ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Bangalore Traffic Police Archives » Dynamic Leader
November 21, 2024
Home Posts tagged Bangalore Traffic Police
ಬೆಂಗಳೂರು

ಬೆಂಗಳೂರು: ಸಂಚಾರ ಉತ್ತರ ವಿಭಾಗದ ವಿವಿಧ ಪೊಲೀಸ್ ಠಾಣಾ ಸರಹದ್ದಿನ ರಸ್ತೆಗಳಲ್ಲಿ, ವ್ಹಿಲೀಂಗ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನಲೆಯಲ್ಲಿ, ಕಾರ್ಯ ಪ್ರವೃತ್ತರಾದ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಚಿನ್ ಪಿ ಘೋರ್ಪಡೆ ಹಾಗೂ ಅವರ ಅಧಿಕಾರಿ ಸಿಬ್ಬಂಧಿಯವರ ತಂಡಗಳು, ಹಲವು ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿಕೊಂಡು, ವ್ಹಿಲೀಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಂಡಿರುತ್ತಾರೆ.

ವ್ಹಿಲೀಂಗ್ ಮಾಡುವವರ ವಿರುದ್ಧ ಪೀಣ್ಯ, ಚಿಕ್ಕಜಾಲ, ಹೆಬ್ಬಾಳ ಮತ್ತು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ಹಾಗೂ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ. ಒಟ್ಟು 6 ಪ್ರಕರಣಗಳನ್ನು ದಾಖ್ಲಿಸಿ, 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಚರಣೆಯಲ್ಲಿ ಒಟ್ಟು 6 ಆರೋಪಿತರ ಪೈಕಿ, 5 ಜನ 18 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಒಬ್ಬ ಅಪ್ರಾಪ್ತನಾಗಿರುತ್ತಾನೆ. ಆರೋಪಿಗಳ ವಾಹನಕ್ಕೆ ಸಂಬಂಧಿಸಿದ ಆರ್.ಸಿ.ಯನ್ನು ರದ್ದುಗೊಳಿಸಲು ಹಾಗೂ ಡ್ರೈವಿಂಗ್ ಲೈಸನ್ಸ್ ಅಮಾನತ್ತುಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಹಾಗೂ ಜಂಟಿ ಪೊಲೀಸ್ ಆಯುಕ್ತರು ಸಂಚಾರ ಎಂ.ಎನ್.ಅನುಚೇತ್ ರವರು ಈ ರೀತಿ ವ್ಹಿಲೀಂಗ್ ಮಾಡುವವರ ವಿರುದ್ದ ಬೆಂಗಳೂರಿನಾದ್ಯಂತ ಕಾರ್ಯಚರಣೆಯನ್ನು ಮುಂದುವರೆಸಲಾಗುವುದೆಂದು ತಿಳಿಸಿರುತ್ತಾರೆ. 

ಬೆಂಗಳೂರು

ಕರ್ನಾಟಕ ಪರೀಕ್ಷಾ ಪ್ರಾಧೀಕಾರದ ವತಿಯಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯು (CET) ದಿನಾಂಕ: 20-05-2023 ಮತ್ತು 21-05-2023 ರಂದು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಷವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

“ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಹಾಗೂ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಇವರ ಸೂಚನೆಯ ಮೇರೆಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರರಕರಣದ ಅನ್ವಯ ಪ್ರದತ್ತರವಾದ ಅಧಿಕಾರವನ್ನು ಚಲಾಯಿಸಿ, ದಿನಾಂಕ: 20-05-2023 ರಂದು ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಮತ್ತು ದಿನಾಂಕ: 21-05-2023 ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ” ಎಂದು ವಿಷೇಶ ಪೊಲೀಸ್ ಆಯುಕ್ತರು, ಸಂಚಾರ ಮತ್ತು ಪೊಲೀಸ್ ಆಯುಕ್ತರು (ಪ್ರಭಾರ) ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಎಂ.ಎ.ಸಲೀಂ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.