ಬೆಂಗಳೂರು: ಶಹಾಪುರ ಹಾಗೂ ಜೇವರ್ಗಿ ತಾಲ್ಲೂಕಿನ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಮಲ್ಲಾಬಾದ್ ಲಿಫ್ಟ್ 1,2,3 ಕಾಲುವೆಗಳ ಮೂಲಕ 28 ದಿನಗಳವರೆಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಿಗೆ ಸೂಚನೆ ನೀಡಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಇಂದು ಮನವಿ ಮಾಡಲಾಯಿತು.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿಯಾದ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರು ಶಹಾಪುರ ಹಾಗೂ ಜೇವರ್ಗಿ ತಾಲ್ಲೂಕಿನ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಮಲ್ಲಾಬಾದ್ ಲಿಫ್ಟ್ 1,2,3 ಕಾಲುವೆಗಳ ಮೂಲಕ ಒಂದು ವಾರದವರೆಗೆ: (28-10-2023 ರಿಂದ 4-11-2023) ನೀರು ಹರಿಸುವ ಆದೇಶವನ್ನು ಬದಲಿಸಿ ಸಂಪೂರ್ಣ 28 ದಿನಗಳವರೆಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಿಗೆ ಸೂಚನೆ ನೀವುವಂತೆ ಮನವಿ ಮಾಡಿದರು.
ಇತ್ತೀಚೆಗೆ ಎರಡೂ ತಾಲ್ಲೂಕುಗಳ ರೈತರು ಶಹಾಪುರ ಶಾಸಕರೂ ಆದ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡಿದ್ದರು. ಇದರಿಂದ ಶಹಾಪುರ ಹಾಗೂ ಜೇವರ್ಗಿ ತಾಲ್ಲೂಕುಗಳ ಸಾವಿರಾರು ರೈತರಿಗೆ ಅನುಕೂಲವಾಗಲಿದೆ ಎಂದು ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ.