ಕಲಬುರಗಿ: ಕಲಬುರಗಿ ತಾಲ್ಲೂಕಿನ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತ್ಸೋತ್ಸವವನ್ನು ಉದ್ಘಾಟಿಸಿ, ರಾಯಣ್ಣನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಸ್ವಾತಂತ್ರ್ಯ ಸೇನಾನಿಗೆ ಪುಷ್ಪನಮನ ಸಲ್ಲಿಸಿದರು.
ತಿಂಥಣಿ ಕಾಗಿನೆಲೆ ಪೀಠದ ಜಗದ್ಗುರು ಸಿದ್ದರಾಮಾನಂದಪುರಿ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ, ಶಾಸಕರಾದ ಎಂ.ವೈ.ಪಾಟೀಲರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಚಿವರಾದ ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.