ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
B.Y.Vijayendra Archives » Dynamic Leader
October 23, 2024
Home Posts tagged B.Y.Vijayendra
ರಾಜ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿ ಜಾರಿಗೊಳಿಸಿರುವ ಆದೇಶದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ” ಎಂದು ಕಿಡಿಕಾರಿದರು.

“ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೆ ಏರಲಿದ್ದು, ಜನಸಾಮಾನ್ಯರು, ಕಾರ್ಮಿಕರು, ಬಡವರು, ರೈತರು ಹಾಗೂ ಮಧ್ಯಮ ವರ್ಗದವರು ಈ ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರದಿಂದ ನಿರ್ಮಾಣ ಮಾಡಲಾಗಿದೆ” ಎಂದು ಹೇಳಿದರು. ತಕ್ಷಣ ಈ ನಿರ್ಧಾರವನ್ನು ಹಿಂಪಡೆಯುವಂತೆಯೂ ಸರ್ಕಾರಕ್ಕೆ ಎಚ್ಚರಿಸಲಾಯಿತು.

ಈ ಪ್ರತಿಭಟನಾ ಧರಣಿಯಲ್ಲಿ, ವಿರೋಧ ಪಕ್ಷ ನಾಯಕ ಆರ್.ಆಶೋಕ್, ಮಾಜಿ ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ಬೈರತಿ ಬಸವರಾಜ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಗೋಪಿನಾಥ್ ರೆಡ್ಡಿ, ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ರಘು, ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಎ.ಎಸ್.ಪಾಟೀಲ್ ನಡಹಳ್ಳಿ, ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು, ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ರಾಜಕೀಯ

ಬೆಂಗಳೂರು: ನವೆಂಬರ್ 17 ರಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆ, ಘೋಷಣೆಯಾಗುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಅವರು ಔಪಚಾರಿಕವಾಗಿ ಅಧಿಕಾರ ಸ್ವೀಕರಿಸಿದರು.

“ನವೆಂಬರ್ 17 ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಕೇಂದ್ರ ವೀಕ್ಷಕರು ಬರಲಿದ್ದಾರೆ. ಮಾಹಿತಿ ಪ್ರಕಾರ ಇಬ್ಬರು ವೀಕ್ಷಕರು ಬರಲಿದ್ದಾರೆ. ಯಾರು ಬರುತ್ತಾರೆ ಎಂಬುದು ನಾಳೆ ತಿಳಿಯಲಿದೆ” ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.