ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
“ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ. ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ. ಇದು ತಪ್ಪೆ” ಎಂದು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಪ್ರಶ್ನೆ ಮಾಡಿದ್ದಾರೆ.
“ಕೇಂದ್ರದ ನಿಮ್ಮ BJP ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಒಂದೇ ಎರಡೇ? GST ಬಾಕಿಯಲ್ಲಿ ಮೋಸ, GST ಪರಿಹಾರದಲ್ಲಿ ಮೋಸ, ನೆರೆ ಪರಿಹಾರದಲ್ಲಿ ಮೋಸ, ಬರ ಪರಿಹಾರದಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು.
ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೆ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ” ಎಂದು ಹೇಳಿದ್ದಾರೆ.