ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Brand Bengaluru Web Portal Archives » Dynamic Leader
November 21, 2024
Home Posts tagged Brand Bengaluru Web Portal
ರಾಜಕೀಯ

ಬೆಂಗಳೂರು: ಬೆಂಗಳೂರು ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, “ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ brandbengaluru.karnataka.gov.in ಎನ್ನುವ ವೆಬ್ ಪೋರ್ಟಲ್‌ಅನ್ನು ಆರಂಭಿಸಲಾಗಿದೆ” ಎಂದರು.

“ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಾರ್ವಜನಿಕರು, ಬೆಂಗಳೂರಿನ ನಿವಾಸಿಗಳು, ಎನ್‌ಆರ್‌ಐಗಳು ತಮ್ಮ ಅಭಿಪ್ರಾಯಗಳನ್ನು ಈ ಪೋರ್ಟಲ್‌ ಮೂಲಕ ಹಂಚಿಕೊಳ್ಳಬಹುದಾಗಿದೆ. ಇಲ್ಲಿ ದಾಖಲಾಗುವ ಅಭಿಪ್ರಾಯಗಳ ಕುರಿತು ಪರಾಮರ್ಶೆ ನಡೆಸಿ ಸೂಕ್ತ ಸಲಹೆಗಳನ್ನು ಪರಿಗಣಿಸಲಾಗುವುದು.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ರಸ್ತೆಗುಂಡಿಗಳ ಸಮಸ್ಯೆ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ನಿವಾಸಿಗಳು, ಬೆಂಗಳೂರಿನಿಂದ ವಿದೇಶಕ್ಕೆ ತೆರಳಿ ನೆಲೆಸಿರುವವರೂ ಕೂಡ ಗಂಭೀರವಾಗಿ ನೋಡುತ್ತಿದ್ದಾರೆ. ಬೆಂಗಳೂರು ವಿಶ್ವದರ್ಜೆಯ ನಗರಗಳಿಗೆ ಸ್ಪರ್ಧೆಯೊಡ್ಡುವಂತೆ ಮಾಡಬೇಕು. ಇದಕ್ಕಾಗಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ.

ಕೆಲವು ನಿವೃತ್ತ ಅಧಿಕಾರಿಗಳು, ಉದ್ಯಮಿಗಳು, ನಿವಾಸಿಗಳು, ಸ್ಥಳೀಯ ಶಾಸಕರು, ಮಾಜಿ ಕಾರ್ಪೊರೇಟರ್‌ಗಳ ಅಭಿಪ್ರಾಯಗಳನ್ನು ಪಡೆದಿದ್ದೇನೆ. ನಿನ್ನೆಯಷ್ಟೇ ಘನತ್ಯಾಜ್ಯ ನಿರ್ವಹಣಾ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಂಗಳೂರಿನ ವಿವಿಧ ಜಂಕ್ಷನ್‌ಗಳಿಗೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್‌ ಸಮಸ್ಯೆಯನ್ನು ಕಣ್ಣಾರೆ ನೋಡಿದ್ದೇನೆ.

ದೆಹಲಿ,  ಮುಂಬೈನಲ್ಲಿ ಬೆಂಗಳೂರಿಗಿಂತ ಹೆಚ್ಚು ಟ್ರಾಫಿಕ್‌ ಸಮಸ್ಯೆ ಇದೆ. ಆದರೆ ಎಲ್ಲರೂ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಏಕೆಂದರೆ ಬೆಂಗಳೂರು ಇಂದು ಜಾಗತಿಕವಾಗಿ ಗುರುತಿಸಿಕೊಂಡಿದೆ. ಈಗ ಬಿಡುಗಡೆಗೊಳಿಸಿರುವ ಪೋರ್ಟಲ್‌ನಲ್ಲಿ ಹಳ್ಳಿಯಲ್ಲಿ ನೆಲೆಸಿರುವವರಿಂದ ಹಿಡಿದು ವಿದೇಶದಲ್ಲಿ ನೆಲೆಸಿರುವವರೂ ಸಲಹೆ ನೀಡಬಹುದಾಗಿದೆ” ಎಂದು ಹೇಳಿದ್ದಾರೆ.

Brand Bengaluru: Karnataka govt launches portal inviting suggestions on city development.
The Karnataka government on Wednesday launched a portal for people to share suggestions regarding the development of the city, under the title ‘Brand Bengaluru’. Stressing that public view was very important for the development of Bengaluru, Deputy Chief Minister DK Shivakumar said, “I have already held a meeting of all party MLAs from the city. I have discussed with brand ambassadors of Bengaluru from all sectors. Along with them, public opinion is also important. So we are starting a portal to collect opinions.”