ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
dynamicleader.in Archives » Page 2 of 2 » Dynamic Leader
October 23, 2024
Home Posts tagged dynamicleader.in (Page 2)
ಕ್ರೈಂ ರಿಪೋರ್ಟ್ಸ್ ದೇಶ

ಜುನಾಗಢ: ಜೂನ್ 14ರಂದು ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ಮಜೆವಾಡಿ ದರ್ವಾಜಾ ಬಳಿಯ ಮಸೀದಿಯೊಂದಕ್ಕೆ ಜಮೀನಿನ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿತ್ತು. ನೋಟಿಸ್‌ನಿಂದ ಕ್ಷೋಭೆಗೊಳಗಾದ ಸುಮಾರು 500-600 ಜನರು ಶುಕ್ರವಾರ ರಾತ್ರಿ ಧಾರ್ಮಿಕ ಕಟ್ಟಡದ ಬಳಿ ಜಮಾಯಿಸಿ ರಸ್ತೆಗಳನ್ನು ತಡೆದರು ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ತಿಳಿಸಿದ್ದಾರೆ.

ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ಸಲುವಾಗಿ, ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ನ ಕಾರ್ಯಚರಣೆಯನ್ನು ವಿರೋಧಿಸಿ, ಸ್ಥಳೀಯರ ಗುಂಪೊಂದು ಕಲ್ಲು ತೂರಾಟ ಮತ್ತು ವಾಹನಕ್ಕೆ ಬೆಂಕಿ ಹಚ್ಚಿದ ಕಾರಣ, ಉಂಟಾದ ಗಲಭೆಯಲ್ಲಿ ಗುಜರಾತಿನ ಜುನಾಗಢ ನಗರದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮತ್ತು ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದ ಮಜೆವಾಡಿ ದರ್ವಾಜಾ ಬಳಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ನಂತರ ಅಲ್ಲಿದ್ದ 174 ಜನರನ್ನು ಸುತ್ತುವರೆದು ಗಲಭೆ ನಡೆಯದಂತೆ ಎಚ್ಚರಿಕೆಯ ಕ್ರಮವನ್ನು ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಾಗರಿಕನ ಸಾವಿನ ಹಿಂದಿನ ನಿಖರವಾದ ಕಾರಣ ತಿಳಿದುಬರುತ್ತದೆ. ಆದರೆ, ಗುಂಪು ಎಸೆದ ಕಲ್ಲಿನಿಂದಲೇ ಆತ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸ್ಥಳದಲ್ಲಿದ್ದ ಜುನಾಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಸಿಬ್ಬಂದಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯ ಬಳಿಕ, ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿಭಟನಾಕಾರರ ರಸ್ತೆ ತಡೆಯನ್ನು ತೆರವುಗೊಳಿಸಲಾಯಿತು. ಆದರೆ, ರಾತ್ರಿ 10.15ರ ಸುಮಾರಿಗೆ ಏಕಾ ಏಕಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು ಎಂದು ಪೊಲೀಸರು ಹೇಳುತ್ತಾರೆ.

ಘೋಷಣೆಗಳನ್ನು ಕೂಗುತ್ತಾ, ದರ್ಗಾಗೆ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡ ಕೆಲವರು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದರು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಚಾರ್ಜ್ ಮಾಡಿದರು. ಘಟನೆಯಲ್ಲಿ ಜುನಾಗಢ ಡಿವೈಎಸ್ಪಿ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

“ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪೊಲೀಸ್ ತಂಡಗಳ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 174 ಜನರನ್ನು ಸುತ್ತುವರೆದು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಘರ್ಷಣೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.

ಸಿನಿಮಾ

ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾ ರಾಮಾಯಣ ಕಥೆಯನ್ನಾಧರಿಸಿ ತೆರೆಕಂಡಿದೆ. ಇದರಲ್ಲಿ ರಾಮನಾಗಿ ಪ್ರಭಾಸ್, ರಾವಣನಾಗಿ ಸೈಫ್ ಅಲಿ ಖಾನ್ ಮತ್ತು ಸೀತೆಯಾಗಿ ಕೀರ್ತಿ ಸನನ್ ನಟಿಸಿದ್ದಾರೆ. ಅದ್ಧೂರಿ ಚಿತ್ರವನ್ನು ಡಿ ಸಿರೀಸ್ ಮತ್ತು ರೆಟ್ರೋ ಪೈಲ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇತರ ಭಾಷೆಗಳಲ್ಲಿ 3ಡಿ ತಂತ್ರಜ್ಞಾನದಲ್ಲಿ ಆದಿಪುರುಷ ಚಿತ್ರ ನಿನ್ನೆ (ಜೂನ್ 16) ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಆದಿಪುರುಷ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಚಿತ್ರವಾಗಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ನೆಗೆಟಿವ್ ವಿಮರ್ಶೆಗಳೂ ಬಂದಿವೆ.

ಸುಮಾರು ರೂ.500 ಕೋಟಿ ಬಜೆಟ್ ನಲ್ಲಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ತಯಾರಾಗಿರುವ ಚಿತ್ರದ ಅನಿಮೇಷನ್ ದೃಶ್ಯಗಳನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. VFX ದೃಶ್ಯಗಳು ಇನ್ನೂ ಚೆನ್ನಾಗಿರಬಹುದಿತ್ತು ಎಂಬುದು ಹೆಚ್ಚಿನ ಅಭಿಮಾನಿಗಳ ಸಾಮಾನ್ಯ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ಹಿಂದೂಸೇನಾ ಸಂಘಟನೆಯು ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ರಾಮಾಯಣ ಕಥೆಯಾಧಾರಿತ ಆದಿಪುರುಷ ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳಿದ್ದು, ಅದನ್ನು ತೆಗೆಯಬೇಕು ಎಂದು ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಮ, ರಾಮಾಯಣ, ಹಿಂದೂ ಸಂಸ್ಕೃತಿಯನ್ನು ಗೇಲಿ ಮಾಡಲಿಕ್ಕಾಗಿ ಆದಿಪುರುಷ ಸಿನಿಮಾ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿಂದೆ, ಆದಿಪುರುಷ ಚಿತ್ರದಲ್ಲಿ, ಸೀತೆಯನ್ನು ಭಾರತದ ಮಗಳು ಎಂದು ಉಲ್ಲೇಖಿಸಿದ್ದಕ್ಕಾಗಿ ನೇಪಾಳದಲ್ಲಿ ತೀವ್ರ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ರಾಮಾಯಣದ ಪ್ರಕಾರ ಸೀತೆ ನೇಪಾಳದಲ್ಲಿ ಜನಿಸಿದವಳು. ರಾಮ ಬಂದು ಸೀತೆಯನ್ನು ಮದುವೆಯಾಗುತ್ತಾರೆ.

ಇದಾದ ನಂತರ ನೇಪಾಳದ ಕಠ್ಮಂಡುವಿನ ಮೇಯರ್ ಬಲೇನ್ ಶಾ ಟ್ವೀಟ್ ಮಾಡಿ, “ಸೀತೆ ಭಾರತದ ಮಗಳು ಎಂಬ ವಿವಾದಾತ್ಮಕ ದೃಶ್ಯವನ್ನು ತೆಗೆದುಹಾಕದಿದ್ದರೆ ನೇಪಾಳದಲ್ಲಿ ಆದಿಪುರುಷ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಆ ನಂತರ ಆದಿಪುರುಷ ಚಿತ್ರತಂಡ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಆ ಸಂಭಾಷಣೆಯನ್ನು ತೆಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ದೇಶ

ಮಧ್ಯಪ್ರದೇಶದಲ್ಲಿ ಮುಸ್ಲಿಂ ಮಹಿಳೆಯೊಂದಿಗೆ ಓಡಿಹೋಗಿ ಮದುವೆಯಾಗುವ ಹಿಂದೂ ಪುರುಷನಿಗೆ 11,000 ರೂಪಾಯಿ ಬಹುಮಾನ ನೀಡಲಾಗುವುದು ಎಂದು ಹಿಂದೂ ಧರ್ಮ ಸೇನೆ ಘೋಷಿಸಿದೆ.

ಮಧ್ಯಪ್ರದೇಶದ ಬಲಪಂಥೀಯ ಗುಂಪು ಮುಸ್ಲಿಂ ಮಹಿಳೆಯೊಂದಿಗೆ ಓಡಿಹೋಗುವ ಯಾವುದೇ ಹಿಂದೂ ಪುರುಷನಿಗೆ 11,000 ರೂಪಾಯಿ ಬಹುಮಾನವನ್ನು ಘೋಷಿಸಿದೆ. ಬಲವಂತದ ಅಂತರ್ಧರ್ಮೀಯ ವಿವಾಹಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ರಾಜ್ಯದಲ್ಲಿ ಧರ್ಮದ ಸ್ವಾತಂತ್ರ್ಯಕಾಯಿದೆ 2021ರ ಹೊರತಾಗಿಯೂ ಇದು ಬರುತ್ತದೆ.

ಹಿಂದೂ ಧರ್ಮ ಸೇನೆಯ ಅಧ್ಯಕ್ಷ ಯೋಗೇಶ್ ಅಗರ್ವಾಲ್ ಅವರು ತಮ್ಮ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಹಿಂದೂ ಹುಡುಗಿಯ ‘ಲವ್ ಜಿಹಾದ್‌’ (ಒಬ್ಬ ಸತ್ತ ನಂತರ ನಡೆಸುವ ಹಿಂದೂ ಆಚರಣೆ) ವನ್ನು ಸುಗಮಗೊಳಿಸಿದರು.

“ಮುಸ್ಲಿಂ ಪುರುಷರು ಲವ್ ಜಿಹಾದ್ ಮೂಲಕ ಹಿಂದೂ ಮಹಿಳೆಯರನ್ನು ಮತಾಂತರಿಸುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ. ಹಿಂದೂಗಳಲ್ಲಿ ಈಗಾಗಲೇ ಪುರುಷರಿಗೆ ಹೋಲಿಸಿದರೆ ಮಹಿಳೆಯರ ಕೊರತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ಹಿಂದೂ ಧರ್ಮಸೇನೆ ನಮ್ಮ ಹಿಂದೂ ಹೆಣ್ಣು ಮಕ್ಕಳನ್ನು ಉಳಿಸುವುದು ಮಾತ್ರವಲ್ಲದೆ ಮುಸ್ಲಿಂ ಹೆಣ್ಣು ಮಕ್ಕಳನ್ನು ದತ್ತು ಪಡೆಯಲು ನಿರ್ಧರಿಸಿದೆ.

ಹಿಂದೂ ಧರ್ಮ ಸೇನೆ ಅಧ್ಯಕ್ಷ ಯೋಗೇಶ್ ಅಗರ್ವಾಲ್

ಹಾಗಾಗಿ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಹಿಂದೂ ಪುರುಷರಿಗೆ 11,000 ರೂಪಾಯಿ ಬಹುಮಾನ ನೀಡಿ ಪ್ರೋತ್ಸಾಹಿಸುತ್ತಿದ್ದೇವೆ” ಎಂದು ಅಗರ್ವಾಲ್ ಹೇಳಿದ್ದಾರೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರನ್ನು ಇದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂದು ಕೇಳಿದಾಗ, “ಇದು ಯಾವ ಸೇನೆ ಎಂದು ಮೊದಲು ನೋಡೋಣ” ಎಂದು ಹೇಳಿದರು.

ರಾಜ್ಯದ ನರಸಿಂಗ್‌ಪುರ ಜಿಲ್ಲೆಗೆ ಸಂಬಂಧಿತ ಪ್ರಕರಣದಲ್ಲಿ, ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ಮದುವೆಗೆ ಸಾಕ್ಷಿಯಾಗಲು ಒಪ್ಪಿದವರಿಗೆ ಸಂತಾಪ ಸೂಚಿಸುವ ಸಭೆಗಳನ್ನು ನಡೆಸುವುದಾಗಿ ಹಿಂದೂ ಗುಂಪುಗಳು ಬೆದರಿಕೆ ಹಾಕಿದ್ದರಿಂದ ಗುರುವಾರ ಸೋನಾಲಿ ರೈ ಅವರನ್ನು ಮದುವೆಯಾಗಲು ಫೈಜಲ್ ಖಾನ್ ಹಿಂದೂ ಧರ್ಮಕ್ಕೆ ಮತಾಂತರಗೊಂಡರು.

ದಂಪತಿಗಳು ವಿಶೇಷ ವಿವಾಹ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯನ್ನು ಇಬ್ಬರು ಸಾಕ್ಷಿಗಳ ಹೆಸರುಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಯಿತು.

ಭೋಪಾಲ್‌ನ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್, “ಹಿಂದೂ ಧರ್ಮ ಸೇನೆಯ ಪ್ರಸ್ತಾಪವನ್ನು ಖಂಡಿಸುತ್ತಾ ಹೇಳಿದರು: “ದೇಶವು ಸಂವಿಧಾನದ ಪ್ರಕಾರ ನಡೆಯಬೇಕು. ಅಂತರ-ಧರ್ಮೀಯ ವಿವಾಹಗಳ ವಿಷಯಕ್ಕೆ ಬಂದಾಗ, ಕೆಲವು ನಿಬಂಧನೆಗಳಿವೆ. ಜನರು ಪ್ರೀತಿಯಲ್ಲಿ ಬೀಳುವುದನ್ನು ನೀವು ತಡೆಯಲು ಸಾಧ್ಯವಿಲ್ಲ.

ಹಿಂದೂ ಧರ್ಮ ಸೇನೆ ಅಧ್ಯಕ್ಷ ಯೋಗೇಶ್ ಅಗರ್ವಾಲ್

ಆದರೆ ನಿರ್ದಿಷ್ಟ ಸಮುದಾಯಕ್ಕೆ ಬಂದಾಗ, ಲವ್ ಜಿಹಾದ್‌ನಂತಹ ಪದಗಳನ್ನು ಬಳಸಲಾಗುತ್ತದೆ. ಆದರೆ, ಹಿಂದೂ ಧರ್ಮ ಸೇನೆಯಂತಹ ಸಂಘಟನೆಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದರು.

A Hindu Man Who Elopes With A Muslim Woman In Madhya Pradesh And Marries Her Will Be Rewarded With Rs 11,000, The Hindu Dharam Sena Has Announced.

“It is a matter of grave concern that Muslim men are converting Hindu women through Love Jihad. There is already a scarcity of women in comparison to men among the Hindus. Keeping this in mind, the Hindu Dharam Sena has decided to not only save our Hindu daughters but get the Muslim daughters. So we are encouraging Hindu men with this reward of Rs 11,000 for marrying a Muslim woman,” Aggarwal said

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಹೊಸದೆಹಲಿ: ದೇಶದಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಕೇಂದ್ರ ಕಾನೂನು ಆಯೋಗ ಮತ್ತೊಮ್ಮೆ ಅಭಿಪ್ರಾಯವನ್ನು ಕೇಳಿದೆ.

‘ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಧಾರ್ಮಿಕ ಸಂಘಟನೆಗಳು 30 ದಿನಗಳೊಳಗೆ ತಮ್ಮ ಅಭಿಪ್ರಾಯವನ್ನು ದಾಖಲಿಸಿಕೊಳ್ಳಬಹುದು’ ಎಂದು ನಿನ್ನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ಬಿಜೆಪಿಯ ಪ್ರಮುಖ ಚುನಾವಣಾ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಇದು ಪ್ರಸ್ತಾಪವಾಗಿತ್ತು.

ಉತ್ತರಾಖಂಡ ಮುಂತಾದ ರಾಜ್ಯಗಳಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ಮತ್ತೆ ಏಕರೂಪ ನಾಗರಿಕ ಸಂಹಿತೆಯ ಚರ್ಚೆ ಆರಂಭವಾಗಿದೆ. 2016ರಲ್ಲಿ 21ನೇ ಕಾನೂನು ಆಯೋಗವು ಈ ಕುರಿತು ಚರ್ಚೆ ನಡೆಸಿ, ವಿವಿಧ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿ, 31 ಆಗಸ್ಟ್, 2018 ರಂದು, ತನ್ನ ಸಲಹಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು.

ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಚೌಹಾಣ್ ನೇತೃತ್ವದ ಕಾನೂನು ಆಯೋಗ ಸಲ್ಲಿಸಿದ ವರದಿಯಲ್ಲಿ, ‘ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಭಿನ್ನತೆಗಳನ್ನು ಶ್ಲಾಘಿಸುವುದು ನಮ್ಮ ದೇಶದ ಅಡಿಪಾಯವಾಗಿದೆ ಅದೇ ಸಂದರ್ಭದಲ್ಲಿ ಒಂದು ನಿರ್ದಿಷ್ಟವಾದ ಸಮುದಾಯ ಅಥವಾ ಅವಕಾಶ ವಂಚಿತರು ಇದರಿಂದ ತೊಂದರೆ ಅನುಭವಿಸಬಾರದು.

ಆಯೋಗವು ತಾರತಮ್ಯ ಕಾನೂನುಗಳನ್ನು ಪರಿಶೀಲಿಸಿದೆ. ಪ್ರಸ್ತುತ ಸ್ಥಿತಿಯಲ್ಲಿ ಸಾಮಾನ್ಯ ನಾಗರಿಕ ಸಂಹಿತೆ ಅಗತ್ಯವಿಲ್ಲ; ಅಂತಹ ಪರಿಸ್ಥಿತಿಯೂ ಇಲ್ಲ’ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೆ, ‘ಹಲವು ದೇಶಗಳು ವಿವಿಧತೆಯಲ್ಲಿ ಏಕತೆಯನ್ನು ಒಪ್ಪಿಕೊಳ್ಳಲು ಆರಂಭಿಸಿವೆ. ನಮ್ಮ ದೇಶದಲ್ಲಿ ವಿವಿಧ ಭಿನ್ನತೆಗಳು ಅಸ್ತಿತ್ವದಲ್ಲಿದೆ. ಅದನ್ನು ತಾರತಮ್ಯ ಎಂದು ತೆಗೆದುಕೊಳ್ಳಬಾರದು; ಇದು ಬಲಿಷ್ಠ ಪ್ರಜಾಪ್ರಭುತ್ವದ ಸಂಕೇತ’ ಎಂದು ಅವರ ವರದಿಯಲ್ಲಿ ತಿಳಿಸಲಾಗಿದೆ.

ಈ ಹಿನ್ನಲೆಯಲ್ಲಿ ಅಶ್ವಿನಿ ಕುಮಾರ್ ಉಪಾಧ್ಯಾಯ ಎಂಬ ವಕೀಲರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣದಲ್ಲಿ ಕಳೆದ ವರ್ಷ ಅಕ್ಟೋಬರ್ 13 ರಂದು ಕೇಂದ್ರ ಕಾನೂನು ಸಚಿವಾಲಯ ಸಲ್ಲಿಸಿರುವ ಅಫಿಡವೇಟ್‌ನಲ್ಲಿ, ‘ಸಂವಿಧಾನದ 44ನೇ ವಿಧಿಯು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸೂಚಿಸುತ್ತದೆ.

ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವಂತೆ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣತಂತ್ರದ ಉದ್ದೇಶವನ್ನು ಸಾಧಿಸುವ ಈ ಕಾಯಿದೆಯು ಅದನ್ನು ಖಚಿತಪಡಿಸುತ್ತದೆ. ಈ ಕಾಯಿದೆಯ ಪ್ರಕಾರ, ಯಾವುದೇ ತಾರತಮ್ಯವಿಲ್ಲದೆ ಇಡೀ ದೇಶ, ಎಲ್ಲಾ ಜನರಿಗೆ ಏಕರೂಪ ನಾಗರಿಕ ಸಂಹಿತೆಯನ್ನು ಖಚಿತಪಡಿಸಬೇಕು ಎಂದು ಕೇಂದ್ರ ಸರ್ಕಾರ ಬಯಸುತ್ತದೆ’ ಎಂದು ಉಲ್ಲೇಖಿಸಲಾಗಿದೆ.

ಅನೇಕ ಧರ್ಮಗಳು ಮತ್ತು ಪಂಗಡಗಳಿಗೆ ಸೇರಿದ ಜನರು, ಮದುವೆ ಮತ್ತು ಆಸ್ತಿಯಂತಹ ವಿಷಯಗಳಲ್ಲಿ ವಿಭಿನ್ನ ವೈಯಕ್ತಿಕ ಕಾನೂನುಗಳನ್ನು ಅನುಸರಿಸುವುದು ದೇಶದ ಏಕತೆಗೆ ವಿರುದ್ಧವಾಗಿದೆ. ಏಕರೂಪ ನಾಗರಿಕ ಸಂಹಿತೆ ಎಂದರೆ ಮದುವೆ, ವಿಚ್ಛೇದನ, ಜೀವನಾಂಶ, ಮಕ್ಕಳ ರಕ್ಷಣೆ ಮತ್ತು ನಿರ್ವಹಣೆ, ಕುಟುಂಬದ ಆಸ್ತಿ ಹಕ್ಕುಗಳು, ದತ್ತು ಮುಂತಾದ ಅನೇಕ ವೈಯಕ್ತಿಕ ಕಾನೂನುಗಳನ್ನು ಸೂಚಿಸುತ್ತದೆ.

ವಿವಿಧ ವೈಯಕ್ತಿಕ ಕಾಯಿದೆಗಳಲ್ಲಿ ಅಸ್ತಿತ್ವದಲ್ಲಿರುವ ನಿಬಂಧನೆಗಳನ್ನು ತಿದ್ದುಪಡಿ ಮಾಡಿ, ಸಂವಿಧಾನದ 44ನೇ ವಿಧಿಯು ಎಲ್ಲಾ ಜನರನ್ನು ಒಂದು ಸಾಮಾನ್ಯ ನೆಲೆಯಲ್ಲಿ ಒಟ್ಟಿಗೆ ತರುವುದನ್ನು ಉಲ್ಲೇಖಿಸುತ್ತದೆ. ಸಂವಿಧಾನದ ಪ್ರಕಾರ ದೇಶಕ್ಕಾಗಿ ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಮಾತ್ರ ಇದೆ. ಈ ವಿಚಾರದಲ್ಲಿ ನ್ಯಾಯಾಲಯ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆ ಅಥವಾ ಬೇಡವೇ ಎಂಬುದನ್ನು ಜನರಿಂದ ಆಯ್ಕೆಯಾದ ಪ್ರತಿನಿಧಿಗಳನ್ನು ಒಳಗೊಂಡಿರುವ ಸಂಸತ್ತು ನಿರ್ಧರಿಸುತ್ತದೆ. ಈ ಸನ್ನಿವೇಶದಲ್ಲಿ, 21ನೇ ಕಾನೂನು ಆಯೋಗವು 2018ರಲ್ಲಿ ತನ್ನ ವರದಿಯನ್ನು ಸಲ್ಲಿಸಿತು. ಆ ಕಾನೂನು ಆಯೋಗದ ಅವಧಿ ಈಗಾಗಲೇ ಮುಗಿದಿದೆ.

ಆದ್ದರಿಂದ, ಅಸ್ತಿತ್ವದಲ್ಲಿರುವ 22ನೇ ಕಾನೂನು ಆಯೋಗದ ಮೂಲಕ, ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದರ ಬಗ್ಗೆ ವಿವರವಾಗಿ ಅಧ್ಯಯನ ಮಾಡಲಾಗುತ್ತದೆ’ ಎಂದು ಹೇಳಿದೆ. ಇದರ ಆಧಾರದ ಮೇಲೆ ಇದೀಗ 22ನೇ ಕಾನೂನು ಆಯೋಗ,  ಸಾರ್ವಜನಿಕರು ಮತ್ತು ಧಾರ್ಮಿಕ ಸಂಘಟನೆಗಳ ಅಭಿಪ್ರಾಯಗಳನ್ನು ಕೇಳಿದೆ.

ಕ್ರೈಂ ರಿಪೋರ್ಟ್ಸ್

ಗಮನವನ್ನು ಬೇರೆಡೆ ಸೆಳೆದು ವಾಹನದಲ್ಲಿರುವ ಹಣವನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಆರೋಪಿತರ ಬಂಧನ. 13,97,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಿಟಿಗಾ ಕಾರು, ಅಪಾಚೆ ಹಾಗೂ ಹೋಂಡಾ ಹಾರ್ನಟ್ ಮೋಟಾರ್ ಸೈಕಲ್ ಗಳ ವಶ.

ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರುದಾರರಾದ ಚೇತನ್ ರವರು, ಜೂನ್ 6 ರಂದು ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮ್ಮ ಟೊಯೋಟಾ ಇನ್ನೋವ ಕಾರಿನಲ್ಲಿ ಇಟ್ಟಿದ್ದ ಒಟ್ಟು 15,00,000/- ರೂ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದ ಮೆರೆಗೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಜೂನ್ 6 ರಂದು ಸದರಿ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಒಟ್ಟು 13,97,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಿಟಿಗಾ ಕಾರು, ಒಂದು ಅಪಾಚೆ ಹಾಗೂ ಒಂದು ಹೋಂಡಾ ಹಾರ್ನಟ್ ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿರುತ್ತದೆ. ಸದರಿ ಆರೋಪಿತರು ಬೆಂಗಳೂರು ನಗರದ ರಾಜರಾಜೇಶ್ವರಿ ಪೊಲೀಸ್ ಠಾಣೆಯ ಈ ಹಿಂದೆಯೂ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಹಾಗೂ ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಸಹ ಇದೇ ರೀತಿ ಕಳವು ಮಾಡಿದ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ. ಪ್ರಕರಣದ ಉಳಿದ ಆರೋಪಿತರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿರುತ್ತದೆ.

ಸದರಿ ಕಾರ್ಯಚರಣೆಯನ್ನು ಬೆಂಗಳೂರು ನಗರದ ಡಿಸಿಪಿ (ಪಶ್ಚಿಮ) ಲಕ್ಷ್ಮಣ್ ಬಿ ನಿಂಬರಗಿ. ಕೆಂಗೇರಿ ಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭರತ್ ಎಸ್ ರೆಡ್ಡಿ ರವರುಗಳ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಎಂ.ಶಿವಣ್ಣ ರವರ ನೇತೃತ್ವದಲ್ಲಿ ಹಾಗೂ ಅಪರಾಧ ಪತ್ತೆದಳದ ಸಿಬ್ಬಂಧಿಯವರೊಂದಿಗೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ದೇಶ

ಪಾಟ್ನಾ: ಪ್ರಸುದಾ ಪ್ರಿಯಾ ದೇವಿಯವರು ಬಿಹಾರದ ಚಪ್ರಾ ಪಕ್ಕದ ಶ್ಯಾಮಚಕ್‌ನವರು. ತುಂಬು ತಿಂಗಳ ಗರ್ಭಿಣಿಯಾಗಿದ್ದ ಪ್ರಸುದಾ ಪ್ರಿಯಾ ದೇವಿ ಅವರನ್ನು ಸಂಬಂಧಿಕರು ಆ ಪ್ರದೇಶದ ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಿದ್ದರು. ಅಲ್ಲಿ ವೈದ್ಯರು ಅವರಿಗೆ ಹೆರಿಗೆ ಮಾಡಿದರು.

ಮಹಿಳೆ ಸುಂದರವಾದ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಆದರೆ, ಮಗುವನ್ನು ನೋಡಿದ ವೈದ್ಯರು ಆಶ್ಚರ್ಯಚಕಿತರಾದರು. ಕಾರಣ, ಆ ಮಗುವಿಗೆ 4 ಕಾಲುಗಳು, 4 ತೋಳುಗಳು, 4 ಕಿವಿಗಳು ಮತ್ತು 2 ಬೆನ್ನುಗಳಿದ್ದವು. ಅದೇ ರೀತಿ ಮಗುವಿನ ದೇಹವನ್ನು ಪರೀಕ್ಷಿಸಿದಾಗ ಮಗುವಿಗೆ 2 ಹೃದಯಗಳು ಇರುವುದು ಪತ್ತೆಯಾಗಿತು.

ಬಳಿಕ ವೈದ್ಯರು ಮಗುವನ್ನು ತೀವ್ರ ನಿಗಾ ಘಟಕಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹುಟ್ಟಿದ 20 ನಿಮಿಷದಲ್ಲಿ ಮಗು ದುರಂತ ಸಾವನ್ನಪ್ಪಿತು. ಈ ನಡುವೆ ಎರಡು ಹೃದಯ ಹಾಗೂ 4 ಕಾಲು ಹಾಗೂ ತೋಳುಗಳೊಂದಿಗೆ ಜನಿಸಿದ ಮಗುವಿನ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

ಇದನ್ನು ನೋಡಿದ ಜನರು ಆ ಮಗು ದೇವರ ಮಗು ಅದನ್ನು ನೋಡಲೇಬೇಕು ಎಂದು ಸಾಮಾಜಿಕ ಜಾಲತಾನಗಳಲ್ಲಿ ಕಾಮೆಂಟ್ ಮಾಡಿದರು. ಈ ಮಾಹಿತಿ ವೈರಲ್ ಆದ ಬಳಿಕ ಮಗು ಜನಿಸಿದ ಆಸ್ಪತ್ರೆಯ ಮುಂದೆ ಭಾರೀ ಸಂಖ್ಯೆಯಲ್ಲಿ ಜನ ಸೇರಲು ಆರಂಭಿಸಿದರು. ಇದು ಅಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಬಳಿಕ ವೈದ್ಯರು ಮಗು ಸಾವನ್ನಪ್ಪಿರುವುದಾಗಿ ತಿಳಿಸಿದ್ದರಿಂದ ಜನ ಅಲ್ಲಿಂದ ಚದುರಿದರು.

Baby born with two hearts and eight limbs in bihar chhapra hailed as miracle child

ರಾಜಕೀಯ ರಾಜ್ಯ

ಬೆಂಗಳುರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

“ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು, 15 ಲಕ್ಷ ಮೆಟ್ರಿಕ್ ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (OMSSD) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

FCI ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್‌ಸಿಐನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ.

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ.

ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ. ನಾವು ಹಣ ನೀಡಿಯೇ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನಃ ಮನವಿ ಮಾಡುವುದು ಇದ್ದೇ ಇರುತ್ತದೆ. ಆದರೆ, ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ” ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ರಾಜಕೀಯ ರಾಜ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪಕ್ಷ ತಮ್ಮ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದರಂತೆ ಅಕ್ಕಿ ವಿತರಣಾ ತಯಾರಿ ಕಾರ್ಯದಲ್ಲಿ ಸರ್ಕಾರ ತೊಡಗಿಕೊಂಡಿರುವುದು ತಿಳಿದುಬಂದಿದೆ. ಹೆಚ್ಚುವರಿಯಾಗಿ ಬೇಕಾಗಿರುವ ಅಕ್ಕಿಯನ್ನು ಭಾರತೀಯ ಆಹಾರ ನಿಗಮ (FCI) ದಲ್ಲಿ ಕೋರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.     

“ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCI ನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ.

ಕಾಂಗ್ರೆಸ್ ಗ್ಯಾರೆಂಟಿಗಳು ಜನರಿಗೆ ತಲುಪಲು ಬಿಡದಂತೆ ಕೇಂದ್ರ BJP ಸರ್ಕಾರ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಗೇಡಿನ ವಿಚಾರ. ಈಗಾಗಲೇ ರಾಜ್ಯದಲ್ಲಿ BJP 63 ಸೀಟಿಗೆ ತೃಪ್ತಿಪಡಬೇಕಾಗಿದೆ. ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ” ಎಂದು ಹೇಳಿದ್ದಾರೆ.

ದೇಶ ವಿದೇಶ

ಕೊಲಂಬೊ: ಶ್ರೀಲಂಕಾದ ಸೇನಾ ವೈದ್ಯರ ತಂಡವೊಂದು, ವಿಶ್ವದ ಅತಿ ಭಾರವಾದ ಕಿಡ್ನಿ ಕಲ್ಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. 2004ರಲ್ಲಿ ಭಾರತೀಯ ವೈದ್ಯರು ಹೊರತೆಗೆದ ಮೂತ್ರಪಿಂಡದ ಕಲ್ಲೇ ಅತಿ ದೊಡ್ಡದೆಂಬ ದಾಖಲೆ ಆಗಿತ್ತು. ಇದೀಗ ಆ ದಾಖಲೆ ಮುರಿದಿದೆ.

ಈ ತಿಂಗಳ ಆರಂಭದಲ್ಲಿ ಕೊಲಂಬೊ ಮಿಲಿಟರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಂದ ತೆಗೆಯಲಾಗಿದ್ದ ಕಲ್ಲು, 13.372 ಸೆಂ.ಮೀ ಉದ್ದ ಮತ್ತು 801 ಗ್ರಾಂ ತೂಕವಿತ್ತು ಎಂದು ಸೇನೆ ತಿಳಿಸಿದೆ. ಗಿನ್ನೆಸ್ ವಿಶ್ವ ದಾಖಲೆಗಳ ಪಟ್ಟಿಯಲ್ಲಿ, ಇದುವರೆಗೆ ತೆಗೆದ ಕಲ್ಲುಗಳಲ್ಲಿ, 2004ರಲ್ಲಿ ಭಾರತದಲ್ಲಿ ತೆಗೆದ 13 ಸೆಂ.ಮೀ ಉದ್ದದ ಕಲ್ಲೇ ದೊಡ್ಡದಾಗಿತ್ತು. ಅದೇ ರೀತಿ, 2008ರಲ್ಲಿ ಪಾಕಿಸ್ತಾನದಲ್ಲಿ ತೆಗೆದ 620 ಗ್ರಾಂ ಕಲ್ಲನ್ನು ಅತ್ಯಂತ ಭಾರವಾದ ಕಲ್ಲು ಎಂದು ಪಟ್ಟಿ ಮಾಡಲಾಗಿದೆ.

ಶ್ರೀಲಂಕಾದ ಪ್ರಸ್ತುತ ದಾಖಲೆಯನ್ನು ದೃಢಪಡಿಸಿರುವ ಗಿನ್ನೆಸ್ ವಿಶ್ವ ದಾಖಲೆ ಸಂಸ್ಥೆ, ಶ್ರೀಲಂಕಾದ ಕ್ಯಾನಿಸ್ಟಸ್ ಕೂಂಗೆಯವರ ಮೂತ್ರಪಿಂಡದಿಂದ 13.372 ಸೆಂಟಿಮೀಟರ್ (5.264 ಇಂಚು) ಅಳತೆಯ ಮೂತ್ರಪಿಂಡದ ಕಲ್ಲನ್ನು ಕಳೆದ 1ರಂದು ಹೊರತೆಗೆಯಲಾಗಿದೆ ಎಂದು ವರದಿ ಮಾಡಿದೆ. ಸೇನಾ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸುದರ್ಶನ್ ನೇತೃತ್ವದಲ್ಲಿ, ಡಾ.ಪತಿರತ್ನ ಹಾಗೂ ಡಾ.ತಮಶಾ ಪ್ರೇಮತಿಲಕ ಶಸ್ತ್ರ ಚಿಕಿತ್ಸೆ ನಡೆಸಿದ್ದರು.

SRI LANKAN ARMY DOCTORS REMOVE WORLD’S LARGEST KIDNEY STONE, SET WORLD RECORD
A group of Sri Lankan Army doctors have set a Guinness World Record by removing the world’s largest kidney stone, surpassing the previous record registered by Indian doctors in 2004. The stone, removed early this month at the Colombo Army Hospital, is 13.372 centimeters long and weighs 801 grams, a statement by the Army said on Tuesday.