ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಪ್ರಪಂಚದಾದ್ಯಂತ ಹರಡಿ ಸಾಕಷ್ಟು ಹಾನಿಯನ್ನು ಉಂಟುಮಾಡಿತು. ನಂತರ, ವಿವಿಧ ದೇಶಗಳು ಕೊರೊನಾ ಲಸಿಕೆಯನ್ನು ಕಂಡುಹಿಡಿದವು.
ಇಂಗ್ಲೆಂಡ್ ಮೂಲದ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಲಸಿಕೆಯನ್ನು ಅಭಿವೃದ್ಧಿಪಡಿಸಿತು. ಈ ಲಸಿಕೆಯನ್ನು ಭಾರತದಲ್ಲಿ ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ವಿತರಿಸಲಾಯಿತು. ಈ ಲಸಿಕೆಯನ್ನೇ ಅನೇಕ ದೇಶಗಳಲ್ಲಿ ನೀಡಲಾಯಿತು.
ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ, ಭಾರತದಲ್ಲಿ 175 ಕೋಟಿಗೂ ಹೆಚ್ಚು ಕೋವಿಶೀಲ್ಡ್ ಲಸಿಕೆಗಳನ್ನು ನೀಡಲಾಗಿದೆ. ಈ ಹಿನ್ನಲೆಯಲ್ಲಿ, ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರುತ್ತದೆ ಎಂದು ಅಸ್ಟ್ರಾಜೆನೆಕಾ ಕಂಪನಿ ಒಪ್ಪಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿರುವ ಭಾರತೀಯ ವೈದ್ಯರು,
‘ಇದು ಹೊಸ ಮಾಹಿತಿಯೇನಲ್ಲ. ಕೋವಿಶೀಲ್ಡ್ ಲಸಿಕೆಯನ್ನು ಸಾರ್ವಜನಿಕರಿಗೆ ಪರಿಚಯಿಸಿದಾಗಿನಿಂದ ಅದರ ಬಗ್ಗೆ ಎಚ್ಚರಿಕೆಯನ್ನು ನಾವು ತಿಳಿದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆಯು ಈ ಲಸಿಕೆಯನ್ನು ನೀಡುವುದರಿಂದ ಅಪರೂಪದ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವು ತುಂಬಾ ಕಡಿಮೆ ಎಂದು ಘೋಷಿಸಿದೆ.
ಇಂಗ್ಲೆಂಡ್ ನಲ್ಲಿ ಪ್ರತಿ ಮಿಲಿಯನ್ ಜನರಿಗೆ 4 ಪ್ರಕರಣಗಳು, ಯುರೋಪ್ ನಲ್ಲಿ 1,00,000 ಜನರಿಗೆ 1 ಪ್ರಕರಣ ಮತ್ತು ಭಾರತದಲ್ಲಿ ಪ್ರತಿ ಮಿಲಿಯನ್ ಡೋಸ್‌ಗಳಿಗೆ 0.61 ಪ್ರಕರಣಗಳು ದಾಖಲಾಗಿದೆ” ಎಂದು ಹೇಳಿದ್ದಾರೆ.