗ್ಗ:ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, “ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ” ಎಂದಿದ್ದಾರೆ.
“ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದಿದ್ದಾರೆ.
“ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ! ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ! ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ ಕೆ.ಎಸ್.ಈಶ್ವರಪ್ಪ ಈಗ ಟಿಕೆಟ್‌ಗೂ ಲಾಭಿ ನಡೆಸಿ ಸುಸ್ತಾದರು. ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. “I am withdrawing from electoral politics,” KS Eshwarappa said in a letter to BJP president JP Nadda.